ನೆಲಮಂಗಲ: ಇಂದು ನಾಡಿನೆಲ್ಲೆಡೆ ವೈಕುಂಠ ಏಕಾದಶಿ. ಆದರೆ ಕೊರೊನಾ ಮೂರನೇ ಅಲೆಯ ಪ್ರಾರಂಭವಾಗಿರುವ ಹಿನ್ನೆಲೆ ಸರಳ ರೀತಿಯಲ್ಲಿ ಸರ್ಕಾರದ ನಿಯಮಾವಳಿ ಪ್ರಕಾರ ಆಚರಣೆ ಮಾಡಲಾಗುತ್ತಿದೆ. ಅದೇ ರೀತಿ ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ದಾಸನಪುರದ ಸುಮಾರು 800 ವರ್ಷಗಳ ಇತಿಹಾಸವಿರುವ ಪುರಾತನ ದೇವಾಲಯದಲ್ಲಿ ಸರಳವಾಗಿ ವೈಕುಂಠ ಏಕಾದಶಿಯನ್ನು ಆಚರಣೆ ಮಾಡಲಾಗಿದೆ.
Advertisement
ನೆಲಮಂಗಲ ಸಮೀಪದ ದಾಸನಪುರದಲ್ಲಿರುವ ಶ್ರೀದೇವಿ ಭೂದೇವಿ ಸಮೇತ ಶ್ರೀ ಲಕ್ಷ್ಮೀ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಇಂದು ವೈಕುಂಠದಲ್ಲಿ ಸ್ವರ್ಗದ ಬಾಗಿಲು ತೆರೆಯುತ್ತೆ ಎಂಬ ಪ್ರತೀತಿ ಇದೆ. ಇದನ್ನು ಭಕ್ತರು ಸಹ ನಂಬುತ್ತಾರೆ. ಅದಕ್ಕೆ ದೇವಾಲಯದ ಉತ್ತರ ಬಾಗಿಲು ಮೂಲಕ ಭಕ್ತರು ದರ್ಶನವನ್ನು ಪಡೆಯುತಿದ್ದಾರೆ. ಇದನ್ನೂ ಓದಿ: ಸಂಕ್ರಾಂತಿ ಹಬ್ಬಕ್ಕೆ ಮಾಡಿ ಎಳ್ಳಿನ ಲಡ್ಡು
Advertisement
Advertisement
ಪ್ರಧಾನ ಅರ್ಚಕ ಕೃಷ್ಣಮೂರ್ತಿ ಮತ್ತು ಆಡಳಿತ ಮಂಡಳಿ ಅಧ್ಯಕ್ಷ ಲಕ್ಷ್ಮಣಮೂರ್ತಿ ಈ ಕುರಿತು ಮಾಹಿತಿ ನೀಡಿದ್ದು, ಈ ಬಾರಿ ಕೊರೊನಾ ನಿಯಮ ಪಾಲನೆ ಮಾಡುವ ಮೂಲಕ ದರ್ಶನಕ್ಕೆ ದೇವಾಲಯದಲ್ಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಮೂಲಕ ಸಂಸ್ಥೆ ಭಕ್ತರಿಗೆ ದೇವರ ದರ್ಶನ ಪಡೆಯಲು ಅನುವು ಮಾಡಿಕೊಟ್ಟಿದೆ. ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ಇದ್ದು, ಯಾವುದೇ ಪ್ರಸಾದ ವಿನಿಮಯವಿಲ್ಲ. ದೇವರಿಗೆ ವಿಶೇಷವಾಗಿ ವಿವಿಧ ಹೂಗಳಿಂದ ಅಲಂಕರಿಸಿ ಸರ್ಕಾರದ ನಿಯಮದಂತೆ ಆಚರಣೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.