ಕಲಬುರಗಿ: ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಅವಧಿಯಲ್ಲಿ ನೀಡಿದ ಅನ್ನ ಭಾಗ್ಯ ಯೋಜನೆಯಿಂದಲೇ (Anna Bhagya Yojana) ಕೋವಿಡ್ (Covid 19) ಸಂದರ್ಭದಲ್ಲಿ ಜನ ಪ್ರಾಣ ಉಳಿಸಿಕೊಂಡಿದ್ದಾರೆ ಎಂದು ಶಾಸಕ ಹಮೀರ್ ಅಹ್ಮದ್ ಖಾನ್ (Zameer Ahmed Khan) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Advertisement
ಕಲಬುರಗಿ ಜಿಲ್ಲೆ ಕಮಲಾಪುರ ಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆ (Praja Dhwani Yatra )ಕಾರ್ಯಕ್ರಮದಲ್ಲಿ ಮಾತನಾಡಿದ ಜಮೀರ್, 2013 ರಿಂದ 2018ರ ವರೆಗೆ ಸಿದ್ದರಾಮಯ್ಯ ನೀಡಿದ ಭಾಗ್ಯಗಳನ್ನು ಜನ ನೆನೆಯುತ್ತಿದ್ದಾರೆ. ಆದ್ರೆ ಸಿದ್ದರಾಮಯ್ಯ ನೀಡಿದ ಅನ್ನಭಾಗ್ಯ ಅಕ್ಕಿಯನ್ನ ಬಿಜೆಪಿ (BJP) ಕಡಿತಗೊಳಿಸಿದೆ. ಆದ್ದರಿಂದ ಕಾಂಗ್ರೆಸ್ಗೆ (Congress) ಈ ಬಾರಿ ಆಶೀರ್ವಾದ ಮಾಡಲು ಜನ ತೀರ್ಮಾನಿಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ 15,000 ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ ಉತ್ಪಾದನೆ – ಸಿಎಂ ಬೊಮ್ಮಾಯಿ
Advertisement
Advertisement
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಜನರ ಕಲ್ಯಾಣವಾಗುತ್ತೆ. ಅತೀ ಹೆಚ್ಚು ಬಡವರು ಇರುವುದು ಚಾಮರಾಜಪೇಟೆ ಕ್ಷೇತ್ರದಲ್ಲಿ. ಇವತ್ತಿಗೂ ನಮ್ಮ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರ ಫೋಟೊ ಹಾಕಿ ಪೂಜೆ ಮಾಡ್ತಾರೆ. ಸಿದ್ದರಾಮಯ್ಯ ಅವರು ನೀಡಿದ್ದ ಅನ್ನಭಾಗ್ಯ ಯೋಜನೆಯಿಂದಲೇ ಕೋವಿಡ್ ಸಂದರ್ಭದಲ್ಲಿ ಜನ ಪ್ರಾಣ ಉಳಿಸಿಕೊಂಡಿದ್ದಾರೆ ಎಂದು ಸ್ಮರಿಸಿದ್ದಾರೆ. ಇದನ್ನೂ ಓದಿ: `ಛೂ ಮಂತರ್’ ಟೀಸರ್ ಔಟ್: ಮಾರ್ಗನ್ ಹೌಸ್ ರಹಸ್ಯ ಭೇದಿಸಲು ಬಂದ ನಟ ಶರಣ್
Advertisement
ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 10 ಕೆ.ಜಿ ಅಕ್ಕಿ ಕೊಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. 200 ಯುನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ 2,000 ರೂ. ಮಾಸಿಕ ನೀಡುವುದಾಗಿಯೂ ಹೇಳಿದ್ದಾರೆ. ಆದ್ರೆ ಬಿಜೆಪಿಯವರಿಗೆ ಭ್ರಷ್ಟಾಚಾರ ಬಿಟ್ಟು ಬೇರೆನೂ ಮಾಡಲು ಬರುವುದಿಲ್ಲ. ಹಿಂದೂ ಮುಸ್ಲಿಮರ ಮಧ್ಯೆ ಜಗಳ ತಂದಿಟ್ಟು ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ಹಿಂದೂ, ಮುಸ್ಲಿಂ ಯಾರು ಬೇಡ, ಅಧಿಕಾರ ಬೇಕು. ಅದಕ್ಕಾಗಿ ಈಗ ಮುಸ್ಲಿಮರನ್ನು ಓಲೈಕೆ ಮಾಡುವ ನಾಟಕ ಆಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k