ಬೆಂಗಳೂರು: ಸಿದ್ದರಾಮಯ್ಯ ಅಧಿಕಾರಕ್ಕೆ ಬರಲ್ಲ. ಮತಾಂತರ ನಿಷೇಧ ಮಸೂದೆ ರದ್ದುಗೊಳಿಸಲು ಆಗುವುದಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ವ್ಯಂಗ್ಯವಾಡಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮತಾಂತರ ನಿಷೇಧ ಕಾಯ್ದೆಯನ್ನು ಕಿತ್ತೆಸೆಯುತ್ತೇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಒಂದೇ ವಾರದಲ್ಲಿ ಮತಾಂತರ ವಿಧೇಯಕ ಹಿಂಪಡೆಯುತ್ತೇವೆ. ಮೊದಲ ಅಧಿವೇಶನದಲ್ಲೇ ಮಸೂದೆ ಹಿಂಪಡೆದು ಎಸೆಯುತ್ತೇವೆ ಎಂದು ಸೋಮವಾರ ಹೇಳಿದ್ದರು.
Advertisement
Advertisement
ಇದೀಗ ಈ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಸುಧಾಕರ್, ಅವರು ಅಧಿಕಾರಕ್ಕೆ ಬರಲ್ಲ, ಅದಾಗಲ್ಲ ಅದಕ್ಕೇ ಹಾಗೇ ಹೇಳುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆಯನ್ನು ಕಿತ್ತೆಸೆಯುತ್ತೇವೆ: ಸಿದ್ದರಾಮಯ್ಯ
Advertisement
Advertisement
ನೈಟ್ ಕರ್ಫ್ಯೂ ವಿಚಾರವಾಗಿ ಹತ್ತು ದಿನಗಳವರೆಗೂ ಮಾರ್ಗಸೂಚಿ ಬಿಡುಗಡೆ ಮಾಡಿದ್ದೇವೆ. ಇದರ ಪಾಲನೆ ಒಳ್ಳೆ ರೀತಿಯಲ್ಲಿ ಆಗಬೇಕು. ಜನರು ಸಹಕಾರ ಕೊಡಬೇಕು. ಹತ್ತು ದಿನಗಳ ಕಾಲ ಪರಿಸ್ಥಿತಿ ಗಮನಿಸುತ್ತೇವೆ. ನಂತರ ಸಿಎಂ, ತಜ್ಞರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು. ಇನ್ನೂ ನೈಟ್ ಕರ್ಫ್ಯೂಗೆ ವಿರೋಧ ವ್ಯಕ್ತವಾಗುತ್ತಿರುವ ವಿಚಾರವಾಗಿ ಎಲ್ಲ ಸಾಧಕ, ಬಾಧಕ ನೋಡಿಕೊಂಡೇ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಪದೇ, ಪದೇ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಎರಡನೇ ಅಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಆಗಿತ್ತು. ಯಾಕೆ ಲಾಕ್‍ಡೌನ್ ಆಗಿತ್ತು ಎಂದು ತಿಳಿದುಕೊಳ್ಳಬೇಕು ಎಂದು ಹೇಳಿದ್ದಾರೆ.
ಇದೇ ವೇಳೆ 15-18 ವಯಸ್ಸಿನ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆಗೆ ಕೇಂದ್ರ ಸೂಚನೆ ನೀಡಿದೆ. ನಮ್ಮಲ್ಲಿ ಕೋವ್ಯಾಕ್ಸಿನ್ ಲಸಿಕೆ ಅಗತ್ಯದಷ್ಟು ಸಂಗ್ರಹ ಇಲ್ಲ. ಕೇಂದ್ರದ ಎದುರು ಕೋವ್ಯಾಕ್ಸಿನ್‍ಗೆ ಬೇಡಿಕೆ ಇಡುತ್ತೇವೆ. ಕೇಂದ್ರದಿಂದ ಕೋವ್ಯಾಕ್ಸಿನ್ ಸರಾಗವಾಗಿ ಪೂರೈಕೆ ಆಗುವ ವಿಶ್ವಾಸ ಇದೆ. 43 ಲಕ್ಷ ಮಕ್ಕಳಿಗೆ ರಾಜ್ಯದಲ್ಲಿ ಕೋವ್ಯಾಕ್ಸಿನ್ ಲಸಿಕೆ ಹಾಕಲಾಗುತ್ತದೆ. ಜನವರಿ 3 ರಿಂದ 15-18 ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬುಕ್ ಮಾಡಿದ್ದು 1 ಲಕ್ಷ ರೂ. ಐಫೋನ್ ಆದ್ರೆ ಬಂದಿದ್ದು ಚಾಕೊಲೇಟ್
ಹುಬ್ಬಳ್ಳಿಯಲ್ಲಿ ಎರಡು ದಿನ ಸಭೆ ಇದೆ. ಈ ಸಭೇಯಲ್ಲಿ ಸಚಿವರು, ಶಾಸಕರು, ಪಕ್ಷದ ಪದಾಧಿಕಾರಿಗಳು ಭಾಗವಹಿಸುತ್ತಾರೆ. ಮುಂಬರುವ ಸಾರ್ವತ್ರಿಕ, ಸ್ಥಳೀಯ ಸಂಸ್ಥೆಗಳ ಚುನಾವಣೆ, ಬಿಬಿಎಂಪಿ ಚುನಾವಣೆ, ಪರಿಷತ್ ಫಲಿತಾಂಶಗಳ ಬಗ್ಗೆ ಚರ್ಚೆ ನಡೆಯುತ್ತದೆ ಎಂದಿದ್ದಾರೆ.