ಭೋಪಾಲ್: ಆದಿವಾಸಿ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದಲ್ಲಿ ಬಂಧನಕ್ಕೊಳಗಾದ ಪ್ರವೇಶ್ ಶುಕ್ಲಾ (Pravesh Shukla) ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರವಾಗಿ ಮಧ್ಯಪ್ರದೇಶ (Madhya Pradesh) ಹೈಕೋರ್ಟ್ (High Court) ಸೋಮವಾರ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.
ರಾಷ್ಟ್ರೀಯ ಭದ್ರತಾ ಕಾಯಿದೆಯಡಿ (NSA) ಆರೋಪಿಯ ಬಂಧನ ಪ್ರಶ್ನಿಸಿ ಪ್ರವೇಶ್ ಶುಕ್ಲಾ ಪತ್ನಿ ಕಂಚನ್ ಶುಕ್ಲಾ ಮನವಿ ಸಲ್ಲಿಸಿದ್ದಳು. ಅಲ್ಲದೇ ರಾಜಕೀಯ ಕಾರಣಕ್ಕೆ ಪತಿಯನ್ನು ಬಂಧಿಸಲಾಗಿದೆ ಎಂದು ಆಕೆ ಆರೋಪಿಸಿದ್ದಾಳೆ. ಇದನ್ನೂ ಓದಿ: ಮಧ್ಯಪ್ರದೇಶದಲ್ಲೂ ಬುಲ್ಡೋಜರ್ ಸದ್ದು; ಬುಡಕಟ್ಟು ವ್ಯಕ್ತಿ ಮೇಲೆ ಮೂತ್ರವಿಸರ್ಜನೆ ಮಾಡಿದ್ದ ಆರೋಪಿ ಮನೆ ಧ್ವಂಸ
ಬಂಧನದ ವಿರುದ್ಧ ಅಧಿಕಾರಿಗಳಿಗೆ ಪ್ರತಿಕ್ರಿಯೆ ನೀಡಲು ಅವಕಾಶ ಕೊಡದೆ ಪ್ರವೇಶ್ ಶುಕ್ಲಾ ವಿರುದ್ಧ ಎನ್‍ಎಸ್‍ಎ ಕಾಯಿದೆ ಅನ್ವಯಿಸಲಾಗಿದೆ ಎಂದು ಅರ್ಜಿದಾರರ ಪರ ವಕೀಲ ಅನಿರುದ್ಧ ಕುಮಾರ್ ಮಿಶ್ರಾ ನ್ಯಾಯಾಲಯದಲ್ಲಿ ವಾದಿಸಿದ್ದಾರೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ರವಿ ಮಳಿಮಠ ಮತ್ತು ವಿಶಾಲ್ ಮಿಶ್ರಾ ಅವರನ್ನೊಳಗೊಂಡ ಪೀಠ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತು. ವಿಚಾರಣೆಯ ವಿವರಗಳನ್ನು ಮಾಧ್ಯಮಗಳಿಗೆ ಬಹಿರಂಗಪಡಿಸದಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿತು. ಇದನ್ನೂ ಓದಿ: ಆದಿವಾಸಿ ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ ಪ್ರಕರಣ – ಸಂತ್ರಸ್ತನ ಕಾಲು ತೊಳೆದು ಗೌರವಿಸಿದ ಮಧ್ಯಪ್ರದೇಶ ಸಿಎಂ
Web Stories