ನವದೆಹಲಿ: ಅಯೋಧ್ಯೆಯ ರಾಮ ಮಂದಿರದಲ್ಲಿ (Ayodhya Ram mandir) ಜನವರಿ 22 ರ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಮೊದಲು 11 ದಿನಗಳ ವ್ರತ ಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರಾಣ ಪ್ರತಿಷ್ಠೆಗೆ ಕೇವಲ 11 ದಿನಗಳು ಉಳಿದಿವೆ. ಶುಭ ಸಮಾರಂಭಕ್ಕೆ ಸಾಕ್ಷಿಯಾಗುವ ಸೌಭಾಗ್ಯ ನನ್ನದು. ಸಮಾರಂಭದಲ್ಲಿ ಭಾರತದ ಜನರನ್ನು ಪ್ರತಿನಿಧಿಸಲು ಭಗವಂತ ನನ್ನನ್ನು ಕೇಳಿದ್ದಾನೆ. ಅದನ್ನು ಗಮನದಲ್ಲಿಟ್ಟುಕೊಂಡು ನಾನು ಇಂದಿನಿಂದ 11 ದಿನಗಳ ವಿಶೇಷ ಆಚರಣೆಯನ್ನು ಪ್ರಾರಂಭಿಸುತ್ತಿದ್ದೇನೆ. ಇದಕ್ಕಾಗಿ ನಾನು ನಿಮ್ಮೆಲ್ಲರ ಆಶೀರ್ವಾದವನ್ನು ಕೋರುತ್ತೇನೆ. ಈ ಕ್ಷಣದಲ್ಲಿ ನನ್ನ ಭಾವನೆಗಳನ್ನು ಪದಗಳಲ್ಲಿ ವ್ಯಕ್ತಪಡಿಸುವುದು ತುಂಬಾ ಕಷ್ಟ, ಆದರೆ ನಾನು ನನ್ನ ಕಡೆಯಿಂದ ಪ್ರಯತ್ನಿಸಿದ್ದೇನೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಆಡಿಯೋ ಸಂದೇಶದಲ್ಲಿ ಪ್ರಧಾನಿ ಹೇಳಿದ್ದಾರೆ. ಇದನ್ನೂ ಓದಿ: ಜೀವನದಲ್ಲಿ ಮೊದಲ ಬಾರಿಗೆ ಭಾವುಕನಾಗಿದ್ದೇನೆ – 11 ದಿನಗಳ ವ್ರತ ಆರಂಭಿಸಿದ ಮೋದಿ
Advertisement
Advertisement
ವ್ರತದ ಮಹತ್ವ ಏನು..?: ಹಿಂದೂ ಶಾಸ್ತ್ರಗಳ ಪ್ರಕಾರ, ದೇವರ ವಿಗ್ರಹದ ‘ಪ್ರಾಣ ಪ್ರತಿಷ್ಠೆ’ ಒಂದು ವಿವರವಾದ ಆಚರಣೆಯಾಗಿದೆ. ಇದಕ್ಕೂ ಮುನ್ನ ಸಾಕಷ್ಟು ನಿಯಮಗಳನ್ನು ಅನುರಿಸಬೇಕಾಗುತ್ತದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಹಲವು ಜವಾಬ್ದಾರಿಗಳ ನಡುವೆಯೂ ಎಲ್ಲಾ ಆಚರಣೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ನಿರ್ಧರಿಸಿದ್ದಾರೆ. ಅದರ ಫಲವಾಗಿ 11 ದಿನಗಳ ವ್ರತಕ್ಕೆ ಇಂದು ಕೈ ಹಾಕಿದ್ದಾರೆ.
Advertisement
Advertisement
ಹಿಂದೂ ಧರ್ಮಗ್ರಂಥಗಳಲ್ಲಿ, ಉಪವಾಸಕ್ಕಾಗಿ ನಿರ್ದಿಷ್ಟ ಸೂಚನೆಗಳನ್ನು ನೀಡಲಾಗಿದೆ. ಅಂತೆಯೇ ತಮ್ಮ ದೈನಂದಿನ ದಿನಚರಿಯ ಭಾಗವಾಗಿ ಪ್ರಧಾನಿಯವರು ಬ್ರಹ್ಮ ಮುಹೂರ್ತ ಜಾಗರಣ, ಪ್ರಾರ್ಥನೆಗಳು ಮತ್ತು ಸರಳ ಆಹಾರದಂತಹ ಆಚರಣೆಗಳನ್ನು ಅನುಸರಿಸುತ್ತಾರೆ. ಇದನ್ನೂ ಓದಿ: ಮಂಗಳೂರಿನ ಸಂಘ ನಿಕೇತನದಿಂದ ಅಯೋಧ್ಯೆಗೆ ಹೊರಟ ನಮ್ಮನ್ನು ಡೈಮಂಡ್ ಗಂಜ್ನಲ್ಲಿ ಬಂಧಿಸಿದ್ರು!
ಜ. 16ರಿಂದಲೇ ಆರಂಭ: ಜನವರಿ 22 ರಂದು ಅಯೋಧ್ಯೆಯಲ್ಲಿನ ಭವ್ಯ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ವೈದಿಕ ವಿಧಿ-ವಿಧಾನಗಳು ಜನವರಿ 16 ರಂದು ಅಂದರೆ ಮುಖ್ಯ ಸಮಾರಂಭಕ್ಕೆ ಒಂದು ವಾರ ಮುಂಚಿತವಾಗಿ ಪ್ರಾರಂಭವಾಗುತ್ತವೆ. ಜನವರಿ 22 ರಂದು ವಾರಣಾಸಿಯ ಅರ್ಚಕರಾದ ಲಕ್ಷ್ಮೀಕಾಂತ್ ದೀಕ್ಷಿತ್ ಅವರು ಮುಖ್ಯ ‘ಪ್ರಾಣ ಪ್ರತಿಷ್ಠಾ’ ಸಮಾರಂಭವನ್ನು ನಿರ್ವಹಿಸಲಿದ್ದಾರೆ.
ಈ ಸಂದರ್ಭದಲ್ಲೇ ಸರಯೂ ನದಿ ದಂಡೆಯಲ್ಲಿ 1008 ಹುಂಡಿ ಮಹಾಯಜ್ಞವೂ ನಡೆಯಲಿದ್ದು, ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದೆ. ಸಾವಿರಾರು ಭಕ್ತರಿಗೆ ಅವಕಾಶ ಕಲ್ಪಿಸಲು ಅಯೋಧ್ಯೆಯಲ್ಲಿ ಹಲವಾರು ಟೆಂಟ್ ಸಿಟಿಗಳನ್ನು ಕೂಡ ನಿರ್ಮಿಸಲಾಗುತ್ತಿದೆ. ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಪ್ರಕಾರ, 10,000-15,000 ಜನರಿಗೆ ವ್ಯವಸ್ಥೆ ಮಾಡಲಾಗುವುದು. ಇನ್ನು ಕಾರ್ಯಕ್ರಮಕ್ಕೆ ಭಾರತ ಮತ್ತು ವಿದೇಶದಿಂದ ಹಲವಾರು ಗಣ್ಯರು ಆಹ್ವಾನಗಳನ್ನು ಸ್ವೀಕರಿಸಿರುವುದರಿಂದ ಕಾರ್ಯಕ್ರಮಕ್ಕೆ ಈಗಾಗಲೇ ಸಿದ್ಧತೆಗಳು ಕೊನೆಯ ಹಂತದಲ್ಲಿವೆ.