-ಸಿದ್ದರಾಮಯ್ಯ ಅವರೊಂದು ಶಕ್ತಿ
ರಾಯಚೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣೆಗೆ ರಾಜ್ಯದ ಯಾವ ಮೂಲೆಯಲ್ಲಿ ನಿಂತರೂ ಗೆಲ್ಲುತ್ತಾರೆ ಎಂದು ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಭರವಸೆ ವ್ಯಕ್ತಪಡಿಸಿದ್ದಾರೆ.
Advertisement
ಸಿದ್ದರಾಮಯ್ಯ ಬದಾಮಿಯಲ್ಲಿ ಸ್ಪರ್ಧೆಗೆ ಚಿಮ್ಮನಕಟ್ಟಿ ವಿರೋಧ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಕೂಡ ಸಿದ್ದರಾಮಯ್ಯ ಗೆಲ್ಲುತ್ತಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ನೀಡಿದ ಆಡಳಿತವೇ ಇದಕ್ಕೆ ಕಾರಣ. ರಾಜ್ಯದ ಕಟ್ಟ ಕಡೆಯ ಪ್ರಜೆಗೂ ಅವರ ಕೆಲಸ ತಲುಪಿದೆ. ಕಳೆದ 2018ರಲ್ಲಿ ಕೊಪ್ಪಳ, ಕುಷ್ಟಗಿಯಲ್ಲಿ ಸ್ಪರ್ಧೆ ಮಾಡುವಂತೆ ನಾನೇ ಕೇಳಿಕೊಂಡಿದ್ದೆ ಅದೇ ಸಮಯಕ್ಕೆ ಇಡೀ ಬದಾಮಿ ಜನರು ಸಿದ್ದರಾಮಯ್ಯ ಸ್ಪರ್ಧೆಗೆ ಒತ್ತಾಯ ಮಾಡಿದ್ದರು. ಹಾಗಾಗಿ ಬಾದಾಮಿಯಲ್ಲಿ ಸಿದ್ದರಾಮಯ್ಯ ಸ್ಪರ್ದಿಸಿದ್ದರು ಎಂದರು. ಇದನ್ನೂ ಓದಿ: ಕಾಂಗ್ರೆಸ್ ಸೋಲು ಖಚಿತ: ರಮೇಶ್ ಜಾರಕಿಹೊಳಿ
Advertisement
Advertisement
ಕೊಪ್ಪಳಕ್ಕೆ ಸಿದ್ದರಾಮಯ್ಯ ಬರುವುದಾದರೆ ಕೊಪ್ಪಳವನ್ನು ಬಿಟ್ಟು ಕೊಡುವುದರ ಜೊತೆಗೆ ಅತ್ಯಂತ ಹೆಚ್ಚು ಅಂತರದಿಂದ ಗೆಲ್ಲಿಸುತ್ತೇವೆ. ನಾನು ಸಂತೋಷದಿಂದ ಕ್ಷೇತ್ರ ಬಿಟ್ಟು ಕೊಡುತ್ತೇನೆ. ಬರೀ ನಾನು ಅಷ್ಟೇ ಅಲ್ಲ. ಬೈರತಿ ಹೆಬ್ಬಾಳಕ್ಕೆ ಬನ್ನಿ ಎಂದಿದ್ದಾರೆ. ಜಮೀರ್ ಅಹಮದ್ ಕೂಡ ಬೇಡಿಕೆ ಇಟ್ಟಿದ್ದಾರೆ ಸಿದ್ದರಾಮಯ್ಯ ಅವರೊಂದು ಶಕ್ತಿ. ಅವರು ಸ್ಪರ್ಧೆ ಮಾಡುವ ಭಾಗದಲ್ಲಿ ಅಭಿವೃದ್ಧಿ ಆಗುತ್ತದೆ. ಸಿದ್ದರಾಮಯ್ಯರಿಗೆ ಕ್ಷೇತ್ರ ಇಲ್ಲ ಎಂಬುದು ಮಾಧ್ಯಮಗಳ ಸೃಷ್ಟಿ ಮಾತ್ರ ಅವರನ್ನು ಎಲ್ಲಿ ನಿಲ್ಲಿಸಬೇಕು ಎಂಬುದರ ಬಗ್ಗೆ ಅವರ ಬೆಂಬಲಿಗರಲ್ಲಿ ಜಟಾಪಟಿ ಇದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಸ್ಪರ್ಧಿಸಿದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುತ್ತೆ: ಸಿಎಂ ವಿಶ್ವಾಸ
Advertisement
ಸಿಎಂ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲ ಇಬ್ಬರು ಮೂವರು ಸಿಎಂ ಆಗಿದ್ದಾರೆ ಬಿಜೆಪಿಯಲ್ಲಿ ಗುಂಪುಗಾರಿಕೆ ಇದೆ. ಸಮಸ್ಯೆ ಇದೆ. ಇವರು ಬದಲಾಗಣೆ ಆಗುವ ನಿರೀಕ್ಷೆ ಕೂಡ ಇದೆ ಎಂದು ಮತ್ತೊಮ್ಮೆ ಸಿಎಂ ಬದಲಾವಣೆ ವಿಚಾರವನ್ನು ಮುನ್ನೆಲೆಗೆ ತಂದರು. ಇದನ್ನೂ ಓದಿ: ನಾನು ಮುಖ್ಯಮಂತ್ರಿಯಾಗುತ್ತೇನೆಂದು ಎಲ್ಲಿಯೂ ಹೇಳಿಲ್ಲ: ಮುರುಗೇಶ್ ನಿರಾಣಿ