ಬೆಂಗಳೂರು: ವಿಸ್ತರಿಸಿದ ಹಸಿರು ಮಾರ್ಗದ (Greenline Metro) ನಾಗಸಂದ್ರದಿಂದ ಮಾದವರ ನಡುವೆ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆ ಮುಂದುವರಿಸುವ ಸಲುವಾಗಿ ಕೆಲವು ದಿನಗಳಂದು ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆಯಾಗಲಿದೆ ಎಂದು ಬಿಎಂಆರ್‌ಸಿಎಲ್ (BMRCL) ತಿಳಿಸಿದೆ.
ಆ.20, ಆ.23 ಮತ್ತು ಆ.30 ಹಾಗೂ ಸೆ.6 ಮತ್ತು ಸೆ.11ರಂದು ಪೀಣ್ಯ ಕೈಗಾರಿಕಾ ಪ್ರದೇಶ (Peenya Industry) ಮತ್ತು ನಾಗಸಂದ್ರ (Nagasandra) ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು ಪೂರ್ಣ ದಿನ ಸ್ಥಗಿತಗೊಳಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ನೈತಿಕತೆ ಇದ್ದರೆ ಸಿದ್ದರಾಮಯ್ಯ ಮುಡಾ ಸೈಟ್ ವಾಪಸ್ ಕೊಡಲಿ: ಎಸ್.ಆರ್.ಹಿರೇಮಠ್
ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಪೀಣ್ಯ ಇಂಡಸ್ಟ್ರಿ ಕಡೆಗೆ:
ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಪೀಣ್ಯ ಇಂಡಸ್ಟ್ರಿ ಕಡೆಗೆ ಆ.24ರಂದು ಕೊನೆಯ ರೈಲು ಸೇವೆಯು ರಾತ್ರಿ 11:05ರ ಬದಲಾಗಿ 10:00 ಗಂಟೆಗೆ ಪ್ರಾರಂಭವಾಗಲಿದೆ. ಆ.25ರಂದು ಮೊದಲ ರೈಲು ಸೇವೆಯು ಬೆಳಗ್ಗೆ 5:00 ಗಂಟೆಯ ಬದಲಾಗಿ 06:00 ಗಂಟೆಗೆ ಪ್ರಾರಂಭವಾಗಲಿದೆ. ಇದನ್ನೂ ಓದಿ: ಕೇಂದ್ರದ ವಿರೋಧ ಪಕ್ಷವನ್ನು ಮಣಿಸಲು ರಾಜ್ಯಪಾಲರನ್ನು ಏಜೆಂಟರಾಗಿ ಬಳಸುತ್ತಿದ್ದಾರೆ: ಆರ್.ವಿ ದೇಶಪಾಂಡೆ
ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣದ ಕಡೆಗೆ:
ಆ.24ರಂದು ಕೊನೆಯ ರೈಲು ರಾತ್ರಿ 11:12ಕ್ಕೆ ಸಂಚರಿಸಲಿದೆ. ಆ.25 ರಂದು ಮೊದಲ ರೈಲು ಸೇವೆಯು ಬೆಳಗ್ಗೆ 05:00ಕ್ಕೆ ಪ್ರಾರಂಭವಾಗಲಿದೆ. ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ನಮ್ಮ ಮೆಟ್ರೋ ತಿಳಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿ ಏನಾದರೂ ಗಲಾಟೆಯಾದರೆ ಅದಕ್ಕೆ ರಾಜ್ಯಪಾಲರೇ ಹೊಣೆ – ಜಮೀರ್ ಅಹ್ಮದ್ ಎಚ್ಚರಿಕೆ
ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಆರ್‌ಸಿಎಲ್ ಪ್ರಕಟಣೆ ಹೊರಡಿಸಿದೆ. ಇದನ್ನೂ ಓದಿ: ನನ್ನ ರಾಜೀನಾಮೆ ಕೇಳೋ ಅಶೋಕ್ ಮೊದಲು ವಾಸ್ತವಾಂಶ ತಿಳಿಯಲಿ: ಸಿದ್ದರಾಮಯ್ಯ