ಮೈಸೂರು: ಕ್ಷೇತ್ರದ ಶಾಸಕರು ಕೈಗೆ ಸಿಗುವುದಿಲ್ಲ ಎಂದು ಸಾರ್ವಜನಿಕ ಸಭೆಯಲ್ಲಿ ದೂರು ನೀಡಿದ್ದಕ್ಕೆ ಟೇಬಲ್ ಕುಟ್ಟಿದ ಮಹಿಳೆಯ ಮೈಕ್ ಕಿತ್ತುಕೊಂಡು ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ರೌದ್ರಾವತಾರ ಪ್ರದರ್ಶಿಸಿದ್ದಾರೆ.
ಜಿಲ್ಲೆಯ ವರುಣಾ ವಿಧಾನಸಭಾ ವ್ಯಾಪ್ತಿಯ ಗರ್ಗೇಶ್ವರಿ ಗ್ರಾಮದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿ ಶಂಕುಸ್ಥಾಪನೆ ವೇಳೆ ಈ ಘಟನೆ ನಡೆದಿದೆ. ನಿಮ್ಮ ಮಗ ಎಂಎಲ್‍ಎ ಆಗಿದ್ದಾರೆ. ಆದ್ರೆ ಕ್ಷೇತ್ರದ ಜನರ ಕೈಗೆ ಸಿಗುತ್ತಿಲ್ಲ ಎಂದು ಶಾಸಕ ಯತೀಂದ್ರ ಅವರ ವಿರುದ್ಧ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ಜಮಲಾರ್ ಟೇಬಲ್ ಕುಟ್ಟಿ ಏರು ಧ್ವನಿಯಲ್ಲಿ ಪ್ರಶ್ನಿಸಿದ್ದಾರೆ. ಈ ಪ್ರಶ್ನೆಗೆ ಕೋಪಗೊಂಡ ಸಿದ್ದರಾಮಯ್ಯ ಎಲ್ಲರ ಎದುರೇ ಮಹಿಳೆ ಕೈಯಲ್ಲಿದ್ದ ಮೈಕನ್ನು ಕಿತ್ತುಕೊಂಡು ಸಿಡಿಮಿಡಿಗೊಂಡಿದ್ದಾರೆ.
ನಿಮ್ಮ ಮಗ ಕೈಗೆ ಸಿಗಲ್ಲ ಎಂದು ದೂರು ಹೇಳಿದಕ್ಕೆ ಕೆಂಡಮಂಡಲರಾದ ಸಿದ್ದರಾಮಯ್ಯ, ಮಹಿಳೆಯನ್ನು ತರಾಟೆಗೆ ತೆಗೆದುಕೊಂಡು ಬಾಯಿ ಮುಚ್ಚಿಸಿದರು. ಅಷ್ಟೇ ಅಲ್ಲದೆ ಏನಮ್ಮ ನಾವು ದೇಶಕ್ಕೆ ಅನ್ಯಾಯ ಮಾಡಿರುವ ಥರ ಮಾತಾಡ್ತಿದ್ದೀಯಾ. ನನ್ನ ಮುಂದೆಯೇ ಟೆಬಲ್ ಕುಟ್ಟಿ ಮಾತನಾಡುತ್ತಿದ್ದಿಯಾ? ಕುತ್ಕೊಳಮ್ಮ ಸುಮ್ಮನೆ ಎಂದು ಕೊನೆಗೆ ಮಹಿಳೆ ಬಳಿ ಇದ್ದ ಮೈಕ್ ಕಿತ್ತುಕೊಂಡು ಕೋಪ ಪ್ರದರ್ಶಿಸಿದರು.
https://www.youtube.com/watch?v=U55ame3QXpU
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv