ಬೀದರ್: ಸಿದ್ದರಾಮಯ್ಯ (Siddaramaiah) ಯಾವುದೇ ಕಾರಣಕ್ಕೂ ಡಿಕೆ ಶಿವಕುಮಾರ್ (DK Shivakumar) ಅವರನ್ನು ಮುಖ್ಯಮಂತ್ರಿಯಾಗಲು ಬಿಡುವುದಿಲ್ಲ. ಜೊತೆಗೆ ಲೋಕಸಭಾ ಚುನಾವಣೆಯ ಬಳಿಕ ಈ ಸರ್ಕಾರದಲ್ಲಿ ಅಸ್ಥಿರತೆಯ ವಾತಾವರಣ ನಿರ್ಮಾಣವಾಗಲಿದೆ ಎಂದು ಕೇಂದ್ರ ಸಚಿವ ಭಗವಂತ್ ಖೂಬಾ (Bhagwanth Khuba) ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೀದರ್‌ನಲ್ಲಿ (Bidar) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನಗೆ 5 ವರ್ಷದ ಸಲುವಾಗಿ ರಾಜ್ಯದ ಜನತೆ ಆಯ್ಕೆ ಮಾಡಿದ್ದಾರೆ, ನಾನು ಮುಖ್ಯಮಂತ್ರಿಯಾಗಿ ಇರುತ್ತೇನೆ ಎಂದು ಸಿದ್ದರಾಮಯ್ಯನವರು ಸ್ಪಷ್ಟವಾಗಿ ಹೇಳಬೇಕು. ಇಲ್ಲವಾದರೆ ಇಬ್ಬರ ಮಧ್ಯ ಅಧಿಕಾರ ಹಂಚಿಕೆಯಾಗಿದೆ ಎಂದು ಸಿಎಂ ಹೇಳಲಿ ಎಂದು ಸಿದ್ದರಾಮಯ್ಯನವರಿಗೆ ಸವಾಲು ಹಾಕಿದರು. ಅಲ್ಲದೇ ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಅವರನ್ನು ಎಷ್ಟು ದಿನ ಸಿಎಂ ಆಗಿ ಇರಲು ಬಿಡುತ್ತೀರಿ ಎಂದು ಹೇಳಬೇಕು. ಇಬ್ಬರ ಮಧ್ಯೆ ಯಾವ ರೀತಿಯ ಒಪ್ಪಂದ ಆಗಿದೆ ಎಂದು ಸಾರ್ವಜನಿಕವಾಗಿ ಹೇಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಮಹಿಳೆಯರ `ಶಕ್ತಿ’ಗೆ ಶೀಘ್ರವೇ ಹೊಸ ಮಾರ್ಗಸೂಚಿ – ವಾರಕ್ಕೆ ಮುಂಚೆ ಬುಕ್ಕಿಂಗ್ ಕಡ್ಡಾಯ ಸಾಧ್ಯತೆ
Advertisement
Advertisement
ಸಿಎಂ ಸಿದ್ದರಾಮಯ್ಯ ಅಕ್ಕಿಗಾಗಿ ಕೇಂದ್ರದ ಕಡೆ ಬೊಟ್ಟು ಮಾಡಿ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳುವ ನೇತಾರ. 5 ಗ್ಯಾರಂಟಿಗಳ ಮೂಲಕ ಷರತ್ತುಗಳು ಇಲ್ಲದೆ ಗ್ಯಾರಂಟಿ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಅವರಿಗೆ ಗೊತ್ತಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಗೆ ಬದ್ಧತೆ ಇದ್ದರೆ ಅಕ್ಕಿಗಾಗಿ ಕೇಂದ್ರದ ಕಡೆ ಬೊಟ್ಟು ಮಾಡುವುದನ್ನು ಬಿಡಿ ಎಂದು ಚಾಟಿ ಬೀಸಿದರು. ಇದನ್ನೂ ಓದಿ: ಮೋದಿ ಮುಂದೆ ಮಾತಾಡೋ ಧಮ್ ಇದ್ದಿದ್ದು ಬಿಎಸ್‌ವೈಗೆ ಮಾತ್ರ – ರಾಮಲಿಂಗಾ ರೆಡ್ಡಿ
Advertisement
ಚುನಾವಣೆ ಪೂರ್ವದಲ್ಲಿ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದೀರಿ. ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಪ್ರತಿ ಕುಟುಂಬಗಳಿಗೆ ನೀಡುತ್ತಿದ್ದು, ನಿಮ್ಮ ಗ್ಯಾರಂಟಿಯಂತೆ ಇನ್ನೂ 10 ಕೆಜಿ ಹೆಚ್ಚಿಸಿ. ಸಿದ್ದರಾಮಯ್ಯನವರು ಯಾವ ರಾಜ್ಯದಿಂದಾರೂ ಅಕ್ಕಿ ಹೊಂದಿಸಲಿ. ಆದರೆ ರಾಜ್ಯದ ಪ್ರತಿ ಕುಟುಂಬಗಳಿಗೆ ಒಟ್ಟು 15 ಕೆಜಿ ಅಕ್ಕಿ ನೀಡಲಿ ಎಂದು ಹೇಳಿದರು. ಇದನ್ನೂ ಓದಿ: ಕೋಮು ಗಲಭೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ಪರಿಹಾರ – ಶೀಘ್ರದಲ್ಲೇ ಸರ್ಕಾರಿ ಉದ್ಯೋಗ
Advertisement
ರಾಜ್ಯ ಸರ್ಕಾರ ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿ ಮಾಡಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಜೊತೆಗೆ ಓಲೈಕೆ ರಾಜಕಾರಣ ಮಾಡಿ ಸರ್ಕಾರದ ಸ್ಥಿರತೆಯನ್ನು ಕಾಪಾಡಿಕೊಳ್ಳುತ್ತಿದೆ. ಒತ್ತಾಯಪೂರ್ವಕವಾಗಿ ಮತಾಂತರ ನಿಷೇಧ ಎನ್ನವುದು ಕಾಯ್ದೆಯಲ್ಲಿ ಇದೆ. ಹಾಗಿದ್ದರೆ ಓಲೈಕೆ ಮಾಡಿ ಮತಾಂತರ ಕಾಯ್ದೆ ವಾಪಸ್ ಪಡೆಯುವ ದುರುದ್ದೇಶ ಇದೆಯಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಬೆಂಗ್ಳೂರಲ್ಲಿ ಮತ್ತೆ ಬುಲ್ಡೋಜರ್ ಸದ್ದು – ರಾಜಕಾಲುವೆ ಒತ್ತುವರಿ ತೆರವು ವೇಳೆ ಭಾರೀ ಹೈಡ್ರಾಮಾ
ಕೆಟ್ಟ ಆಲೋಚನೆಯಿಂದ ದೇಶವನ್ನು ಜೋಡಿಸುವ ಕೆಲಸ ಮಾಡುತ್ತಿಲ್ಲ, ಒಡೆಯುವ ಕೆಲಸವನ್ನು ಮಾಡುತ್ತಿದ್ದೀರಿ. ರಾಹುಲ್ ಗಾಂಧಿ ಇಚ್ಛೆಯಂತೆ ರಾಜ್ಯವನ್ನು ಮತ್ತೊಮ್ಮೆ ಅಶಾಂತಿಗೆ ತಳ್ಳುತ್ತೀದ್ದೀರಿ. ಸರ್ಕಾರ ಬದಲಾವಣೆಯಾಗುವುದು ಹೊಸದೇನಲ್ಲ. ಆದರೆ ಹಿಂದಿನ ಸರ್ಕಾರ ಮಾಡಿದ ನಿರ್ಣಯಗಳನ್ನು ರಾಜಕೀಯ ದ್ವೇಷ ಸಾಧಿಸಲು ಹೊರಟಿರುವುದು ಮುಂದಿನ ದಿನಗಳಲ್ಲಿ ಜನ ಛೀಮಾರಿ ಹಾಕುತ್ತಾರೆ. ಪಠ್ಯ ಪುಸ್ತಕಗಳಲ್ಲಿ ಮಹಾನ್ ನಾಯರ ಜೀವನ ಚರಿತ್ರೆಯನ್ನು ಯುವ ಪೀಳಿಗೆಗೆ ಹೇಳಲು ಮಾಡಿದ್ದೆವು. ಆದರೆ ದೇಶ ಅಖಂಡವಾಗಿ ಇರುವುದು ಅವರಿಗೆ ಬೇಡವಾಗಿದೆ. ಹೀಗಾಗಿ ದೇಶದಲ್ಲಿ ಸಮಾಜವನ್ನು ಛಿದ್ರ ಛಿದ್ರ ಮಾಡಿ ತಮ್ಮ ಬೇಳೆ ಬೇಯಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಸರ್ಕಾರಕ್ಕೆ ಶುಭ ಶಕುನವೇಕೋ ‘ಕೈ’ ಹಿಡಿದಂತಿಲ್ಲ- ವಿಜಯೇಂದ್ರ ಹೀಗಂದಿದ್ಯಾಕೆ..?