ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅಧಿಕಾರ ಕೊಡಲ್ಲ, ಡಿ.ಕೆ.ಶಿವಕುಮಾರ್ (DK Shivakumar) ದೇವಸ್ಥಾನ ಬಿಡಲ್ಲ. ಕರ್ನಾಟಕದಲ್ಲಿ ಇಷ್ಟೇ ನಡೆಯುತ್ತಿರೋದು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R Ashok) ವ್ಯಂಗ್ಯವಾಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಗ್ಯಾಂಗ್ ಡಿನ್ನರ್ ಪಾಲಿಟಿಕ್ಸ್ ಮಾಡುತ್ತಿದೆ. ಡಿ.ಕೆ.ಶಿವಕುಮಾರ್ ಟೆಂಪಲ್ ರನ್ ಮಾಡುತ್ತಿದ್ದಾರೆ. ಅಧಿವೇಶನಕ್ಕೆ ಡಿ.ಕೆ.ಶಿವಕುಮಾರ್ ಬರುತ್ತಿರಲಿಲ್ಲ. ಅಧಿವೇಶನ ನಡೆಯುತ್ತಿರುವಾಗ ಜನಪ್ರತಿನಿಧಿಯಾಗಿ ಕೆಲಸ ಮಾಡಬೇಕಿತ್ತು. ಅದು ಬಿಟ್ಟು ಜನರ ತೆರಿಗೆ ಹಣದಲ್ಲಿ ದೇವಸ್ಥಾನ ರೌಂಡ್ ಹಾಕುತ್ತಿದ್ದರು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಫೆಬ್ರವರಿ, ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯ್ತು? ಅತಿದೊಡ್ಡ ಸ್ಕ್ಯಾಂಡಲ್: ಅಶೋಕ್
ಈಗ ಸಾಮಾನ್ಯ ಕಾರ್ಯಕರ್ತನಾಗಿ ಇರುತ್ತೇನೆ ಅಂತಿದ್ದಾರೆ ಅದ್ಯಾಕೆ? ಹಾಗಾದ್ರೆ ರಾಜೀನಾಮೆ ಕೊಟ್ಟು ಇರಲಿ ಎಂದು ಡಿಕೆಶಿಗೆ ಟಕ್ಕರ್ ಕೊಟ್ಟರು. ಇನ್ನು
ಕರ್ನಾಟಕದ ಕೆಲವು ಕಡೆಗಳಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಚುನಾವಣೆ ನಡೆದಿದೆ. ಎಲ್ಲಾ ಕಡೆ ಬಿಜೆಪಿ ಹೆಚ್ಚು ಸ್ಥಾನ ಗೆದ್ದಿದ್ದೆ. ಕಾಂಗ್ರೆಸ್ ಸರ್ಕಾರ ತೊಲಗುವ ಮುನ್ಸೂಚನೆ ಇದು. ಇವರು ಇದೇ ರೀತಿ ಕಾಂಗ್ರೆಸ್‌ನಲ್ಲಿ ಕಿತ್ತಾಡುತ್ತಿದ್ದರೆ ಮನೆಗೆ ಹೋಗೋದು ಗ್ಯಾರಂಟಿ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ – ರೊದ್ದಂ ಜ್ಯುವೆಲ್ಸ್ ಮೇಲೆ ಕೇರಳ ಎಸ್‌ಐಟಿ ದಾಳಿ
ಕೆಎನ್ ರಾಜಣ್ಣರೇ ಕಾಂಗ್ರೆಸ್‌ಗೆ ಕೊಳ್ಳಿ ಇಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಡಿಕೆಶಿ ಫೇಲ್ಯೂರ್ ಅಂತಾ ಪತ್ರ ಬರೆದಿದ್ದಾರೆ. ಕೇಂದ್ರದವರು ಕೂಡ ನಿಮ್ಮ ಸಹವಾಸ ಬೇಡ ಎಂದಿದ್ದಾರೆ. ತೀರ್ಮಾನ ತೆಗೆದುಕೊಳ್ಳದ ವೀಕ್ ನಾಯಕತ್ವ ಅಂದರೆ ಕಾಂಗ್ರೆಸ್ ನಾಯಕತ್ವ ಎಂದು ಟೀಕಿಸಿದರು. ಇದನ್ನೂ ಓದಿ: ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರು ನಿಗದಿ ಮಾಡಲು ಡಿಕೆಶಿ ಮನವಿ


