ಕೋಲಾರ: ಸಿಎಂ ಸಿದ್ದರಾಮಯ್ಯ (Siddaramaiah) 5 ವರ್ಷಗಳ ಕಾಲ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಶಾಸಕ ಕೊತ್ತೂರು ಮಂಜುನಾಥ್ (Kothur Manjunath) ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದರು.
ಕೋಲಾರ (Kolar) ತಾಲೂಕಿನಲ್ಲಿ ಸುಮಾರು 3 ಕೋಟಿ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನರೆವೇರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2028ರಲ್ಲೂ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ. ಇದಕ್ಕೆ ಯಾರಿಂದಲೂ ಯಾವುದೇ ಅಭ್ಯಂತರವಿಲ್ಲ. ಸಿದ್ದರಾಮಯ್ಯ ರಾಜ್ಯದಲ್ಲಿ ತುಂಬಾ ಆಕ್ವೀವ್ ಆಗಿದ್ದಾರೆ, ಕೆಲಸ ಮಾಡುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಹ ಆಗುವುದಿಲ್ಲ, ಇದು ಕೇವಲ ಮಾಧ್ಯಮಗಳಲ್ಲಿ ಮಾತ್ರ ಹೇಳಲಾಗುತ್ತಿದೆ. ನಮ್ಮಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರು. ಇದನ್ನೂ ಓದಿ: Bengaluru| ಅರಮನೆ ಮೈದಾನದಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ
- Advertisement3
ಒಬ್ಬರಿಗೆ ಒಂದೇ ಹುದ್ದೆಯೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮಲ್ಲಿಕಾರ್ಜುನ ಖರ್ಗೆ, ದೊಡ್ಡವರು ಏನು ಹೇಳುತ್ತಾರೋ ಅದೇ ಅಂತಿಮ ತೀರ್ಮಾನವಾಗಲಿದೆ. ಇನ್ನು ಸಚಿವ ಸಂಪುಟ ವಿಸ್ತರಣೆ ಕುರಿತು ನನಗೆ ಗೊತ್ತಿಲ್ಲ. ನಾನು ಯಾರ ಮನೆ ಬಾಗಿಲಿಗೆ ಹೋಗುವುದಿಲ್ಲ. ಕೋಲಾರ ಜನತೆ ನನಗೆ ಕೆಲಸ ಮಾಡುವಂತೆ ಮತ ಹಾಕಿದ್ದಾರೆ. ಕೆಲಸ ಮಾಡಲು ನಾನು ಸಿದ್ಧನಾಗಿದ್ದಾನೆ. ಮಂತ್ರಿಗಿರಿ ಇರಲಿ, ಬಿಡಲಿ, ನಾನು ಮಂತ್ರಿಗಿರಿಗೆ ಆಸೆ ಪಟ್ಟಿಲ್ಲ. ಕೋಲಾರ ಕ್ಷೇತ್ರದಲ್ಲಿ ನಮ್ಮ ಜಾತಿ ಮತಗಳು ಕೇವಲ ಬೆರಳಿಕೆಯಷ್ಟೇ ಇರುವುದು. ಇವತ್ತು ಜನ ನಂಬಿ ಮತ ಹಾಕಿದ್ದಾರೆ. ಅವರ ಋಣ ತೀರಿಸುವೆ ಕೆಲಸ ಮಾಡುವೆ ಎಂದು ಹೇಳಿದರು. ಇದನ್ನೂ ಓದಿ: ದರ್ಶನ್ ಬರ್ತ್‌ಡೇ ಸಂಭ್ರಮ; ಆಪ್ತರಿಗಷ್ಟೇ ಆಹ್ವಾನ ನೀಡಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ
- Advertisement
ಉದಯಗಿರಿ ಗಲಾಟೆ ಕುರಿತು ಮಾತನಾಡಿ, ನಾನು ನನ್ನ ವಿಧಾನಸಭಾ ಕ್ಷೇತ್ರದ ಕುರಿತು ಕೇಳಿದರೆ ಹೇಳುವೆ. ಪಕ್ಕದ ಜಿಲ್ಲೆಗಳ ಬಗ್ಗೆ ಮಾತನಾಡುವುದಿಲ್ಲ. ಇನ್ನು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡಲಾಗುತ್ತಿದೆ. ಕೋಲಾರ ತಾಲೂಕಿನ ಗದ್ದೆಕಣ್ಣೂರುನಿಂದ ಗಾಂಧಿನಗರದವರೆಗೂ ಸುಮಾರು 3 ಕೋಟಿಗಳ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಾಗಿದ್ದು, ಕೂಡಲೇ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮುಂಬೈ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಇಬ್ಬರು ಕಾರ್ಮಿಕರು ಸಜೀವ ದಹನ