ಭಿನ್ನ ಸಿನಿಮಾಗಳನ್ನ ಪ್ರಸ್ತುತಪಡಿಸುವುದರಲ್ಲಿ ನಿರ್ದೇಶಕ ಸಿಂಪಲ್ ಸುನಿ ಯಾವಾಗಲೂ ಮುಂದು. ಡಿಫರೆಂಟ್ ಕಥೆ ಹೊತ್ತು `ಗತವೈಭವ’ ಚಿತ್ರದ ಮೂಲಕ ಸದ್ದು ಮಾಡ್ತಿದ್ದಾರೆ. `ಅವತಾರ ಪುರುಷ’ ಚಿತ್ರದ ನಂತರ ಮತ್ತೆ ಆಶಿಕಾ ರಂಗನಾಥ್‌ಗೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ʻಗತವೈಭವʼ ಚಿತ್ರಕ್ಕೆ ನಾಯಕಿಯಾಗಿ ಪಟಾಕಿ ಪೋರಿ ಸಾಥ್ ನೀಡ್ತಿದ್ದಾರೆ.
View this post on Instagram
ರೊಮ್ಯಾಂಟಿಕ್ ಲವ್ ಸ್ಟೋರಿ ಸಿನಿಮಾದಲ್ಲಿ ಸೈಂಟಿಫಿಕ್ ಥ್ರಿಲ್ಲರ್ ಕಂಟೆಂಟ್ ಕೂಡ ಇರಲಿದ್ದು, ಈಗಾಗಲೇ 40ರಷ್ಟು ಕಂಪ್ಲೀಟ್ ಆಗಿದೆ. ಚಿತ್ರದಲ್ಲಿ ಆಶಿಕಾ ದುಷ್ಯಾಂತ್‌ಗೆ ಜೋಡಿಯಾಗಿ ನಟಿಸಲಿದ್ದು, ದೇವಕನ್ಯೆ ಹಾಗೂ ಪೋರ್ಚುಗೀಸ್ ಯುವತಿ ಪಾತ್ರದಲ್ಲಿ ಅಭಿನಯಿಸಲಿದ್ದಾರೆ. ಗತವೈಭವ ಸಿನಿಮಾಕ್ಕೆ ಕಥೆ-ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದು, ಸುನಿ ಸಿನಿಮಾಸ್ ಸಂಸ್ಥೆಯಡಿ ದೀಪಿಕ್ ಹಾಗೂ ಸುನಿ ಚಿತ್ರ ನಿರ್ಮಾಣ ಮಾಡ್ತಿದ್ದು, ವಿಲಿಯಂ ಡೇವಿಡ್ ಕ್ಯಾಮೆರಾ ವರ್ಕ್, ಜೂಡಾ ಸ್ಯಾಂಡಿ ಸಂಗೀತ ಚಿತ್ರಕ್ಕಿದೆ.
Live Tv
[brid partner=56869869 player=32851 video=960834 autoplay=true]