ನವದೆಹಲಿ: ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ (Bharat Biotech) ಸಂಸ್ಥೆ ಅಭಿವೃದ್ಧಿಪಡಿಸಿದ್ದ ಕೋವ್ಯಾಕ್ಸಿನ್ (Covaxin) ಲಸಿಕೆಯ ಅಡ್ಡಪರಿಣಾಮಗಳ (Side Effect) ಬಗ್ಗೆ ವರದಿ ಬಂದಿದೆ. ಈ ಲಸಿಕೆ ಪಡೆದ ವರ್ಷದ ಬಳಿಕ ಅನೇಕರಲ್ಲಿ ಸೈಡ್ ಎಫೆಕ್ಟ್ ಕಂಡುಬಂದಿವೆ ಎಂದು ಬನಾರಸ್ ಹಿಂದೂ ವಿವಿ (Banaras Hindu University) ನಡೆಸಿದ ಅಧ್ಯಯನ ತಿಳಿಸಿದೆ.
ಕೋವಿಡ್ ಲಸಿಕೆಗಳ ಅಡ್ಡಪರಿಣಾಮಗಳ ಬಗ್ಗೆ ಇತ್ತೀಚಿಗೆ ಮೇಲಿಂದ ಮೇಲೆ ವರದಿಗಳು ಬರುತ್ತಿವೆ. ಎರಡು ವಾರಗಳ ಹಿಂದಷ್ಟೇ ಕೋವಿಶೀಲ್ಡ್ ಅಡ್ಡಪರಿಣಾಮಗಳ ಬಗ್ಗೆ ವರದಿ ಆಗಿತ್ತು. ಇದೀಗ ಕೋವ್ಯಾಕ್ಸಿನ್ ಸರದಿ. ಈ ವರದಿ ಪ್ರಕಾರ ಕೋವ್ಯಾಕ್ಸಿನ್ ಪಡೆದ ಹದಿಹರೆಯದವರು ಮತ್ತು ಯುವಕರಲ್ಲಿ ಹೆಚ್ಚು ಅಡ್ಡಪರಿಣಾಮ ಕಂಡುಬಂದಿದೆ. ಇದನ್ನೂ ಓದಿ: ಕೈಬೆರಳಿನ ಶಸ್ತ್ರಚಿಕಿತ್ಸೆಗೆ ಕರೆದೊಯ್ದು ನಾಲಿಗೆಗೆ ಸರ್ಜರಿ ಮಾಡಿದ್ರು!- ತನಿಖೆಗೆ ಆದೇಶ
Advertisement
Advertisement
ಒಟ್ಟು 1,024 ಜನರನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. 48% ರಷ್ಟು ಮಂದಿ ಶ್ವಾಸಕೋಶದ ಸೋಂಕಿಗೆ ತುತ್ತಾಗಿರೋದು ಕಂಡುಬಂದಿದೆ. ಅಲ್ಲದೇ, ನರ ಸಂಬಂಧಿ ಕಾಯಿಲೆ, ಸ್ನಾಯು ಸೆಳೆತ, ಕೀಲುನೋವು, ಚರ್ಮ ರೋಗಗಳು ಕೂಡ ಕಂಡುಬಂದಿವೆ. 4.6% ರಷ್ಟು ಮಹಿಳೆಯರಲ್ಲಿ ಮುಟ್ಟಿನ ಸಮಸ್ಯೆ ಕೂಡ ಕಂಡುಬಂದಿದೆ. ಇದೆಲ್ಲಾ ಇತರೆ ಲಸಿಕೆಗಳ ಅಡ್ಡಪರಿಣಾಮಗಳಿಗಿಂತ ಭಿನ್ನ ಎನ್ನಲಾಗಿದ್ದು, ಮತ್ತಷ್ಟು ಆಳ ಅಧ್ಯಯನ ಮುಂದುವರೆದಿದೆ. ಇದನ್ನೂ ಓದಿ: SSLCಯಲ್ಲಿ 99% ಅಂಕ ತೆಗೆದ ವಿದ್ಯಾರ್ಥಿನಿಯ ಮೆದುಳಿನಲ್ಲಿ ರಕ್ತಸ್ರಾವವಾಗಿ ದುರ್ಮರಣ