ಪ್ರತಿಷ್ಠಿತ ಸೈಮಾ ಪ್ರಶಸ್ತಿ ಮತ್ತೆ ಬಂದಿದೆ. ಈ ಅವಾರ್ಡ್ ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿದೆ. ಸೈಮಾ ಎಂದರೆ, ‘ಸೌತ್ ಇಂಡಿಯನ್ ಇಂಟರ್‌ನ್ಯಾಷನಲ್ ಅವಾರ್ಡ್’ ಎಂದು ಕರೆಯಲಾಗುತ್ತದೆ. ಈ ಪ್ರಶಸ್ತಿಯನ್ನು ಪ್ರಮುಖವಾಗಿ ಸೌತ್ ಸಿನಿಮಾರಂಗದಲ್ಲಿ ತಯಾರಾಗುವ ಸಿನಿಮಾಗಳಿಗೆ ಮಾತ್ರವೇ ಕೊಡಲಾಗುತ್ತದೆ. ಪ್ರತಿ ಬಾರಿ ಈ ಪ್ರಶಸ್ತಿ ಪಡದುಕೊಳ್ಳುವ ಸಿನಿಮಾ ಯಾವುವು, ಕಲಾವಿದರು ಯಾರು ಎನ್ನುವ ಕುತೂಹಲ ಇದ್ದೇ ಇರುತ್ತದೆ. 2024ರ ಸೈಮಾ ನಾಮಿನೇಷನ್ (SIIMA Nomination) ಪಟ್ಟಿ ಬಿಡುಗಡೆಯಾಗಿದ್ದು, ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂನ ಯಾವ ಸಿನಿಮಾಗಳು ರೇಸ್‌ನಲ್ಲಿವೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.
Advertisement
SIIMA ನ ಅಧ್ಯಕ್ಷರಾದ ಬೃಂದಾ ಪ್ರಸಾದ್ ಅವರು 2023ರ SIIMA ನಾಮನಿರ್ದೇಶನ ಸಿನಿಮಾ ಪಟ್ಟಿ ಘೋಷಿಸಿದ್ದಾರೆ. ನಾಮನಿರ್ದೇಶನ ಸಿನಿಮಾ ಬಗ್ಗೆ ಮಾತನಾಡುತ್ತಾ ಬೃಂದಾ ಪ್ರಸಾದ್, ಕಳೆದ ಎರಡು ವರ್ಷಗಳಲ್ಲಿ ದಕ್ಷಿಣ ಭಾರತದ ಸಿನಿಮಾದ ಪ್ರಾದೇಶಿಕ ಸಿನಿಮಾಗಳು ಭಾಷೆಯನ್ನು ಮೀರಿ ರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಹೀಗಾಗಿ SIIMA 2024 ಪ್ರಬಲ ಸ್ಪರ್ಧಿಗಳ ಪಟ್ಟಿಯನ್ನು ಹೊಂದಿರುತ್ತದೆ ಎಂದಿದ್ದಾರೆ.
Advertisement
Advertisement
ಸೈಮಾ ರೇಸ್‌ನಲ್ಲಿರುವ ಸಿನಿಮಾಗಳು:
Advertisement
ಕನ್ನಡ- ಕಾಟೇರ
ತೆಲುಗು- ದಸರಾ
ತಮಿಳು- ಜೈಲರ್
ಮಲಯಾಳಂ- 2018
‘ಕಾಟೇರ’ (Kaatera Film) ಹಾಗೂ ಸಪ್ತಸಾಗರದಾಚೆ ಎಲ್ಲೋ ಸೈಡ್-ಎ ಸಿನಿಮಾಗಳು ಸೈಮಾ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿವೆ. ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕಾಟೇರ ಚಿತ್ರ 8 ವಿಭಾಗಗಳಲ್ಲಿ ನಾಮಿನೇಟ್ ಆಗಿದೆ. ಅತ್ತ ರಕ್ಷಿತ್ ಶೆಟ್ಟಿ ನಟನೆಯ, ಹೇಮಂತ್ ರಾವ್ ನಿರ್ದೇಶನದ ಸಪ್ತಸಾಗರದಾಚೆ ಎಲ್ಲೋ ಸೈಡ್-ಎ ಚಿತ್ರ 7 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ತೆಲುಗಿನಲ್ಲಿ, ನಾನಿ ಮತ್ತು ಕೀರ್ತಿ ಸುರೇಶ್ ಅಭಿನಯದ ಶ್ರೀಕಾಂತ್ ಒಡೆಲಾ ನಿರ್ದೇಶನದ ‘ದಸರಾ’ (Dasara) ಚಿತ್ರ 11 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದ್ದು, ನಾನಿ ಮತ್ತು ಮೃಣಾಲ್ ಠಾಕೂರ್ ಅಭಿನಯದ ‘ಹಾಯ್ ನನ್ನಾ’ 10 ವಿಭಾಗಗಳಲ್ಲಿ ನಾಮಿನೇಷನ್ ಗೊಂಡಿದೆ.
ತಮಿಳಿನಲ್ಲಿ, ರಜನಿಕಾಂತ್ ಅಭಿನಯದ ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ‘ಜೈಲರ್’ 11 ವಿಭಾಗದಲ್ಲಿ ನಾಮನಿರ್ದೇಶನಗಳೊಂದಿಗೆ ಮುಂಚೂಣಿಯಲ್ಲಿದ್ದರೆ, ಉದಯನಿಧಿ ಸ್ಟಾಲಿನ್ ಮತ್ತು ಕೀರ್ತಿ ಸುರೇಶ್ ಅಭಿನಯದ ‘ಮಾಮಣ್ಣನ್’ ಸಿನಿಮಾ 9 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಮಲಯಾಳಂನಲ್ಲಿ, ಟೊವಿನೋ ಥಾಮಸ್ ಮತ್ತು ಆಸಿಫ್ ಅಲಿ ಅಭಿನಯದ ಜೂಡ್ ಆಂಥನಿ ಜೋಸೆಫ್ ನಿರ್ದೇಶನದ ‘2018’ ಸಿನಿಮಾ 8 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ, ಮಮ್ಮುಟ್ಟಿ ಮತ್ತು ಜ್ಯೋತಿಕಾ ಅಭಿನಯದ ‘ಕಾತಲ್ – ದಿ ಕೋರ್’ 7 ವಿಭಾಗಗಳಲ್ಲಿ ನಾಮಿನೇಷನ್ ಆಗಿದೆ.
ಆನ್‌ಲೈನ್ ವೋಟಿಂಗ್ ಮೂಲಕ ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ. ಅಭಿಮಾನಿಗಳು ತಮ್ಮ ನೆಚ್ಚಿನ ತಾರೆಯರು ಮತ್ತು ಚಲನಚಿತ್ರಗಳಿಗೆ www.siima.in ಮತ್ತು SIIMA ನ ಫೇಸ್‌ಬುಕ್ ಪುಟದಲ್ಲಿ ವೋಟ್ ಮಾಡಬಹುದು. ದುಬೈನಲ್ಲಿ ಸೆಪ್ಟಂಬರ್ 14 ಮತ್ತು 15ರಂದು 2024ರ ಸೈಮಾ ನಡೆಯಲಿದೆ.