ಚಾಮರಾಜನಗರ: ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ್ದು ಬುಧವಾರ ಬೆಳಗ್ಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಅಲ್ಲದೇ ರಾಜ್ಯದಲ್ಲಿ ಕಾವೇರಿ ಕಿಚ್ಚು ಕೂಡ ಹೆಚ್ಚಾಗಿದ್ದು, ಮಳೆಗಾಗಿ ಮಹದೇಶ್ವರನಲ್ಲಿ ಪ್ರಾರ್ಥಿಸಿದ್ದಾರೆ. ಸುಮಾರು 20 ನಿಮಿಷಗಳ ಕಾಲ ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ಈಶಾನ್ಯ ರಾಜ್ಯವನ್ನು ‘ಯುದ್ಧಭೂಮಿಯಾಗಿ’ ಪರಿವರ್ತಿಸಲಾಗಿದೆ: ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
ಸಚಿವರಾದ ಕೆ.ವೆಂಕಟೇಶ್, ಹೆಚ್.ಸಿ.ಮಹದೇವಪ್ಪ ಜೊತೆಗೂಡಿ ಬಂದ ಸಿದ್ದರಾಮಯ್ಯ ಮಹದೇಶ್ವರ ಬೆಟ್ಟದಲ್ಲಿ ಬೆಳ್ಳಿ ದಂಡ ಹಿಡಿದು, ಬೆಳ್ಳಿ ರಥ ಸೇವೆ ನೆರವೇರಿಸಿದ್ದಾರೆ. ಬಳಿಕ, ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನ ಭೇಟಿ ಮಾಡಿ, ನಂತರ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]