ಭಾರತ-ಪಾಕ್ ನಡುವಿನ ‘ಕದನ ವಿರಾಮಕ್ಕೆ ಧನ್ಯವಾದಗಳು ದೇವರೇ’ ಎಂದು ಸಲ್ಮಾನ್ ಖಾನ್ (Salman Khan) ಪೋಸ್ಟ್ ಹಂಚಿಕೊಂಡು ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಪೋಸ್ಟ್ ಡಿಲೀಟ್ ಮಾಡಿದ್ದಾರೆ. ಇದನ್ನೂ ಓದಿ:ʻರಾಕಿ ಭಾಯ್ʼ ಫ್ಯಾನ್ಸ್‌ಗೆ ಗುಡ್‌ನ್ಯೂಸ್; KGF-3 ಬಗ್ಗೆ ಬಿಗ್ ಹಿಂಟ್ ಕೊಟ್ಟ ಹೊಂಬಾಳೆ ಫಿಲ್ಮ್ಸ್

‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ (Operation Sindoor) ಮೂಲಕ ಉಗ್ರರಿಗೆ ತಕ್ಕ ಪಾಠ ಕಲಿಸಿದ್ದಕ್ಕೆ ಚಿತ್ರರಂಗದ ಕಲಾವಿದರು ಮೆಚ್ಚುಗೆ ಸೂಚಿಸಿದ್ದರು. ಆದರೆ, ಸಲ್ಮಾನ್ ಈ ಬಗ್ಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ ಕದನ ವಿರಾಮ ಘೋಷಣೆ ಆಗ್ತಿದ್ದಂತೆ ರಿಯಾಕ್ಟ್ ಮಾಡಿದ್ದಕ್ಕೆ ನಟನ ವಿರುದ್ಧ ನೆಟ್ಟಿಗರು ಕೆಂಡಕಾರಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಜಾಡಿಸಿದ್ದಾರೆ.
ಏ.22ರಂದು ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ 26 ಮಂದಿ ಪ್ರವಾಸಿಗರು ಬಲಿಯಾಗಿದ್ದರು. ಈ ಹಿನ್ನೆಲೆ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಮೂಲಕ ಪಾಕ್‌ಗೆ ಭಾರತೀಯ ಸೇನೆ ತಕ್ಕ ಪಾಠ ಕಲಿಸಿದೆ.


