– ರಮೇಶ್ ಜಾರಕಿಹೊಳಿ, ಡಿಕೆಶಿ ನಡುವೆ ಯಾರಿಗೋಸ್ಕರ ಕಲಹ ಆಯ್ತು ಅಂತಾ ಹೇಳಲಿ
ಮೈಸೂರು: ಸಿಎಂ ಸಿದ್ದರಾಮಯ್ಯ (Siddaramaiah) ಯಾವತ್ತೂ ಬೇರೆ ಸಮಾಜದ ನಾಯಕರ ಏಳಿಗೆ ಸಹಿಸಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ವಾಗ್ದಾಳಿ ನಡೆಸಿದರು.
Advertisement
ಮೈಸೂರಿನಲ್ಲಿ (Mysuru) ಮಾತನಾಡಿದ ಹೆಚ್ಡಿಕೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬದಲಾವಣೆ ನೋಡಿದ ಮೇಲೆ ಡಿ.ಕೆ.ಶಿವಕುಮಾರ್ ಭಾಷೆಯಲ್ಲಿ ಬದಲಾವಣೆ ಆಗ್ತಿದೆ. ಕಾಂಗ್ರೆಸ್ಗೆ ಈಗ ಕುಮಾರಸ್ವಾಮಿಯೇ ಟಾರ್ಗೆಟ್. ಮೈಸೂರು ಜಿಲ್ಲೆಯಲ್ಲಿ ಒಕ್ಕಲಿಗರಿಗೆ ರಕ್ಷಣೆ ಇಲ್ಲ ಅಂತಾ ಡಿಕೆಶಿ ಹೇಳಿದ್ದಾರೆ. ಒಕ್ಕಲಿಗರಿಗೆ ಸಿದ್ದರಾಮಯ್ಯರಿಂದ ರಕ್ಷಣೆ ಸಿಕ್ಕಿಲ್ಲ. ಅವರಿಂದ ಅನ್ಯಾಯವಾಗಿದೆ ಅಂತಾ ಶಿವಕುಮಾರ್ ಒಪ್ಪಿಕೊಂಡಿದ್ದಾರೆ. ಒಕ್ಕಲಿಗರಿಗೆ ಅವರ ಪಕ್ಷದ ಸಿಎಂ ಯಿಂದಲೆ ಅನ್ಯಾಯವಾಗಿದೆ ಅನ್ನೋದು ಶಿವಕುಮಾರ್ ಮಾತಿನ ಅರ್ಥ. ಸಿಎಂ ಸಿದ್ದರಾಮಯ್ಯ ಯಾವತ್ತೂ ಬೇರೆ ಸಮಾಜದ ನಾಯಕರ ಏಳಿಗೆ ಸಹಿಸಿಲ್ಲ. ಸಿಎಂ ಆಗಲು ತಮಗೆ ಅಡ್ಡಿಯಾಗುತ್ತಾರೆ ಅಂತಾ ಪರಮೇಶ್ವರ್ ಸೋಲಿಸಿದ್ದು ಯಾರು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಹಿಳೆಯರ ಖಾತೆಗೆ ವರ್ಷಕ್ಕೆ 1.24ಲಕ್ಷ ರೂ. ಜಮೆ: ರಾಹುಲ್ ಘೋಷಣೆ
Advertisement
Advertisement
ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಖಾಲಿ ಮಾಡದೆ ಇದ್ದರೆ ಬಿಜೆಪಿಗೆ ಹೋಗ್ತಿನಿ ಅಂತಾ ಕಾಂಗ್ರೆಸ್ ಹೈಕಮಾಂಡ್ಗೆ ಸಿದ್ದರಾಮಯ್ಯ ಬೆದರಿಸಿದ್ದರು. ಈ ಚುನಾವಣೆಯಲ್ಲಿ 85 ರಿಂದ 90 ರಷ್ಟು ಒಕ್ಕಲಿಗರು ಮೈತ್ರಿ ಪರ ಇದ್ದಾರೆ ಎಂದು ಹೇಳಿದರು.
