ಬಾಲಿವುಡ್‌ನಲ್ಲಿ (Bollywood) ಗಟ್ಟಿಮೇಳ ಸೌಂಡ್ ಜೋರಾಗಿದೆ. ಸಿದ್ಧಾರ್ಥ್ (Siddarth Malhotra) ಮತ್ತು ಕಿಯಾರಾ (Kiara Advani)) ಮದುವೆಗೆ ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಆದರೂ ಮದುವೆ (Wedding) ಬಗ್ಗೆ ಯಾವುದೇ ಅಪ್‌ಡೇಟ್ ಬಿಟ್ಟು ಕೊಡದೇ ಸೈಲೆಂಟ್ ಆಗಿದ್ದಾರೆ. ಬಿಟೌನ್‌ನ ಕೆಲವೇ ಕೆಲವು ಗಣ್ಯರಿಗೆ ಮಾತ್ರ ಮದುವೆಗೆ ಬರಲು ಆಹ್ವಾನ ನೀಡಿದ್ದಾರೆ.
ಸಾಕಷ್ಟು ವರ್ಷಗಳಿಂದ ಸಿದ್ ಮತ್ತು ಕಿಯಾರಾ ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು. ಇದುವರೆಗೂ ಈ ಬಗ್ಗೆ ಮಾತನಾಡದೇ ಸೀಕ್ರೆಟ್ ಮೈನ್‌ಟೈನ್ ಮಾಡ್ತಿದ್ದಾರೆ. ಹಲವು ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಲು ತೆರೆಮರೆಯಲ್ಲಿ ವೇದಿಕೆ ರೆಡಿಯಾಗುತ್ತಿದೆ. 2023ರ ಫೆಬ್ರವರಿಯಲ್ಲಿ ಈ ಜೋಡಿ ಮದುವೆಯಾಗುತ್ತಿದ್ದಾರೆ.

ಜೈಸಲ್ಮೇರ್ ಪ್ಯಾಲೇಸ್‌ನಲ್ಲಿ ಮದುವೆ ನಡೆಯುತ್ತಿದೆ. ಫೆ.4 ಮತ್ತು 5ರಂದು ಸಂಗೀತ್ ಮತ್ತು ಮೆಹೆಂದಿ ಕಾರ್ಯಕ್ರಮ ನಡೆಯಲಿದೆ. ಫೆ.6ರಂದು ಗುರುಹಿರಿಯರು ಮತ್ತು ಆಪ್ತರ ಸಮ್ಮುಖದಲ್ಲಿ ಸಿದ್ಧಾರ್ಥ್, ಕಿಯಾರಾ ಮದುವೆ ನಡೆಯಲಿದೆ ಎಂದು ತಿಳಿದು ಬಂದಿದೆ. ಬಳಿಕ ಸಿನಿಮಾರಂಗದ ಸ್ನೇಹಿತರಿಗೆ ಆರತಕ್ಷತೆ ಇರಲಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k



