ಬೆಂಗಳೂರು: ರಾಹುಲ್ ಗಾಂಧಿ (Rahul Gandhi) ಸಂಸತ್ ಸದಸ್ಯತ್ವ ಅನರ್ಹ ವಿಚಾರವಾಗಿ ಕಾಂಗ್ರೆಸ್ (Congress) ಬುಧವಾರ ದೇಶವ್ಯಾಪಿ ಮೌನ ಪ್ರತಿಭಟನೆ (Protest) ನಡೆಸುತ್ತಿದೆ. ಬಿಜೆಪಿ (BJP) ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲೂ (Freedom Park) ‘ಕೈ’ ಮುಖಂಡರು ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.
ಬುಧವಾರ ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಪ್ರತಿಭಟನೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ (D.K.Shivakumar), ಕೆಪಿಸಿಸಿ ಕಾರ್ಯಾಧ್ಯಕ್ಷರು, ಸಚಿವರು, ಎಐಸಿಸಿ ಪದಾಧಿಕಾರಿಗಳು, ಸಂಸದರು ಹಾಗೂ ಶಾಸಕರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ವಿವೇಕಾನಂದರ ಬಗ್ಗೆ ಅವಹೇಳನ – ಅಮೋಘ ಲೀಲಾ ದಾಸ್‌ಗೆ ನಿಷೇಧ ಹೇರಿದ ಇಸ್ಕಾನ್
ರಾಹುಲ್ ಗಾಂಧಿ ಸಂಸತ್ ಸ್ಥಾನ ಅನರ್ಹತೆಯನ್ನು ಕೋರ್ಟ್ ಎತ್ತಿ ಹಿಡಿದಿದ್ದು, ರಾಗಾ ಹಿನ್ನಡೆಯನ್ನು ಖಂಡಿಸಿ ಕಾಂಗ್ರೆಸ್ ಈ ಪ್ರತಿಭಟನೆಯನ್ನು ಕೈಗೊಂಡಿದೆ. ರಾಹುಲ್ ಗಾಂಧಿಯ ಸತ್ಯದ ನುಡಿಗಳನ್ನು ಸಹಿಸಿಕೊಳ್ಳದ ಪ್ರಧಾನ ಮಂತ್ರಿಗಳು ಅವರ ಮೇಲೆ ಎಲ್ಲಾ ಸೇಡಿನ ಕ್ರಮಗಳನ್ನು ಅನುಸರಿಸುತ್ತಿದ್ದಾರೆ. ರಾಹುಲ್ ಗಾಂಧಿ ಅವರಿಗೆ ನೀಡಿರುವ ಶಿಕ್ಷೆ ಮತ್ತು ಅನರ್ಹತೆಯನ್ನು ಇಡೀ ರಾಷ್ಟ್ರವೇ ಖಂಡಿಸುತ್ತಿದೆ. ಬಿಜೆಪಿಯ ದ್ವೇಷ ರಾಜಕಾರಣವನ್ನು ಖಂಡಿಸಿ ಈ ಪ್ರತಿಭಟನೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಇಂದು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ. ಇದನ್ನೂ ಓದಿ: ಇಂಗ್ಲಿಷ್ ಇರೋದೇ ತಪ್ಪು ಮಾತಾಡೋಕೆ, ಕನ್ನಡ ಇರೋದು ಸರಿಯಾಗಿ ಮಾತನಾಡಲು: ಪ್ರದೀಪ್ ಈಶ್ವರ್
ಫ್ರೀಡಂ ಪಾರ್ಕಿನಲ್ಲಿ ಕಾಂಗ್ರೆಸ್ ನಾಯಕರು ಬಾಯಿಗೆ ಕಪ್ಪು ಪಟ್ಟಿಯನ್ನು ಕಟ್ಟಿಕೊಂಡು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ರಾಹುಲ್ ಗಾಂಧಿ ಹೋರಾಟಕ್ಕೆ ಸೋಲಿಲ್ಲ, ಸತ್ಯದ ಮಾತಿಗೆ ಸಾವಿಲ್ಲ ಎಂಬ ಘೋಷಣೆಯನ್ನು ಕೂಗುವ ಮೂಲಕ ಪ್ರತಿಭಟನೆಯನ್ನು ನಡೆಸುತ್ತಿದ್ದು, ಈ ಪ್ರತಿಭಟನೆಯಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಬೋಸರಾಜು, ಸಂತೋಷ ಲಾಡ್ ಹಾಗೂ 10ಕ್ಕೂ ಹೆಚ್ಚು ಶಾಸಕರು ಭಾಗಿಯಾಗಿದ್ದಾರೆ. ಅಲ್ಲದೇ ಮಹಿಳಾ ಕಾಂಗ್ರೆಸ್ ಕಾರ್ಯಕತೆಯರು ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ನ್ಯಾಯದ ತಕ್ಕಡಿ ಹಿಡಿದು ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಆನ್‌ಲೈನ್ ಗೇಮ್ಸ್‌ಗೆ 28% ಜಿಎಸ್‌ಟಿ – ಸ್ಟಾರ್ಟಪ್ ಮಾಲೀಕರ ರಾಜಕೀಯ ಪ್ರವೇಶಕ್ಕೆ ಸೂಕ್ತ ಕಾಲ ಎಂದ ಭಾರತ್‌ಪೇ ಸಂಸ್ಥಾಪಕ
ಕಾಂಗ್ರೆಸ್‌ನ ಮೌನ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮಾತು ಹೆಚ್ಚಾಗುತ್ತಿದ್ದಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy), ಇದು ಮೌನ ಪ್ರತಿಭಟನೆ. ಸೈಲೆಂಟ್ ಆಗಿರಿ ಎಂದು ಸೂಚನೆಯನ್ನು ನೀಡಿದ್ದಾರೆ. ಅವರ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆಯನ್ನು ನೀಡಿದ್ದು, ನಿಮ್ಮ ಮಾತು ವಿಧಾನಸೌಧಕ್ಕೆ ಕೇಳಿಸುತ್ತಿದೆ. ತಾಳ್ಮೆಯಿಂದ ನಿಮ್ಮ ಕುರ್ಚಿಯಲ್ಲಿ ಕುಳಿತುಕೊಳ್ಳಿ. ಮಾತನಾಡುವುದನ್ನು ನಿಲ್ಲಿಸಬೇಕು. ಎಷ್ಟೇ ದೊಡ್ಡವರಾದರೂ ಕುಳಿತುಕೊಳ್ಳಬೇಕು. ಕುಳಿತುಕೊಳ್ಳಲು ಆಗಲಿಲ್ಲ ಎಂದರೆ ಮನೆಗೆ ಹೋಗಿ ಎಂದು ಗದರಿದರು. ಇದನ್ನೂ ಓದಿ: ಕಾಂಗ್ರೆಸ್ ಮಂತ್ರಿಗಳ ಜೊತೆ ನಮ್ಮ ಅಡ್ಜಸ್ಟ್‌ಮೆಂಟ್ ರಾಜಕೀಯ ಇಲ್ಲ: ಯತ್ನಾಳ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]