ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಗಿದೆ.
ಮಧ್ಯರಾತ್ರಿ ಹುಬ್ಬಳ್ಳಿ ಖಾಸಗಿ ಹೊಟೇಲ್ ನಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಸೆಲೆಬ್ರೇಟ್ ಮಾಡಲಾಗಿದೆ. ಕಾಂಗ್ರೆಸ್ ನಾಯಕರು ಸರಿಯಾಗಿ 12 ಗಂಟೆಗೆ ಜನ್ಮದಿನ ಆಚರಣೆ ಮಾಡಿದರು.
Advertisement
Advertisement
ಕೇಕ್ ಕತ್ತರಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಸಿದ್ದರಾಮಯ್ಯ ತಿನ್ನಿಸಿದರು. ಈ ವೇಳೆ ಡಿಕೆಶಿ ಕೂಡಾ ಸಿದ್ದರಾಮಯ್ಯಗೆ ಕೇಕ್ ತಿನ್ನಿಸಿ ಶುಭ ಹಾರೈಸಿದರು. ಜನ್ಮದಿನ ಆಚರಣೆ ವೇಳೆ ಹಲವು ನಾಯಕರು ಭಾಗಿಯಾಗಿದ್ದರು. ಇದನ್ನೂ ಓದಿ: ಎಸ್‍ಡಿಪಿಐ, ಪಿಎಫ್‍ಐ ಅವರನ್ನ ಸಾಕ್ತಿರೋದೆ ಬಿಜೆಪಿ: ಸಿದ್ದರಾಮಯ್ಯ
Advertisement
Advertisement
ಪಕ್ಷದ ವರಿಷ್ಠ ರಾಹುಲ್ ಗಾಂಧಿ ಸಮ್ಮುಖದಲ್ಲಿ ಇಂದು ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ನಡೆಯಲಿದೆ. ಇದರಿಂದ ಸಿದ್ದರಾಮಯ್ಯಗೆ ಎಷ್ಟರ ಮಟ್ಟಿಗೆ ಲಾಭ ಆಗಬಹುದು ಅನ್ನೋದು ಅವರ ಬೆಂಬಲಿಗರ ಲೆಕ್ಕಾಚಾರ. ಅದೇ ರೀತಿ ಪಕ್ಷದ ಮಟ್ಟದಲ್ಲೂ ಪಕ್ಷಕ್ಕೆ ಈ ಉತ್ಸವದಿಂದ ಎಷ್ಟರ ಮಟ್ಟಿಗೆ ಲಾಭ ಆಗಲಿದೆ ಎಂಬ ಲೆಕ್ಕಾಚಾರವು ನಡೆಯಲಿದೆ. ಒಟ್ಟಾರೆ ಸಿದ್ದರಾಮಯ್ಯ ಹಾಗೂ ಇತರೆ ಕಾಂಗ್ರೆಸ್ ನಾಯಕರ ಬೇರೆ ಬೇರೆ ಲೆಕ್ಕಾಚಾರದ ನಡುವೆ ಇಂದಿನ ಸಿದ್ದರಾಮೋತ್ಸವ ಸಾಕಷ್ಟು ಮಹತ್ವವನ್ನಂತು ಪಡೆದುಕೊಂಡಿದೆ ಎನ್ನಲಾಗುತ್ತಿದೆ.