– ದೇಶದ ಎರಡನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆ
ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ (Shivamogga) ಜಿಲ್ಲೆಗೆ ಮತ್ತೊಂದು ಪ್ರವಾಸಿ ತಾಣದ ಮುಕಟವೊಂದು ಸೇರ್ಪಡೆಯಾಗಲಿದ್ದು, ಸೋಮವಾರ (ಜು. 14) ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ (Nithin Gadkari) ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಲಿದ್ದಾರೆ.
ಶಿವಮೊಗ್ಗ ಎಂದಾಕ್ಷಣ ಥಟ್ಟನೆ ನೆನಪಾಗೋದು ವಿಶ್ವ ವಿಖ್ಯಾತ ಜೋಗ ಜಲಪಾತ, ಕುವೆಂಪು ಕವಿ ಮನೆ, ಸಕ್ರೈಬೈಲು ಆನೆ ಬಿಡಾರ, ನಿಸರ್ಗ ತಾಣ ಆಗುಂಬೆ. ಹೀಗೆ ಹತ್ತಾರು ಪ್ರವಾಸಿ ತಾಣಗಳನ್ನ ತನ್ನ ಮಡಿಲಿನಲ್ಲಿ ಇಟ್ಟುಕೊಂಡಿರುವ ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಮುಕುಟ ಸೇರ್ಪಡೆಗೊಳ್ಳುತ್ತಿದೆ. ಅದೇ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣ ಆಗಿರುವ ಸಿಗಂದೂರಿನ ಹೊಸ ಸೇತುವೆ (Sigandur Bridge). ಇದನ್ನೂ ಓದಿ: ಲೈಂಗಿಕ ಬಯಕೆ ತೀರಿಸುವಂತೆ ಕಾಲೇಜು HODಯಿಂದ ಕಿರುಕುಳ – ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ
ಶರಾವತಿ ಹಿನ್ನೀರು ಪ್ರದೇಶಗಳಾದ ಕರೂರು ಬಾರಂಗಿ ಹೋಬಳಿಯ ನಾಲ್ಕು ಗ್ರಾಮ ಪಂಚಾತಿ ವ್ಯಾಪ್ತಿಯ ಜನರಿಗೆ ಹಾಗೂ ಪ್ರಸಿದ್ಧ ಸಿಗಂದೂರು, ಕೊಲ್ಲೂರು ದೇವಾಲಯಕ್ಕೆ ಸಂಪರ್ಕಕ್ಕಾಗಿ ಲಾಂಚ್ ಒಂದೇ ಆಧಾರವಾಗಿತ್ತು. ಹೀಗಾಗಿ ಕಳೆದ ಹಲವು ದಶಕಗಳಿಂದ ಈ ಭಾಗದ ಜನರು ಕಳಸವಳ್ಳಿ- ಅಂಬಾರಗೋಡ್ಲು- ಸಿಗಂದೂರು ಸೇತುವೆ ಮಾಡುವಂತೆ ಒತ್ತಾಯಿಸುತ್ತಿದ್ದರು. ಇದನ್ನೂ ಓದಿ: ಸಿನಿಮಾ ಹಾಡಿಗೆ ಡ್ಯಾನ್ಸ್ ಮಾಡುತ್ತಲೇ ಕುಸಿದು ಬಿದ್ದು ಸೇಲ್ಸ್ ಎಕ್ಸಿಕ್ಯೂಟಿವ್ ಸಾವು
ಹೀಗಾಗಿ 2019ರಲ್ಲಿ ಕೇಬಲ್ ಸೇತುವೆ ಕಾಮಗಾರಿ ಪ್ರಾರಂಭವಾಗಿತ್ತು. ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು 450 ಕೋಟಿ ರೂ. ವೆಚ್ಚದ ಕಾಮಗಾರಿಯ ಉದ್ಘಾಟನೆಯನ್ನು ಮಾಡಿದ್ದರು. 2020ರ ಡಿಸೆಂಬರ್‌ನಲ್ಲಿ ಪ್ರಾರಂಭವಾಗಿದ್ದ ಕಾಮಗಾರಿಯು ಅಂತ್ಯಗೊAಡಿದ್ದು, ನಾಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಸೇತುವೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಇದನ್ನೂ ಓದಿ: Tamil Nadu | ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಭಾರೀ ಅಗ್ನಿ ಅವಘಡ
ಈ ಸೇತುವೆಯು ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಕೊಲ್ಲೂರು ಮತ್ತು ಸಿಗಂದೂರು ದೇವಸ್ಥಾನಗಳನ್ನು ಸಂಪರ್ಕಿಸಲಿದೆ. 2.24 ಕಿ.ಮೀ ಉದ್ದದ ದೇಶದಲ್ಲೇ ಎರಡನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆ ಇದಾಗಿದೆ. ಈ ಸೇತುವೆಯ ಸುಮಾರು 2.24ಕಿ.ಮೀ. ಉದ್ದ ಹಾಗೂ 16 ಮೀಟರ್ ಅಗಲವನ್ನು ಹೊಂದಿದೆ. 740 ಮೀ. ಕೇಬಲ್‌ನ ಆಧಾರದ ಮೇಲೆ ನಿಂತಿರುವ ಸೇತುವೆ ಇದಾಗಿದೆ.
ಶರಾವತಿ ಹಿನ್ನೀರು ಭಾಗದ ಜನರ ಕನಸು ಒಂದೆಡೆ ನನಸಾದ್ರೆ, ಮತ್ತೊಂದೆಡೆ ಮಲೆನಾಡು ಶಿವಮೊಗ್ಗ ಪ್ರವಾಸೋದ್ಯಮಕ್ಕೆ ಈ ಕೇಬಲ್ ಆಧಾರಿತ ಸೇತುವೆ ಮತ್ತೊಂದು ಹೆಮ್ಮೆಯ ಸಂಗತಿಯಾಗಿದೆ.