Advertisement
ಫೋನ್ ಟ್ಯಾಪಿಂಗ್ ಆರೋಪ ಕುರಿತು ಮಾತನಾಡಿ, ನಾನೇಕೆ ಸ್ವಾಮೀಜಿ ಫೋನ್ ಟ್ಯಾಪ್ ಮಾಡಲಿ? ಅವರ ಮೇಲೆ ಅನುಮಾನ ಇದ್ದಿದ್ದರೆ ಅವರ ಜೊತೆ ಯಾಕೆ ನಾನು ಅಮೆರಿಕಾಕ್ಕೆ ಹೋಗ್ತಿದ್ದೆ. ಯಾರು ನನಗೆ ಸರ್ಕಾರ ಬೀಳುತ್ತೆ ಅಂತಾ ಹೇಳಿರಲಿಲ್ಲ. ನೀವು ಆರಾಮಾಗಿ ಹೋಗಿ ಬನ್ನಿ ಅಂತಾ ಹೇಳಿ ಕಳುಹಿಸಿದ್ರು. ನಾನು ಯಾರ ಫೋನ್ ಕೂಡ ಟ್ಯಾಪ್ ಮಾಡಿಸಿಲ್ಲ. ಮೈತ್ರಿ ಸರ್ಕಾರ ಶುರವಾದ 15 ದಿನಕ್ಕೆ ರಮೇಶ್ ಜಾರಕಿಹೊಳಿ, ಶಿವಕುಮಾರ್ ನಡುವೆ ಯಾರಿಗೋಸ್ಕರ ಕಲಹ ಆರಂಭವಾಯ್ತು ಹೇಳಲಿ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸಿಎಎ ರದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಮಾಸಿಕ ವಿದ್ಯಾರ್ಥಿ ವೇತನ, 10 ಉಚಿತ ಎಲ್ಪಿಜಿ ಸಿಲಿಂಡರ್ – ಟಿಎಂಸಿ ಪ್ರಣಾಳಿಕೆಯಲ್ಲಿ ಘೋಷಣೆ
ಸರ್ಕಾರ ರಚನೆಯಾದ ಆರಂಭದಲ್ಲೆ ಅವರಿಬ್ಬರ ನಡುವೆ ಕಲಹ ಯಾಕೆ ಆಯ್ತು? ನನ್ನ ಮೇಲೆ 150 ಕೋಟಿ ರೂ. ಲಂಚದ ಆರೋಪ ಮಾಡಿದ ಜನಾರ್ದನ ರೆಡ್ಡಿ ಬಗ್ಗೆಯೆ ತಲೆ ಕೆಡಿಸಿಕೊಳ್ಳಲಿಲ್ಲ. ಬೇರೆಯವರ ಫೋನ್ಗಳನ್ನು ನಾನು ಯಾಕೆ ಟ್ಯಾಪ್ ಮಾಡಲಿ. 1996 ರಲ್ಲಿ ಚುನಾವಣೆಗೆ ನಿಂತಾಗ ಸಿಂಧ್ಯಾ ಅವರಿಗೆ ನಾನು ಕಪಾಳಮೋಕ್ಷ ಮಾಡಿದೆ ಅಂತಾ ಸುಳ್ಳು ಸುದ್ದಿ ಹಬ್ಬಿಸಿದ್ರು. ಈ ಥರ ರಾಜಕಾರಣ ಶಿವಕುಮಾರ್ಗೆ ರಕ್ತಗತವಾಗಿ ಬಂದಿದೆ. ಸುಳ್ಳು ಹೇಳಿಕೊಂಡೆ ರಾಜಕಾರಣ ಮಾಡಿದ್ದಾರೆ. ಒಳ್ಳೆಯ ಸ್ನೇಹಿತ ಅಂತಾ ಈಗ ಶಿವಕುಮಾರ್ ಹೇಳಿದ್ದಾರೆ. ಅವರಿಗೆ ಧನ್ಯವಾದ. ಸ್ವಲ್ಪ ದಿನ ಇವೆಲ್ಲಾ ನಿಂತು ಹೋಗುತ್ತೆ. ಚುನಾವಣೆ ಮುಗಿದ ಮೇಲೆ ತಣ್ಣಗಾಗುತ್ತೆ ಎಂದು ಟಾಂಗ್ ಕೊಟ್ಟರು.
ರಾಹುಲ್ ಗಾಂಧಿಯ ಮುಕ್ಕಾಲು ಗಂಟೆ ಭಾಷಣದಿಂದ ಯಾವ ಪರಿವರ್ತನೆಯೂ ಆಗಲ್ಲ. ನನ್ನ ಸೋಲು ಗೆಲುವು ಶಿವಕುಮಾರ್ ಕೈಲಿ ಇದ್ಯಾ? ಹಣದ ದುರಹಂಕಾರ, ದರ್ಪದಿಂದ ನಾನು ಸೋಲ್ತಿನಿ ಅಂತಾ ಹೇಳ್ತಿದ್ದಾರೆ. ಹಣದಿಂದ ಮಂಡ್ಯದ ಜನರನ್ನು ಶಿವಕುಮಾರ್ ಕೊಡು ಕೊಳ್ಳಲು ಆಗಲ್ಲ ಎಂದು ತಿರುಗೇಟು ನೀಡಿದರು.