ಬೆಂಗಳೂರು: ಕಾಂಗ್ರೆಸ್ ಸರ್ಕಾರ (Congress Government) ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ಮತ್ತೆ ‘ಸಿಎಂ’ ಸ್ಥಾನದ ಬಗ್ಗೆ ಚರ್ಚೆ ಆರಂಭವಾಗಿದೆ. ಶನಿವಾರ ಸಚಿವ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ (HC Mahadevappa) ಸಿದ್ದರಾಮಯ್ಯ ಪರ ಮಾತನಾಡುವ ಮೂಲಕ ಬಿಜೆಪಿ (BJP) ಕೈಗೆ ಮತ್ತೆ ಅಸ್ತ್ರ ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ್ದ ಮಹದೇವಪ್ಪ, ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿ ಎನ್ನುವುದಷ್ಟೇ ಚರ್ಚೆಯಾಗಿದೆ. ಈಗ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಅವರೇ ಮುಂದುವರಿಯುತ್ತಾರೆ ಎಂದು ಹೇಳಿಕೆ ನೀಡಿದ್ದರಿಂದ ಮತ್ತೆ ಅಧಿಕಾರ ಹಂಚಿಕೆ ವಿಷಯದ ಬಗ್ಗೆ ಚರ್ಚೆ ಆರಂಭವಾಗಿದೆ. ಇದನ್ನೂ ಓದಿ: ಡಿಕೆಶಿ ಸಿಎಂ ಆಗುವಂತೆ ಆಶೀರ್ವದಿಸಿ – ವಿನಯ್ ಗುರೂಜಿಗೆ ಶಾಸಕ ತಮ್ಮಯ್ಯ ಮನವಿ
Advertisement
ಒಂದು ತಿಂಗಳ ಹಿಂದೆ ಎಂಬಿ ಪಾಟೀಲ್ (MB Patil) ಯಾವುದೇ ಅಧಿಕಾರ ಹಂಚಿಕೆಯಾಗಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಒಂದು ತಿಂಗಳ ಬಳಿಕ ಈಗ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ ಎಂದು ಹೇಳುವ ಮೂಲಕ ಎಚ್ ಸಿ ಮಹಾದೇವಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
Advertisement
ಮಹದೇವಪ್ಪ ಹೇಳಿಕೆಯ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿ ಮುಂದುವರಿಯುವ ವಿಚಾರ ಹಿಂದೆ ನಾನು ಏನು ಹೇಳಿದ್ದೇನೊ ಅದಕ್ಕೆ ನಾನು ಈಗಾಗಲೇ ಸ್ಪಷ್ಟನೆ ನೀಡಿದ್ದೇನೆ. ಅದರ ಬಗ್ಗೆ ಈಗ ಮತ್ತೆ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಕ್ಕಿ ನೀಡಲು ಸಾಧ್ಯವಿಲ್ಲ ಎಂದ 2 ರಾಜ್ಯಗಳು – ಸರ್ಕಾರಕ್ಕೆ ಮತ್ತಷ್ಟು ತಲೆನೋವು
Advertisement
Advertisement
ಮಹದೇವಪ್ಪ ಹೇಳಿಕೆ ವಿಚಾರ ಅವರಿಗೆ ಬಿಟ್ಟಿದ್ದು. ಅವರ ಹೇಳಿಕೆಯ ಬಗ್ಗೆ ನಾನು ಮಾತನಾಡುವುದಿಲ್ಲ. ಅದನ್ನ ಅವರ ಬಳಿಯಲ್ಲೇ ಕೇಳಿ. ಅಧಿಕಾರ ಹಂಚಿಕೆ ವಿಚಾರದ ಬಗ್ಗೆ ಹೈಕಮಾಂಡ್ ಯಾವ ಸೂಚನೆ ಕೊಟ್ಟಿಲ್ಲ. ಅಂದು ಕೆಸಿ ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ಏನು ಹೇಳಿದ್ದಾರೋ ಅಷ್ಟೇ ಮಾಹಿತಿ ನಮಗಿದೆ. ಈ ವಿಚಾರದ ಬಗ್ಗೆ ಮಾತನಾಡಬಾರದು ಎಂದು ಹೈಕಮಾಂಡ್ ಯಾವುದೇ ನಿರ್ದೇಶನ ಕೊಟ್ಟಿಲ್ಲ ಎಂದರು.
ಮಹದೇವಪ್ಪ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದು ಮತ್ತೆ ಸಾಬೀತಾಗಿದ್ದು, ಕಾಂಗ್ರೆಸ್ ಗೊಂದಲವನ್ನು ಬಿಜೆಪಿ ಲಾಭ ಮಾಡಿಕೊಳ್ಳಲು ಮುಂದಾಗಿದೆ. ಕೇಳ್ರಪ್ಪೋ ಕೇಳಿ ಎಂದು ಟ್ವೀಟ್ ಮೂಲಕ ಬಿಜೆಪಿ ವ್ಯಂಗ್ಯಭರಿತ ಟೀಕೆ ಮಾಡಿ ಕಾಂಗ್ರೆಸ್ಸನ್ನು ಕಾಲೆಳೆದಿದೆ.