ಹಾವೇರಿ: ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಇದೆ ಅನ್ನೋ ಹೇಳಿಕೆಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಅವರಿಗೆ ನಿಜವಾಗಿಯೂ ಜೀವ ಬೆದರಿಕೆ ಇದೆಯೇ ಅನ್ನೋದರ ಬಗ್ಗೆ ಸೂಕ್ತ ತನಿಖೆ ಮಾಡ್ತೀವಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಸಂಪತ್‌ಗೂ ಜೀವ ಬೆದರಿಕೆ ಇದೆಯೇ ಅನ್ನೋದನ್ನ ತನಿಖೆ ನಡೆಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ದೇವರಿಗೆ ಮೊಮ್ಮಗನ ಮುಡಿ ನೀಡಿದ ಹೆಚ್.ಡಿ ಕುಮಾರಸ್ವಾಮಿ
Advertisement
Advertisement
ಐತಿಹಾಸಿಕ ಪುರುಷರ ಬಗ್ಗೆ ಎಲ್ಲಾ ಕಾಲದಲ್ಲೂ ಚರ್ಚೆ ನಡೆಯುತ್ತಲೇ ಇದೆ. ಇಂದಿರಾ ಗಾಂಧಿಯವರೇ ಸಾವರ್ಕರ್‌ರನ್ನ ದೇಶದ ಶ್ರೇಷ್ಠ ಪುತ್ರ ಅಂದಿದ್ದರು. ಅದು ದಾಖಲೆಗಳಲ್ಲಿದೆ. ಟಿಪ್ಪು ಸುಲ್ತಾನ್ ಬಗ್ಗೆ ವಿವಾದ ಇದೆ. ಸುಮ್ಮನೆ ಜನರಲ್ಲಿ ಗೊಂದಲ ಸೃಷ್ಟಿಸಿ ಒಂದು ವರ್ಗಕ್ಕೆ ನೋವುಂಟು ಮಾಡಬಾರದು. ಸಮಾಜದಲ್ಲಿ ಶಾಂತಿಯಿಂದಿರಬೇಕು. ದೇಶದಲ್ಲಿನ ಸವಾಲುಗಳನ್ನು ಹೇಗೆ ಎದುರಿಸಬೇಕು ಅನ್ನೋದರ ಬಗ್ಗೆ ಚರ್ಚೆಗಳು ನಡೆಯಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ನದಿ, ಕೆರೆಗಳಲ್ಲಿ ಸ್ನಾನ ಮಾಡೋ ಮುನ್ನ ಹುಷಾರ್ – ವಿದೇಶದಲ್ಲಿ ಪತ್ತೆಯಾಗಿದೆ ಮೆದುಳು ತಿನ್ನುವ ಡೆಡ್ಲಿ ವೈರಸ್
Advertisement
Advertisement
`ಬಿಜೆಪಿಯದ್ದು ಜನೋತ್ಸವ ಅಲ್ಲ ಭ್ರಷ್ಟೋತ್ಸವ’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, 5 ವರ್ಷ ಸಿದ್ದರಾಮಯ್ಯರ ಆಡಳಿತ ನೋಡಿಯೇ ಜನರು ಕಾಂಗ್ರೆಸ್ ಅನ್ನ ತಿರಸ್ಕಾರ ಮಾಡಿದ್ದಾರೆ. ದೇಶದಲ್ಲಿ ಭ್ರಷ್ಟಾಚಾರ ಆರಂಭಿಸಿದ್ದೇ ಕಾಂಗ್ರೆಸ್. ನೆಲ, ಜಲ ಏನನ್ನೂ ಬಿಡಲಿಲ್ಲ. ಇದನ್ನೆಲ್ಲ ಮಾಡಿದ್ದಕ್ಕೆ ಅವರನ್ನ ಜನ ತಿರಸ್ಕಾರ ಮಾಡಿದ್ದಾರೆ. ಅವರು ಸಿದ್ದರಾಮೋತ್ಸವ ಮಾಡಿದ್ರು. ನಾವು ಜನೋತ್ಸವ ಮಾಡ್ತಿದ್ದೀವಿ. ಅಧಿಕಾರಕ್ಕೆ ಯಾರು ಬರಬೇಕು ಅನ್ನೋದನ್ನ ಜನರೇ ತೀರ್ಮಾನ ಮಾಡ್ತಾರೆ ಎಂದು ಹೇಳಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಸಿಎಂ, ಅದು ಪಕ್ಷದ ಆಂತರಿಕ ವಿಚಾರ. ಹೈಕಮಾಂಡ್ ಜೊತೆ ಚರ್ಚಿಸಿ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.