ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.
ಹೌದು. ಕೋಲಾರ (Kolar) ಕಾಂಗ್ರೆಸ್ (Congress) ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಮುನಿಯಪ್ಪ ಅಂಡ್ ಟೀಂ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ (K. H Muniyappa) ಟೀಂ ಕೋಲಾರಕ್ಕೆ ಸ್ವಾಗತ ಕೋರಿದೆ.
ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಸಾಧ್ಯತೆ ಇದೆ. ಈ ಮೂಲಕ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಅನ್ನೋ ಗೊಂದಲಕ್ಕೆ ತೆರೆ ಬೀಳಲಿದೆ. ಇದನ್ನೂ ಓದಿ: ಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಮಹಿಳಾ ಕಾರ್ಯಕರ್ತೆಯರು – ಇಬ್ಬರ ಬಂಧನ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k