ವಿಜಯಪುರ: ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (SIMI)ಯ ಮತ್ತೊಂದು ಪ್ರತಿರೂಪ ಪಿಎಫ್‍ಐ. ಸಿಮಿ ಸಂಘಟನೆ ಹುಟ್ಟಿಕೊಂಡಿದ್ದೇ ವಿಜಯಪುರದಿಂದ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹೇಳಿದ್ದಾರೆ.
Advertisement
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಮುಖಂಡರು, ಕಾರ್ಯಕರ್ತರ ಬಂಧನ ವಿಚಾರವಾಗಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಶಾಸಕರು, ಪಿಎಫ್‍ಐ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬ್ಯಾನ್ ಮಾಡಬೇಕು. ಎರಡು ದೇಶ ವಿರೋಧಿ ಚಟುವಟಿಕೆ ಮಾಡುತ್ತಿದ್ದಾರೆ.
Advertisement
Advertisement
ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಯವರಿಗೆ ಸಾರ್ವಜನಿಕ ಪ್ರದೇಶದಲ್ಲಿ ಬಾಂಬ್ ಹಾಕುವಂತಹ ಪ್ರಯತ್ನ ಮಾಡಿದ್ರು. ಅನೇಕ ಗಂಭೀರ ಆರೋಪಗಳು ದೇಶದಲ್ಲಿ ಸಾಕಷ್ಟು ಚರ್ಚೆಗೊಳಪಟ್ಪಿದ್ದವು. ಕೇಂದ್ರ ಸರ್ಕಾರ ಅತ್ಯಂತ ದೃಢ ನಿಲುವು ತಗೊಂಡಿದೆ ಎಂದರು. ಇದನ್ನೂ ಓದಿ: PFI, SDPI ಬೆಳೆಯಲು ಕಾರಣವೇ ಸಿದ್ದರಾಮಯ್ಯ: ನಳಿನ್ ಕುಮಾರ್ ಕಟೀಲ್
Advertisement
ಇಡೀ ದೇಶದ ಇತಿಹಾಸದಲ್ಲಿ ಒಂದೇ ರಾತ್ರಿ 200 ಕಡೆಗಳಲ್ಲಿ ದಾಳಿ ಮಾಡಿದಾಗ ವಿದೇಶಿ ಹಣ (Foreign Money) ದ ದಾಖಲೆ ಸಿಕ್ಕಿವೆ. ಎರಡು ಸಂಘಟನೆಗಳನ್ನು ಬ್ಯಾನ್ ಮಾಡಬೇಕು ಅನ್ನೋದು ದೇಶಭಕ್ತರ ಆಗ್ರಹವಿದೆ. ಪ್ರಧಾನಿ, ಗೃಹಮಂತ್ರಿಗಳು ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದಾರೆ. ನಿಶ್ಚಿತವಾಗಿ ಶೀಘ್ರದಲ್ಲೇ ಪಿಎಫ್‍ಐ, ಎಸ್‍ಡಿಪಿಐ ಸಂಘಟನೆಗಳು ಬ್ಯಾನ್ ಆಗುತ್ತವೆ ಅನ್ನೋ ವಿಶ್ವಾಸವಿದೆ ಎಂದು ಅವರು ತಿಳಿಸಿದರು.
ಸಿಮಿ ದೇಶ ವಿರೋಧಿ ಚಟುವಟಿಕೆ ಮೊದಲು ಆರಂಭವಾಗಿದ್ದೇ ವಿಜಯಪುರದಲ್ಲಿ. ಅದು ಇಡೀ ದೇಶದಲ್ಲಿ ಬೆಳೆದು ಸಿಮಿ ಆಗಿತ್ತು. ನಂತರ ಪಿಎಫ್‍ಐ ಆಗಿ ಪರಿವರ್ತನೆ ಆಗಿದೆ. ಯಾರೇ ಇದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.