ಬಳ್ಳಾರಿ: ಸಿದ್ದರಾಮಯ್ಯ (Siddaramaiah) ರಾಜ್ಯದ ಯಾವ ಕ್ಷೇತ್ರದಲ್ಲೂ ಗೆಲ್ಲುವುದಿಲ್ಲ. ಅವರು ಪಾಕಿಸ್ತಾನ (Pakistan) ಅಥವಾ ಅಫ್ಘಾನಿಸ್ತಾನ (Afghanistan), ಬಾಂಗ್ಲದೇಶಕ್ಕೆ (Bangladesh) ಹೋದರೆ ಒಳ್ಳೆಯದು ಎಂದು ಪದೇ ಪದೇ ಕ್ಷೇತ್ರ ಹುಡುಕಾಟ ನಡೆಸುತ್ತಿರುವ ಕುರಿತು ಸಚಿವ ಆರ್.ಅಶೋಕ್ (R.Ashok) ಸಿದ್ದರಾಮಯ್ಯನವರ ಕಾಲೆಳೆದರು.
ಬಳ್ಳಾರಿಯಲ್ಲಿ (Ballari) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 224 ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಲು ಚಾನ್ಸೇ ಇಲ್ಲ. ಯಾಕೆಂದರೆ ಅವರು ಎಲ್ಲಿ ಹೋದರೂ ಸೋಲುತ್ತಾರೆ, ಯಾವುದೇ ಒಂದು ಕ್ಷೇತ್ರದಲ್ಲಿ ನಿಂತಿಲ್ಲ. ಸಿದ್ದರಾಮಯ್ಯ ಈಗಾಗಲೇ ವರುಣ ಹಾಗೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದಾರೆ. ಈಗ ಬಾದಾಮಿ (Badami) ಬಿಟ್ಟು ಓಡಿ ಬಂದಿದ್ದಾರೆ. ಅವರು ಕೋಲಾರದಲ್ಲಿ (Kolar) ಗೆಲ್ಲುವುದೂ ಕಷ್ಟವಿದೆ. ಆದ್ದರಿಂದ ಕರ್ನಾಟಕದ 224 ಕ್ಷೇತ್ರಗಳು ಸಿದ್ದರಾಮಯ್ಯನವರಿಗೆ ಒಳ್ಳೆಯದಲ್ಲ. ಸಿದ್ದರಾಮಯ್ಯ ಬೇರೆ ರಾಜ್ಯ ಅಥವಾ ಬೇರೆ ದೇಶವನ್ನು ನೋಡಿಕೊಂಡರೆ ಒಳ್ಳೆಯದು. ಇಲ್ಲಿ ಅವರನ್ನು ಎಲ್ಲಿಯೂ ನಿಲ್ಲಲು ಬಿಡುವುದಿಲ್ಲ. ಅವರ ಪಕ್ಷದವರೇ ಅವರಿಗೆ ವಿಲನ್. ಡಿ.ಕೆ.ಶಿವಕುಮಾರ್ (D.K.Shivakumar) ಅವರನ್ನು ಸೋಲಿಸುತ್ತಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಸಿಸ್ಟರ್ ಸಿಟಿ ಹಗರಣ – ನಿತ್ಯಾನಂದನ ನಕಲಿ ದೇಶದೊಂದಿಗೆ ಅಮೆರಿಕದ 30 ನಗರಗಳು ಒಪ್ಪಂದ!
ರಾಜ್ಯದಲ್ಲಿ ವಿಜಯ ಸಂಕಲ್ಪ ಯಾತ್ರೆ (Vijaya Sankalpa Yatra) ಮೂಲಕ ಜನ ಜಾಗೃತಿಯನ್ನು ಮಾಡುತ್ತಿದ್ದೇವೆ. 224 ಕ್ಷೇತ್ರಗಳಲ್ಲಿ ರಿಚ್ ಆಗಿರುವ ಪಕ್ಷ ಯಾವುದಾದರೂ ಇದ್ದರೆ ಅದು ಬಿಜೆಪಿ (BJP) ಮಾತ್ರ. ಯಾಕೆಂದರೆ ನಮ್ಮಲ್ಲಿ ಬಹಳಷ್ಟು ಜನ ರಾಜ್ಯ ಹಾಗೂ ಕೇಂದ್ರ ನಾಯಕರಿದ್ದಾರೆ. ಆದರೆ ಕಾಂಗ್ರೆಸ್‌ಗೆ (Congress) ಕೇವಲ ಇಬ್ಬರು ಮಾತ್ರ ನಾಯಕರು. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಬಿಟ್ಟರೆ ಕಾಂಗ್ರೆಸ್ ಪಕ್ಷಕ್ಕೆ ಮೂರನೇ ಲೀಡರಿಲ್ಲ. ಅವರು 224 ಕ್ಷೇತ್ರಕ್ಕೆ ಹೋಗಲಿಲ್ಲ. ಟಿಕೆಟ್ ಹಂಚಿಕೆಯಲ್ಲಿ ನಿರತರಾಗಿದ್ದಾರೆ. ಕಾಂಗ್ರೆಸ್ ಪಕ್ಷದವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಮತ್ತೊಮ್ಮೆ ಅಧಿಕಾರದ ರುಚಿ ನೋಡಬೇಕೆಂದು ಕನಸು ಕಾಣುತ್ತಿದ್ದಾರೆ. 50 ವರ್ಷ ಆಡಳಿತ ಮಾಡಿದ್ದಾರೆ. ಆದ್ದರಿಂದ ಜನ ಇವರ 50 ವರ್ಷ ನೋಡಿ ಬದಲಾವಣೆ ಮಾಡುತ್ತಾರೆ ಎಂದರು. ಇದನ್ನೂ ಓದಿ: ಜೆಡಿಎಸ್ ಒಂದು ಪುಟ್ಗೋಸಿ ಪಕ್ಷ – ಮಾಜಿ ಸಚಿವ ನರೇಂದ್ರ ಸ್ವಾಮಿ ಅವಾಜ್
ಸೋಮಣ್ಣನವರ (V.Somanna) ಸಿಟ್ಟು 100 ಪರ್ಸೆಂಟ್ ಶಮನವಾಗಿದೆ. ಯಾವುದೇ ಸಂದರ್ಭದಲ್ಲೂ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಅದೇ ರೀತಿ ಕೂಡ್ಲಿಗಿ ಶಾಸಕ ಗೋಪಾಲಕೃಷ್ಣ (N.Y.Gopalakrishna) ಅವರು ಕೂಡಾ ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: Bengaluru-Mysuru Expressway ನಲ್ಲಿ ಬೇಸಿಗೆ ಮಳೆಗೇ ಅವಾಂತರ- ವಾಹನ ಸವಾರರ ಪರದಾಟ