ನವದೆಹಲಿ: ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ರೈತರ ಮೇಲೆ ನಡೆದ ಹಿಂಸಾಚಾರವನ್ನು ವಿರೋಧಿಸಿ ತಮ್ಮ ಸರ್ಕಾರದ ವಿರುದ್ಧವೇ ಬಿಜೆಪಿ ಸಂಸದ ವರುಣ್ ಗಾಂಧಿ ತೊಡೆತಟ್ಟಿದ್ದಾರೆ.
1980ರಲ್ಲಿ ಇಂದಿರಾ ಗಾಂಧಿ ಸರ್ಕಾರದ ವಿರುದ್ಧ ಎಚ್ಚರಿಕೆ ನೀಡುತ್ತಾ, ರೈತರಿಗೆ ತನ್ನ ಬೆಂಬಲವನ್ನು ವ್ಯಕ್ತಪಡಿಸಿದ್ದ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಭಾಷಣದ ತುಣುಕೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ರೈತರ ಪರ ಧ್ವನಿಯಾಗಿದ್ದಾರೆ. ಇದನ್ನೂ ಓದಿ: ಲಖೀಂಪುರ್ ರೈತರ ಹತ್ಯಾಕಾಂಡ ಪ್ರಕರಣ- ಅಶೀಶ್ ಮಿಶ್ರಾ SIT ವಶಕ್ಕೆ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಮಸೂದೆಯ ವಿರುದ್ಧ ವಿರೋಧ ವ್ಯಕ್ತಪಡಿಸುತ್ತಿರುವ ರೈತರ ಬೆಂಬಲಕ್ಕೆ ನಿಂತಿರುವ ವರುಣ್ ಗಾಂಧಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ವಾಜಪೇಯಿ ಅವರ ಭಾಷಣದ ತುಣುಕೊಂದನ್ನು ಹಾಕಿಕೊಂಡು, ವಿಶಾಲ ಹೃದಯದ ನಾಯಕನಿಂದ ಜಾಣ್ಮೆಯ ಮಾತುಗಳು ಎಂದು ಶೀರ್ಷಿಕೆ ನೀಡಿದ್ದಾರೆ. ಈ ಮೂಲಕ ತಮ್ಮದೇ ಸರ್ಕಾರಕ್ಕೆ ಮುಜುಗರವಾಗುವಂತೆ ಮಾಡಿದ್ದಾರೆ. ಇದನ್ನೂ ಓದಿ: ಲಖಿಂಪುರ ಖೇರಿ ಹಿಂಸಾಚಾರ- ಯುಪಿ ಸರ್ಕಾರದಿಂದ 45 ಲಕ್ಷ ರೂ.ಪರಿಹಾರ ಘೋಷಣೆ
Wise words from a big-hearted leader… pic.twitter.com/xlRtznjFAx
— Varun Gandhi (@varungandhi80) October 14, 2021
1980ರಲ್ಲಿ ಕಾಂಗ್ರೆಸ್ ಸರ್ಕಾರ ಕಾನೂನು ದುರುಪಯೋಗಪಡಿಸಿಕೊಂಡು ಅವರ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಿದರೆ, ಮತ್ತು ಶಾಂತಿಯುತ ಹೋರಾಟವನ್ನು ಭಗ್ನಗೊಳಿಸಲು ಪ್ರಯತ್ನ ಪಟ್ಟರೆ ರೈತರ ಹೋರಾಟದೊಂದಿಗೆ ನಾನು ಕೈ ಜೋಡಿಸಲು ನಾಚಿಕೆಪಡುವುದಿಲ್ಲ ಅವರೊಂದಿಗೆ ಹೋರಾಡುತ್ತೇನೆ ಎಂದು ವಾಜಪೇಯಿ ಹೇಳಿರುವುದು ಈ ವೀಡಿಯೋದಲ್ಲಿದೆ.
ಈ ಮೊದಲು ರೈತರ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ವರುಣ್ ಗಾಧಿ ಪಟ್ಟುಹಿಡಿದಿದ್ದರು. ಇದನ್ನು ಗಮನಿಸಿ ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಕೈ ಬಿಡಲಾಗಿತ್ತು. ಇದೀಗ ಮತ್ತೆ ತಮ್ಮದೇ ಪಕ್ಷದ ವಿರುದ್ಧ ವರುಣ್ ಗಾಂಧಿ ಮತ್ತೊಮ್ಮೆ ತಿರುಗಿಬಿದ್ದಿದ್ದಾರೆ. ಇದನ್ನೂ ಓದಿ: ಲಖಿಂಪುರ್ ಸಂತ್ರಸ್ತ ಕುಟುಂಬಗಳಿಗೆ ಹಣ ಬೇಕಿಲ್ಲ, ನ್ಯಾಯ ಬೇಕು: ಪ್ರಿಯಾಂಕಾ ಗಾಂಧಿ