ರಾಮನಗರ: ಅಯೋಧ್ಯೆ (Ayodhya) ರಾಮಮಂದಿರ (RamMandir) ನಿರ್ಮಾಣಕ್ಕೆ ರಾಮನಗರದಿಂದ ಬೆಳ್ಳಿ ಇಟ್ಟಿಗೆ ಅರ್ಪಿಸಲಾಗುತ್ತಿದೆ.
ಬೆಳ್ಳಿ ಇಟ್ಟಿಗೆಗೆ ರಾಮನ ಭಕ್ತರಿಂದ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ಮಾಜಿ ಸಚಿವ ಸಿ.ಪಿ ಯೋಗೇಶ್ವರ್ (CP Yogeshwara) ಸಮ್ಮುಖದಲ್ಲಿ ರಾಮನಗರ ಕೆಂಗಲ್ ಆಂಜನೇಯ ದೇವಾಲಯ, ರಾಮದೇವರ ಬೆಟ್ಟದಲ್ಲಿ ಪೂಜೆ ಸಲ್ಲಿಸಲಾಯಿತು. ಇದನ್ನೂ ಓದಿ: ಪ್ರೀತಂಗೌಡ ನಮಗೆ ಅಣ್ಣನ ಸಮಾನ – ವೀಡಿಯೋವನ್ನು ತಿರುಚಿ ವೈರಲ್ ಮಾಡಿದ್ದಾರೆ: ಸ್ಥಳೀಯರ ಆಕ್ರೋಶ
ಬಿಜೆಪಿ (BJP) ಮುಖಂಡ ಗೌತಮ್ ಗೌಡ ನೇತೃತ್ವದಲ್ಲಿ 150 ಮಂದಿ ಶ್ರೀರಾಮನ ಭಕ್ತರು ಅಯೋಧ್ಯೆಗೆ ಬೆಳ್ಳಿ ಇಟ್ಟಿಗೆ ಸಮರ್ಪಿಸಲು ನಿರ್ಧರಿಸಲಾಯಿತು. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಜೊತೆ ಹೆಜ್ಜೆ ಹಾಕಿದ ಪ್ರಿಯಾಂಕಾ ಗಾಂಧಿ ಮಗಳು
2024ಕ್ಕೆ ರಾಮಮಂದಿರ ಪೂರ್ಣ: ಇತ್ತೀಚೆಗೆ ರಾಮಜನ್ಮಭೂಮಿಯ ಟ್ರಸ್ಟ್ನ ಟ್ರಸ್ಟಿಗಳಾದ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರು, ಅಯೋಧ್ಯೆಯ ರಾಮ ಮಂದಿರ ನಿರ್ಮಾಣದ ಪ್ರತಿಷ್ಠಾಪನಾ ಮಹೋತ್ಸವ 2024ರ ಮಕರ ಸಂಕ್ರಾಂತಿ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದರು.
ಸಮಿತಿ ಸದಸ್ಯರೂ ಈ ಬಗ್ಗೆ ಮಾಹಿತಿ ನೀಡಿ, ಆಶಿಷ್ ಸೋಂಪುರ ಅವರು ಮಂದಿರದ ವಾಸ್ತುಶಿಲ್ಪಿಯಾಗಿದ್ದು, ನಿರ್ಮಾಣ ಸಮಿತಿಗೆ ನೃಪೇಂದ್ರ ಮಿಶ್ರಾ, ಪ್ರದೀಪ್ ಕುಮಾರ್ ಹಾಗೂ ಪ್ರೊ.ಗೋಪಾಲ ಕೃಷ್ಣನ್ ಇತರರು ಸದಸ್ಯರಿದ್ದಾರೆ. ಈಗಾಗಲೇ ಮಂದಿರದ ಇತರ ಭಾಗಗಳ ನಿರ್ಮಾಣ ಪ್ರಗತಿಯಲ್ಲಿದೆ. ರಾಜಸ್ಥಾನದ ಬನ್ಸಿ ಪಹಾಡ್‌ಪುರ ಜಿಲ್ಲೆಯಿಂದ ಮರಳುಗಲ್ಲುಗಳನ್ನು ತರಿಸಿಕೊಂಡು ಕೆತ್ತನೆ ಮಾಡಲಾಗುತ್ತಿದೆ. ಮಂದಿರದ ಮೇಲುಕಟ್ಟಡ ನಿರ್ಮಾಣಕ್ಕೆ 4.75 ಲಕ್ಷ ಕ್ಯೂಬಿಕ್ ಅಡಿ ಮರಳುಗಲ್ಲು ಬಳಸಲಾಗುತ್ತದೆ. ಗರ್ಭಗುಡಿಯ ಮೊದಲ ಮಹಡಿಯ ನಿರ್ಮಾಣವೂ ಬಹುತೇಕ ಪೂರ್ಣವಾಗಿದೆ ಎಂದು ತಿಳಿಸಿದ್ದರು.