ಜೈಪುರ/ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ಪ್ರಯಾಣಿಸುತ್ತಿದ್ದ ವಿಮಾನ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ರಾಜಸ್ಥಾನದ ಜೈಪುರದಲ್ಲಿ ಲ್ಯಾಂಡ್ ಆಗಿದೆ.
ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿ, ಸುದ್ದಿಗೋಷ್ಠಿ ನಡೆಸಿದ ಬಳಿಕ ವಿಶೇಷ ವಿಮಾನದಲ್ಲಿ ದೆಹಲಿಗೆ ಹೊರಟಿದ್ದರು. ಆದರೆ ದೆಹಲಿಯಲ್ಲಿ ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಜೈಪುರಕ್ಕೆ ಮಾರ್ಗ ಬದಲಿಸಲಾಯಿತು. ಇದನ್ನೂ ಓದಿ: ಸೋಮವಾರ ಗೋಧೂಳಿ ಮುಹೂರ್ತದಲ್ಲಿ ಡಿಕೆ ಶಿವಕುಮಾರ್ ಪಟ್ಟಾಭಿಷೇಕ?

ವಿಶೇಷ ವಿಮಾನದಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಚಿವರಾದ ಕೆ.ಜೆ ಜಾರ್ಜ್, ಬೈರತಿ ಸುರೇಶ್, ಕಾನೂನು ಸಲಹೆಗಾರ ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಇದ್ದರು. ಇದನ್ನೂ ಓದಿ: ಮುಂದಿನ ಸಿಎಂ ಯಾರು – ಪ್ರಶ್ನೆಗೆ ಉತ್ತರ ನೀಡದೇ ನಗುಮುಖದಿಂದ ಎದ್ದು ಹೋದ ಸಿದ್ದರಾಮಯ್ಯ
