ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ (Vikrant Rona) ಸಿನಿಮಾಗೆ 2 ವಿಭಾಗದಲ್ಲಿ ಪ್ರತಿಷ್ಠಿತ ಸೈಮಾ (SIIMA 2023) ಪ್ರಶಸ್ತಿ ಒಲಿದು ಬಂದಿದೆ. ಅತ್ಯುತ್ತಮ ಉದಯೋನ್ಮುಖ ನಟಿ ಹಾಗೂ ಅತ್ಯುತ್ತಮ ಗಾಯಕಿ ಪ್ರಶಸ್ತಿ ವಿಕ್ರಾಂತ್ ರೋಣ ಸಿನಿಮಾಗೆ ನೀಡಲಾಗಿದೆ. ದುಬೈನಲ್ಲಿ ನಡೆದ ಸೈಮಾ ಅಂಗಳದಲ್ಲಿ ಗೋಲ್ಡನ್ ಬ್ಯೂಟಿಗೆ ನಾಯಕಿ ನೀತಾ ಅಶೋಕ್, ಗಾಯಕಿ ಸುನಿಧಿ ಚೌಹಾಣ್ (Sunidhi Chauhan) ಮುತ್ತಿಟ್ಟಿದ್ದಾರೆ.
ಅಜನೀಶ್ ಲೋಕನಾಥ್ ಟ್ಯೂನ್ ಹಾಕಿದ್ದ ಅನೂಪ್ ಭಂಡಾರಿ ಪದ ಪೋಣಿಸಿದ್ದ ರಾರಾ ರಕ್ಕಮ್ಮ ಹಾಡು ಸೂಪರ್ ಡೂಪರ್ ಹಿಟ್ ಆಗಿತ್ತು. ಈ ಜಬರ್ದಸ್ತ್ ಹಾಡಿನಲ್ಲಿ ಸುದೀಪ್ ಜೊತೆ ಬಾಲಿವುಡ್ ಬ್ಯೂಟಿ ಜಾಕ್ವೆಲಿನ್ ಫರ್ನಾಂಡಿಸ್ ಹೆಜ್ಜೆ ಹಾಕಿದ್ದರು. ಇದೇ ರಕ್ಮಮ್ಮನಿಗೆ ಸುನಿಧಿ ಚೌಹಾಣ್ ಕಂಠ ನೀಡಿದ್ದರು.
ದುಬಾರಿ ಬಜೆಟ್ ನಲ್ಲಿ ತಯಾರಾಗಿದ್ದ ವಿಕ್ರಾಂತ್ ರೋಣ ಸಿನಿಮಾಗೆ ಅನೂಪ್ ಭಂಡಾರಿ ಆಕ್ಷನ್ ಕಟ್ ಹೇಳಿದ್ದರು. ನೀತಾ ಆಶೋಕ ಈ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದರು. ಚೊಚ್ಚಲ ಚಿತ್ರದಲ್ಲಿ ಅದ್ಭುತವಾಗಿ ನಟಿಸಿದ್ದ ನೀತಾ (Neeta Ashok) ಸೈಮಾ ಪ್ರಶಸ್ತಿಗೆ ಮುತ್ತಿಟ್ಟಿದ್ದಾರೆ.
Web Stories