ಬೆಂಗಳೂರು: ರಾಜ್ಯದ ಬೆಟ್ಟಕುರುಬ(Betta Kuruba) ಸೇರಿದಂತೆ ಒಟ್ಟು 12 ಜಾತಿಗಳನ್ನು ಪರಿಶಿಷ್ಟ ಪಂಗಡಗಳ(ST) ವರ್ಗಕ್ಕೆ ಸೇರ್ಪಡೆಗೊಳಿಸಲು ಕೇಂದ್ರ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಸಂತಸ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಬೆಟ್ಟ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿರುವ ಕೇಂದ್ರ ಸರ್ಕಾರದ ನಿರ್ಣಯವನ್ನು ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ಈ ಸಮುದಾಯದ ಬಹುಕಾಲದ ಬೇಡಿಕೆಯಂತೆ ನಮ್ಮ ಸರ್ಕಾರ ಮೈಸೂರಿನ ಬುಡಕಟ್ಟು ಅಧ್ಯಯನ ಸಂಸ್ಥೆಯಿಂದ ಕುಲಶಾಸ್ತ್ರೀಯ ಅಧ್ಯಯನ ನಡೆಸಿತ್ತು. ಅದರ ಶಿಫಾರಸಿನ ಆಧಾರದಲ್ಲಿ ಕಾಡು ಕುರುಬ ಜಾತಿ ಸೂಚಕಕ್ಕೆ ಸಮನಾರ್ಥ ಹೊಂದಿರುವ ಬೆಟ್ಟಕುರುಬರನ್ನು ಕೂಡಾ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು ಎಂದು ತಿಳಿಸಿದರು. ಇದನ್ನೂ ಓದಿ: ಬೆಟ್ಟ ಕುರುಬ ಸೇರಿದಂತೆ ಒಟ್ಟು 12 ಜಾತಿಗಳು ಎಸ್‌ಟಿ ವರ್ಗಕ್ಕೆ ಸೇರ್ಪಡೆ: ಮೋದಿಗೆ ಬಿಎಸ್‌ವೈ ಅಭಿನಂದನೆ
Advertisement
Advertisement
ಸುಮಾರು ಎರಡೂವರೆ ವರ್ಷಗಳ ನಂತರ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ. ಇಲ್ಲಿಯವರೆಗೆ ಮೀಸಲಾತಿ ಸೌಲಭ್ಯದಿಂದ ವಂಚಿತರಾಗಿದ್ದ ಬೆಟ್ಟಕುರುಬ ಸಮುದಾಯದ ಜನರು ಇನ್ನು ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಮೀಸಲಾತಿಯ ಲಾಭ ಪಡೆದು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅವಕಾಶ-ಪ್ರಾತಿನಿಧ್ಯ ಪಡೆದು ಬೆಳೆಯಲಿ ಎಂದು ಸಿದ್ದರಾಮಯ್ಯ ಆಶಿಸಿದರು. ಇದನ್ನೂ ಓದಿ: ಕೆಪಿಸಿಸಿ ಚುನಾವಣೆ- ಪಕ್ಷದ ತೀರ್ಮಾನಕ್ಕೆ ಬದ್ಧ: ಡಿಕೆಶಿ