ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್ (City Civil Court) ತಡೆ ನೀಡಿದ ಹಿನ್ನೆಲೆಯಲ್ಲಿ ʼಸಿದ್ದು ನಿಜಕನಸುಗಳುʼ ಪುಸ್ತಕ ಬಿಡುಗಡೆಗೆ ಕಾರ್ಯಕ್ರಮ ರದ್ದಾಗಿದೆ
ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಪುರಭವನದಲ್ಲಿ ʼಸಿದ್ದು ನಿಜಕನಸುಗಳು ಸಂಪುಟ 1ʼ (Siddu Nija Kanasugalu) ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜನೆಗೊಂಡಿತ್ತು.
Advertisement
ಉನ್ನತ ಶಿಕ್ಷಣ ಸಚಿವ ಡಾ. ಸಿಎನ್ ಅಶ್ವತ್ಥನಾರಾಯಣ ಪುಸ್ತಕವನ್ನು ಬಿಡುಗಡೆಗೊಳಿಸಬೇಕಿತ್ತು. ಈ ಪುಸ್ತಕ ಬಿಡುಗಡೆಯಾಗುತ್ತಿದೆ ಎಂಬ ವಿಚಾರ ತಿಳಿದು ಪುರಭವವನದ ಬಳಿ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ಕೋಲಾರದಿಂದಲೇ ಸ್ಪರ್ಧೆ – ಸಿದ್ದರಾಮಯ್ಯ ಅಧಿಕೃತ ಘೋಷಣೆ
Advertisement
Advertisement
ಪುಸ್ತಕ ಬಿಡುಗಡೆ ವಿಚಾರ ಚರ್ಚೆ ಆಗುತ್ತಿದ್ದಂತೆ ಸಿದ್ದರಾಮಯ್ಯ ಪುತ್ರ ಯತೀಂದ್ರ (Yathindra Siddaramaiah) ಅವರು ಕೋರ್ಟ್ ಮೊರೆ ಹೋಗಿ ತಡೆ ನೀಡುವಂತೆ ಮನವಿ ಮಾಡಿದ್ದರು.
Advertisement
ಈ ಮನವಿಯನ್ನು ಪುರಸ್ಕರಿಸಿದ ನಗರದ ಸಿಟಿ ಸಿವಿಲ್ ಕೋರ್ಟ್ ಪುಸ್ತಕ ಬಿಡುಗಡೆಗೆ ತಡೆ ನೀಡಿದೆ. ಪುಸ್ತಕ ಬಿಡುಗಡೆ, ಮಾರಾಟ ಅಲ್ಲದೇ ಮಾಧ್ಯಮ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ ನೀಡಿ ಮುಂದಿನ ವಿಚಾರಣೆಯನ್ನು ಫೆ.9ಕ್ಕೆ ಮುಂದೂಡಿದೆ.
ತಡೆ ನೀಡಿದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಬೇಕಾ? ಬೇಡವೇ ಎಂಬುದರ ಬಗ್ಗೆ ಆಯೋಜಕರ ನಡುವೆ ಗೊಂದಲ ಇತ್ತು. ಭಾರೀ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು ಹೊರಗಡೆ ಪ್ರತಿಭಟನೆ ನಡೆಸುತ್ತಿದ್ದರೆ ಕೆಲವರು ಪುರಭವನದ ಒಳಗಡೆ ನುಗ್ಗಿದ್ದರು. ಹೀಗಾಗಿ ಒಳಗಡೆ ಭಾರೀ ಹೈಡ್ರಾಮಾವೇ ನಡೆದಿತ್ತು.
ಕೊನೆಗೆ ಆಯೋಜಕರು ಇಂದಿನ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ರದ್ದು ಮಾಡುತ್ತೇವೆ ಎಂದು ವೇದಿಕೆ ಮೇಲೆ ಪ್ರಕಟಿಸಿದರು. ಪರಿಷತ್ ಸದಸ್ಯ, ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಪ್ರತಿಕ್ರಿಯಿಸಿ, ಕೋರ್ಟ್ ಆದೇಶವನ್ನು ಗೌರವಿಸಿ ಇಂದಿನ ಕಾರ್ಯಕ್ರಮವನ್ನು ರದ್ದು ಮಾಡಿದ್ದೇವೆ. ಮುಂದೆ ಪುಸ್ತಕ ಬಿಡುಗಡೆಯ ದಿನಾಂಕ ತಿಳಿಸಲಾಗುವುದು ಎಂದು ಹೇಳಿದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k