ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಶ್ರೀಕ್ಷೇತ್ರ ಜಿಡಗಾ ಸಿದ್ಧರಾಮ ಶಿವಯೋಗಿಗಳ ಪುಣ್ಯ ಭೂಮಿ ನೆಲದಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ (Rishab Shetty) ಮುಗಳಖೋಡ ಮಠದಿಂದ ಕೊಡಮಾಡುವ ರಾಷ್ಟ್ರೀಯ ಸಿದ್ಧಶ್ರೀ ಪ್ರಶಸ್ತಿ (Siddha Shree Award) ನೀಡಿ ಗೌರವಿಸಲಾಯಿತು.
ರಾಷ್ಟ್ರೀಯ ಸಿದ್ಧಶ್ರೀ ಪ್ರಶಸ್ತಿಯು 1 ಲಕ್ಷ ನಗದು, ಎರಡು ತೋಲ ಚಿನ್ನ, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕಗಳನ್ನು ಒಳಗೊಂಡಿವೆ. ಇದನ್ನೂ ಓದಿ: `ಕಾಂತಾರ’ ವರಾಹ ರೂಪಂ ಹಾಡಿನ ವಿವಾದಕ್ಕೆ ರಿಷಬ್ ಶೆಟ್ಟಿ ಪ್ರತಿಕ್ರಿಯೆ
Advertisement
Advertisement
ಇಂದು ಸಂಜೆ ಜಿಡಗಾ ನವಕಲ್ಯಾಣ ಮಂಟಪದ ಆವರಣದಲ್ಲಿ ನಡೆದ 38ನೇ ಗುರುವಂದಮಾ ಕಾರ್ಯಕ್ರಮದಲ್ಲಿ ಮಠದ ಪೂಜ್ಯ ಷಡಕ್ಷರಿ ಶಿವಯೋಗಿ ಡಾ.ಮುರುಘರಾಜೇಂದ್ರ ಸ್ವಾಮೀಜಿ ಹಾಗೂ ಮಠಾಧೀಶರು ಪ್ರಶಸ್ತಿ ನೀಡಿ ಗೌರವಿಸಿದರು.
Advertisement
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ರಿಷಬ್ ಶೆಟ್ಟಿ (Rishab Shetty), ಸಿದ್ಧಶ್ರೀ ನನ್ನ ನಟನೆಯ ಕಾಂತಾರ ಸಿನೆಮಾಕ್ಕೆ ಸಿಗುತ್ತಿರುವ ಮೊದಲ ಪ್ರಶಸ್ತಿ. ಇದರಿಂದ ನನ್ನ ಜವಾಬ್ದಾರಿ ಹೆಚ್ಚಿದೆ. ಈ ಪ್ರಶಸ್ತಿಯನ್ನು ನನಗೆ ಪ್ರೇರಣೆ ನೀಡಿದ ಪಂಜುರ್ಲಿ ದೈವ, ಶ್ರೀ ಮಂಜುನಾಥ ಸ್ವಾಮಿ ಹಾಗೂ ಅಣ್ಣಪ್ಪಸ್ವಾಮಿ, ದೈವ ನರ್ತಕರ ಕುಟುಂಬಕ್ಕೆ ಅಪ9ಣೆ ಮಾಡುತ್ತೆನೆ. ವಿಶೇಷವಾಗಿ ಕನ್ನಡ ನಾಡಿನ ಮೇರುನಟ ದಿ. ಡಾ.ಪುನೀತ್ ರಾಜಕುಮಾರ್ ಹಾಗೂ ಕನ್ನಡ ಜನತೆಗೆ ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.
Advertisement
ನಾನು ಮೊದಲು ಬಣ್ಣ ಹಚ್ಚಿದ್ದು ಯಕ್ಷಗಾನದ (Yakshagana) ಮೂಲಕ. ಕರ್ನಾಟಕದ ಭಾವನೆ, ನಂಬಿಕೆ ಒಳಗೊಂಡ ನಮ್ಮ ಮಣ್ಣಿನ ಕಥೆ ನಿಮಗೆಲ್ಲಾ ಇಷ್ಟವಾಗಿದ್ದು ನನಗೆ ಹೆಮ್ಮೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸ್ಟಾರ್ ನಟಿಯರಿಗೆ ಸೆಡ್ಡು ಹೊಡೆದು ತೆಲುಗಿನ 7 ಚಿತ್ರಗಳಿಗೆ ಸಹಿ ಹಾಕಿದ ಶ್ರೀಲೀಲಾ
ಇದೇ ವೇಳೆ `ನಿಮ್ಮ ಆಚರಣೆ, ಆಡಂಬರ ಹೀಗೆ ನಡದರೇ, ಬಂದು ಮಾಡಸತಿನಿ. ನಿನ್ನ ಅಪ್ಪನಿಗೆ ಹುಟ್ಟಿದ್ರೆ ಬಂದ್ ಮಾಡ್ಸಿ ನೋಡಾ..’ ಅನ್ನೋ ಕಾಂತಾರ (Kantara) ಸಿನಿಮಾದ (Cinema) ಡೈಲಾಗ್ ಹೊಡೆದು ಅಭಿಮಾನಿಗಳನ್ನ ರಂಜಿಸಿದ್ರು.
ನಿರೂಪಕಿ ಅನುಶ್ರೀ ಕಾರ್ಯಕ್ರಮದ ನಿರೂಪಣೆ ನಡೆಸಿಕೊಟ್ಟರು. ಖ್ಯಾತ ಗಾಯಕ ವಿಜಯ ಪ್ರಕಾಶ್ (Vijayaprakash) ತಂಡದಿಂದ ಸ್ವರ ಸಂಗೀತ ಕಾರ್ಯಕ್ರಮ ನಡೆಯಿತು.