ನವದೆಹಲಿ: ಪಂಜಾಬ್‍ನ ಖ್ಯಾತ ಗಾಯಕ ಹಾಗೂ ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಅವರನ್ನು ಗುಂಡಿಕ್ಕಿ ಕೊಂದ ಆರೋಪಿಗಳ ಗ್ಯಾಂಗ್ ಕಾರಿನಲ್ಲಿ ಗನ್‍ಗಳನ್ನು ತೋರಿಸುತ್ತ ಸಂಭ್ರಮಿಸುತ್ತಿರುವ ವೀಡಿಯೋ ಒಂದು ವೈರಲ್ ಆಗುತ್ತಿದೆ.
Advertisement
ಸಿಧು ಮೂಸೆವಾಲಾ ಹತ್ಯೆಗೆ ಸಂಬಂಧಿಸಿದಂತೆ ಇಂದು ದೆಹಲಿ ಪೊಲೀಸರ ತಂಡ ಲಾರೆನ್ಸ್ ಬಿಷ್ಣೋಯ್ ಗೋಲ್ಡಿ ಬ್ರಾರ್ ಗ್ಯಾಂಗ್‍ಗೆ ಸೇರಿದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ನಾಲ್ವರ ಪೈಕಿ ಅಂಕಿತ್ ಸಿರ್ಸಾ, ಸಿಧು ಮೂಸೆವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಶೂಟರ್‌ಗಳಲ್ಲಿ ಒಬ್ಬ ಎಂದು ತಿಳಿಸಿದ್ದಾರೆ. ಅಂಕಿತ್ ಸಿರ್ಸಾನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಆತನ ಮೊಬೈಲ್‍ನಲ್ಲಿ ಈ ವೀಡಿಯೋ ಕಂಡುಬಂದಿದೆ. ಇದನ್ನೂ ಓದಿ: ಅಗ್ನಿಪಥ್ ಯೋಜನೆ- ಸಶಸ್ತ್ರಪಡೆಗಳಿಗೆ ಸೇರಲು 10 ಸಾವಿರ ಮಹಿಳಾ ಅಭ್ಯರ್ಥಿಗಳು ನೋಂದಣಿ
Advertisement
ವೀಡಿಯೋದಲ್ಲಿ ಐವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದು ಪಂಜಾಬಿ ಹಾಡು ಕಾರ್‍ನಲ್ಲಿ ಕೇಳಿಬರುತ್ತಿದ್ದು ಹಾಡಿಗೆ ತಕ್ಕಂತೆ ಕೈನಲ್ಲಿ ಗನ್ ಹಿಡಿದು ಆರೋಪಿಗಳು ಸಂಭ್ರಮಿಸಿದ್ದಾರೆ. ಈ ವೀಡಿಯೋದಲ್ಲಿ ಬಂಧಿತ ಆರೋಪಿ ಅಂಕಿತ್ ಸಿರ್ಸಾ ಕೂಡ ಕಾಣಿಸಿಕೊಂಡಿದ್ದಾನೆ. 18ರ ಹರೆಯದ ಅಂಕಿತ್ ಸಿರ್ಸಾ ಕಳೆದ ರಾತ್ರಿ ದೆಹಲಿಯಬಸ್ ಟರ್ಮಿನಲ್‌ನಲ್ಲಿ ಪೊಲೀಸರಿಗೆ ಸೆರೆ ಸಿಕ್ಕಿದ್ದ.
Advertisement
Advertisement
ಪಂಜಾಬಿ ಗಾಯಕನ ಹತ್ಯೆಯಲ್ಲಿ ಭಾಗಿಯಾಗಿದ್ದಲ್ಲದೇ, ಅಂಕಿತ್ ಸಿರ್ಸಾ ರಾಜಸ್ಥಾನದಲ್ಲಿ ನಡೆದ 2 ಕೊಲೆ ಯತ್ನ ಪ್ರಕರಣಗಳಲ್ಲೂ ಭಾಗಿಯಾಗಿದ್ದ. ಬಂಧಿತ ಇನ್ನೋರ್ವ ಆರೋಪಿ ಸಚಿನ್ ಭಿವಾನಿ, ಸಿಧು ಮೂಸೆವಾಲಾ ಹತ್ಯಾ ಪ್ರಕರಣದಲ್ಲಿ 4 ಜನ ಶೂಟರ್‌ಗಳಿಗೆ ಆಶ್ರಯ ನೀಡಿದ್ದ ಹಾಗಾಗಿ ಇವರಿಬ್ಬರೊಂದಿಗೆ ಮತ್ತಿಬ್ಬರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸಿಧು ಮೂಸೆವಾಲಾ ಹತ್ಯಾ ಪ್ರಕರಣ – ದೆಹಲಿಯಲ್ಲಿ ಗುಂಡು ಹಾರಿಸಿದವನ ಬಂಧನ
#WATCH | In a viral video, Sidhu Moose Wala's murder accused Ankit Sirsa, Priyavrat, Kapil, Sachin Bhivani, & Deepak brandished guns in a vehicle pic.twitter.com/SYBy8lgyRd
— ANI (@ANI) July 4, 2022
ಮೇ 29ರಂದು ಸಿಧು ಮೂಸೆವಾಲಾ ಅವರನ್ನು ಪಂಜಾಬ್‍ನಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದರು. ಹತ್ಯೆಗೂ ಹಿಂದಿನ ದಿನ ಮೂಸೆವಾಲಾ ಅವರ ಭದ್ರತೆಯನ್ನು ಪಂಜಾಬ್ ಸರ್ಕಾರ ಹಿಂಪಡೆದುಕೊಂಡಿತ್ತು.
Live Tv
[brid partner=56869869 player=32851 video=960834 autoplay=true]