ಭುವನೇಶ್ವರ್: ಒಡಿಶಾ ರೈಲು ದುರಂತ (Train Tragedy in Odisha) ಕ್ಕೆ ಸಿಗ್ನಲ್ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಇಂದು ಭೇಟಿ ನೀಡಿ ಅಧಿಕಾರಿಗಳು ಪರಿಶೀಲನೆ ಬಳಿಕ ಪ್ರಾಥಮಿಕ ವರದಿ ಸಲ್ಲಿಸಿದರು. ಇದನ್ನೂ ಓದಿ: ಒಡಿಶಾದಲ್ಲಿ ಭೀಕರ ರೈಲು ದುರಂತ: ಯಶ್, ಸುಮಲತಾ ಸೇರಿದಂತೆ ಹಲವರ ಸಂತಾಪ
Advertisement
Advertisement
ಏನಾಯಿತು..?: ಕೋರಮಂಡಲ್ ಎಕ್ಸ್ ಪ್ರೆಸ್ (Coromandel Express) ಗೆ ಗೊತ್ತುಪಡಿಸಿದ ಮುಖ್ಯ ಮಾರ್ಗದಲ್ಲಿ ಚಲಿಸಲು ಹಸಿರು ನಿಶಾನೆ ತೋರಲಾಗಿತ್ತು. ಆ ಬಳಿಕ ಹಸಿರು ನಿಶಾನೆ ಹಿಂದೆ ಪಡೆಯಲಾಗಿದೆ. ಈ ವೇಳೆಗೆ ರೈಲು ಲೂಪ್ ಲೈನ್ ಅನ್ನು ಪ್ರವೇಶಿಸಿ, ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಹಳಿತಪ್ಪಿತು. ಅಷ್ಟರಲ್ಲಿ ಡೌನ್ ಲೈನ್ ನಲ್ಲಿ ಯಶವಂತಪುರ (Yeshwanthpura) ದಿಂದ ಬಂದ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನ ಎರಡು ಬೋಗಿಗಳು ಹಳಿತಪ್ಪಿದವು. ಇದನ್ನೂ ಓದಿ: ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬ, ಗಾಯಾಳುಗಳಿಗೆ ಪರಿಹಾರ ಘೋಷಣೆ
Advertisement
Advertisement
ಒಡಿಶಾದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಏರುತ್ತಲೇ ಇದೆ. ದುರಂತಕ್ಕೆ ಇದುವರೆಗೆ ಬಲಿಯಾದವರ ಸಂಖ್ಯೆ 233 ಕ್ಕೆ ಏರಿದೆ. ಅಲ್ಲದೇ 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಚೆನ್ನೈ-ಕೊರಮಂಡಲ್ ಎಕ್ಸ್‍ಪ್ರೆಸ್ ರೈಲು, ಯಶವಂತಪುರ-ಹೌರ ರೈಲು ಹಾಗೂ ಗೂಡ್ಸ್ ರೈಲು ಮುಖಾಮುಖಿ ಡಿಕ್ಕಿಯಾಗಿದ್ದವು. ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಗ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿತು. 12841 ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾದ ರಭಸಕ್ಕೆ ಪ್ರಯಾಣಿಕರಿದ್ದ ರೈಲಿನ ಹಲವು ಬೋಗಿಗಳು ಹಳಿ ತಪ್ಪಿ, ಭೀಕರ ಅಪಘಾತದಲ್ಲಿ ಹಲವರು ಮೃತಪಟ್ಟಿದ್ದಾರೆ.