ಲಾಸ್ ಏಂಜಲೀಸ್: ಆಸ್ಕರ್ ವಿಜೇತ ಮೊದಲ ಕಪ್ಪುವರ್ಣೀಯ ಬಹಮಿಯನ್-ಅಮೆರಿಕನ್ ನಟ ಸಿಡ್ನಿ ಪೊಯ್ಟಿಯರ್ (94) ನಿಧನರಾಗಿದ್ದಾರೆ.
Advertisement
1963ರಲ್ಲಿ ʻಲಿಲೀಸ್ ಆಫ್ ದಿ ಫೀಲ್ಡ್ʼ ಚಲನಚಿತ್ರ ತೆರೆಕಂಡು ದೊಡ್ಡ ಮೈಲಿಗಲ್ಲನ್ನೇ ಸೃಷ್ಟಿಸಿತು. ಸಿನಿಮಾದಲ್ಲಿ ಸಿಡ್ನಿ ಅವರ ಅತ್ಯುತ್ತಮ ನಟನೆಗೆ ಆಸ್ಕರ್ ಒಲಿಯಿತು. ಸಿನಿಮಾರಂಗದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ಮೊದಲ ಕಪ್ಪು ವರ್ಣೀಯ ಎಂಬುದು ಮತ್ತೊಂದು ಇತಿಹಾಸ. ಇದನ್ನೂ ಓದಿ: ಆಸ್ಕರ್ ಪ್ರಶಸ್ತಿ ಪುರಸ್ಕೃತ, ಹಾಲಿವುಡ್ ನಿರ್ದೇಶಕ ಪೀಟರ್ ಬಾಗ್ಡಾನವಿಚ್ ನಿಧನ
Advertisement
ಪೊಯ್ಟಿಯರ್ ಒಬ್ಬ ಐಕಾನ್, ಹೀರೋ, ಮಾರ್ಗದರ್ಶಕ, ಹೋರಾಟಗಾರ, ನಿರ್ದೇಶಕ ಎಂದು ಬಹಮಿಯನ್ ಉಪ ಪ್ರಧಾನಿ ಚೆಸ್ಟರ್ ಕೂಪರ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ.
Advertisement
Advertisement
ಸಿಡ್ನಿ ಅವರು 1927ರಲ್ಲಿ ಬಹಮಿಯನ್ ರೈತ ಕುಟುಂಬದಲ್ಲಿ ಜನಿಸುತ್ತಾರೆ. ನಂತರ 1940ರಲ್ಲಿ ಸಿನಿಮಾ ರಂಗದಲ್ಲಿ ನಟನಾಗಿ ಕಾಣಿಸಿಕೊಳ್ಳುತ್ತಾರೆ. ಲಿಲೀಸ್ ಆಫ್ ದಿ ಫೀಲ್ಡ್ ಸಿನಿಮಾದಲ್ಲಿ ಅತ್ಯುತ್ತಮ ನಟನೆಗಾಗಿ 1964ರಲ್ಲಿ ಆಸ್ಕರ್ ಪ್ರಶಸ್ತಿ ವಿಜೇತರಾದರು. ನಂತರ 2002ರಲ್ಲಿ ಅಕಾಡೆಮಿ ಗೌರವ ಪ್ರಶಸ್ತಿಗೂ ಭಾಜನರಾದರು. 2009ರಲ್ಲಿ ಬರಾಕ್ ಒಬಾಮರಿಂದ ಯುಎಸ್ ಅಧ್ಯಕ್ಷೀಯ ಸ್ವಾತಂತ್ರ್ಯ ಪದಕವನ್ನು ದೇಶದ ಅತ್ಯುನ್ನತ ನಾಗರಿಕ ಗೌರವವಾಗಿ ಪಡೆದರು. ಇದನ್ನೂ ಓದಿ: ಭೂಮಿಯ ಸಮೀಪದಿಂದ ಹಾದುಹೋಗಲಿದೆ ಪರಮಾಣು ಬಾಂಬ್‌ಗಿಂತ 30 ಪಟ್ಟು ಹೆಚ್ಚು ಶಕ್ತಿಯ ಕ್ಷುದ್ರಗ್ರಹ