ಮೈಸೂರು: ಲೋಕಸಭೆ ಚುನಾವಣೆಯ (LokSabha Elections) ಬಳಿಕ ಪಕ್ಷದಲ್ಲಿ ಯಾವುದೇ ಬದಲಾವಣೆಯಿಲ್ಲ. ಮುಂದಿನ 5 ವರ್ಷವೂ ಸಿದ್ದರಾಮಯ್ಯ ಅವರೇ ಸಿಎಂ ಆಗಿರಲಿದ್ದಾರೆ ಎಂದು ನೂತನ ಸಚಿವ ಎಂ.ಬಿ ಪಾಟೀಲ್ (MB Patil), ಸಿಎಂ ಸಿದ್ದರಾಮಯ್ಯ (Siddaramaiah) ಅವರ ಪರ ಬ್ಯಾಟ್ ಬೀಸಿದ್ದಾರೆ.
ಎಂ.ಬಿ ಪಾಟೀಲ್ ದಂಪತಿಗಳಿಂದು ಮೈಸೂರಿನ ಸುತ್ತೂರು ಶ್ರೀಮಠಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಬಿಪಿ, ರಾಜ್ಯದಲ್ಲಿ ಸಿದ್ದರಾಮಯ್ಯ ಅವರೇ 5 ವರ್ಷ ಪೂರ್ಣಾವಧಿ ಸಿಎಂ ಆಗಿರಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಿದ್ದಾರೆ.
Advertisement
Advertisement
ಲೋಕಸಭೆ ಚುನಾವಣೆ ಬಳಿಕ ಯಾವುದೇ ಬದಲಾವಣೆ ಇಲ್ಲ. ಸಿಎಂ ಬದಲಾವಣೆ ಮಾಡುವ ಬಗ್ಗೆ ಎಐಸಿಸಿ ಮಟ್ಟದಲ್ಲಿ ಚರ್ಚೆಯೂ ನಡೆದಿಲ್ಲ, ಸಿದ್ದರಾಮಯ್ಯ ಅವರೇ ಮುಂದಿನ 5 ವರ್ಷ ಸಿಎಂ ಆಗಿರಲಿದ್ದಾರೆ. ಈ ಬಗ್ಗೆ ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಣ್ಣ ಬಹಳ ಕಷ್ಟಪಟ್ಟಿದ್ದಾನೆ, ನಾವ್ಯಾವತ್ತೂ ವಿಧಾನಸೌಧಕ್ಕೆ ಹೋಗಲ್ಲ: ಸಿದ್ದರಾಮಯ್ಯ ಸಹೋದರ
Advertisement
Advertisement
ಮುಂದುವರಿದು, ಬಿಜೆಪಿ ಅಧಿಕಾರವಧಿಯಲ್ಲಿ ನಡೆದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಪಿಎಸ್‌ಐ ಹಗರಣ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಹಾಗೂ ಇತರೆ ಇಲಾಖೆಗಳಲ್ಲಿ ನಡೆದ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಎಲ್ಲಾ ಹಗರಣಗಳನ್ನ ಲಾಜಿಕ್ ಎಂಡ್ ಗೆ ತೆಗೆದುಕೊಂಡು ಹೋಗುತ್ತೇವೆ. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುತ್ತೇವೆ, ನೊಂದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಬ್ಯಾರಿಕೇಡ್ ಯಾಕೆ ಹಾಕಿಲ್ಲ?- ಪೊಲೀಸರಿಗೆ ಸಿದ್ದರಾಮಯ್ಯ ಕ್ಲಾಸ್
ಕಾಂಗ್ರೆಸ್ ಗ್ರಾರಂಟಿ ಕಾರ್ಡ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೊದಲ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಚರ್ಚೆಯಾಗಿದ್ದು, ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಈ ವಿಚಾರದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.