ಚಂಡೀಗಢ: ಪಂಜಾಬಿ ಗಾಯಕ ಮತ್ತು ಕಾಂಗ್ರೆಸ್ ನಾಯಕ ಸಿಧು ಮೂಸೆ ವಾಲಾ ಅವರ ಪೋಷಕರು ಶನಿವಾರ ಚಂಡೀಗಢದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಇದೇ ವೇಳೆ ಸಿಧು ಮೂಸೆ ವಾಲಾ ರಾಜಕೀಯಕ್ಕೆ ಪ್ರವೇಶ ಮಾಡುತ್ತಿದ್ದಾರೆ ಎಂದು ಹರಿದಾಡುತ್ತಿರುವ ಗಾಸಿಪ್‌ಗಳಿಗೆ ಬ್ರೇಕ್ ಹಾಕಿದ್ದಾರೆ.
Advertisement
ಅಮಿತ್ ಶಾ ಅವರನ್ನು ಭೇಟಿಯಾಗುತ್ತಿದ್ದಂತೆ ಸಿಧು ಮೂಸ್ ವಾಲಾ ಅವರ ತಂದೆ ಮಗನ ಹತ್ಯೆ ಖಂಡಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಯ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ನಾನು ರಾಜಕೀಯಕ್ಕೆ ಬರುತ್ತೇನೆ ಎಂಬ ವಿಚಾರವಾಗಿ ಸಾಕಷ್ಟು ವದಂತಿಗಳಿದೆ. ಆದರೆ ಅವುಗಳನ್ನು ಯಾರೂ ನಂಬಬೇಡಿ. ಇತ್ತೀಚೆಗಷ್ಟೇ ನನ್ನ ಮಗನನ್ನು ಕಳೆದುಕೊಂಡಿದ್ದೇನೆ. ಚುನಾವಣೆಗೆ ಸ್ಪರ್ಧಿಸುವ ಯಾವ ಉದ್ದೇಶವನ್ನೂ ನಾನು ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ವೀಡಿಯೋದಲ್ಲಿ ಸಿಧು ಮೂಸೆ ವಾಲಾ ಅವರ ತಂದೆ ಅಮಿತ್ ಶಾ ಅವರ ಮುಂದೆ ಕಣ್ಣೀರು ಹಾಕುತ್ತಾ ತಮ್ಮ ಎರಡು ಕೈಗಳನ್ನು ಜೋಡಿಸಿ ಮಾತನಾಡುತ್ತಿರುವುದನ್ನು ಕಾಣಬಹುದಾಗಿದೆ.
Advertisement
Advertisement
ಈ ಮುನ್ನ ಪಂಜಾಬಿ ಗಾಯಕನ ಹತ್ಯೆ ಕುರಿತಂತೆ ಕೇಂದ್ರೀಯ ಸಂಸ್ಥೆಗಳು ತನಿಖೆ ನಡೆಸುವಂತೆ ಮೂಸೆ ವಾಲಾ ಕುಟುಂಬಸ್ಥರು ಅಮಿತ್ ಶಾ ಅವರಿಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದರು ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದ್ದಾರೆ. ಇದನ್ನೂ ಓದಿ: 424 ವಿಐಪಿಗಳಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆದ ಪಂಜಾಬ್ ಸರ್ಕಾರ
Advertisement
#WATCH | Punjabi singer Sidhu Moose Wala’s family met Union Home Minister Amit Shah in Chandigarh.
He was killed by unknown assailants in Mansa district on 29th May. pic.twitter.com/q0HA5Nzo80
— ANI (@ANI) June 4, 2022
ಸಿಧು ಮೂಸೆ ವಾಲಾ ಅವರನ್ನು ಮೇ 29ರಂದು ಮಾನ್ಸಾ ಬಳಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು 424 ಮಂದಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆಯುವ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದರು. ಅದರಲ್ಲಿ ಮೂಸೆ ವಾಲಾ ಕೂಡ ಒಬ್ಬರಾಗಿದ್ದರು. ಅವರ ಭದ್ರತೆಯನ್ನು ಹಿಂತೆಗೆದುಕೊಂಡ ಒಂದು ದಿನದ ನಂತರ ಈ ಘಟನೆ ಸಂಭವಿಸಿತ್ತು. ಇದನ್ನೂ ಓದಿ: ಸಿಧು ಮೂಸೆ ವಾಲಾ ಹತ್ಯೆ: ತನಿಖೆ ವೇಳೆ ಶಾಕಿಂಗ್ ವಿಚಾರ ಬಯಲು
ಮೂಸೆ ವಾಲಾ ಅವರು ಮಾನ್ಸಾ ಬಳಿಯ ಮೂಸ್ ವಾಲಾ ಗ್ರಾಮಕ್ಕೆ ಸೇರಿದವರಾಗಿದ್ದು, ಕಳೆದ ಕೆಲವು ವರ್ಷಗಳಲ್ಲಿ ಅನೇಕ ಸೂಪರ್ ಹಿಟ್ ಹಾಡುಗಳಿಗೆ ಧ್ವನಿಯಾಗಿದ್ದರು. ಮೂಸೆ ವಾಲಾ ಅವರು ಕಳೆದ ವರ್ಷ ನವೆಂಬರ್‌ನಲ್ಲಿ ಭಾರೀ ಅಬ್ಬರದ ನಡುವೆ ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದರು.