ವಿಜಯಪುರ: ತೀವ್ರ ಕುತೂಹಲ ಮೂಡಿಸಿರುವ ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, 4,031 ಮತಗಳ ಅಂತರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
Advertisement
ಎರಡನೇ ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದೆ. ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ 9,645, ಕಾಂಗ್ರೆಸ್‌ನ ಅಶೋಕ ಮನಗೂಳಿ 5,614 ಹಾಗೂ ಜೆಡಿಎಸ್‌ನ ಅಭ್ಯರ್ಥಿ ನಾಜಿಯಾ ಅಂಗಡಿ 282 ಮತಗಳನ್ನು ಪಡೆದುಕೊಂಡಿದ್ದಾರೆ. 16 ಟೇಬಲ್‌ನಲ್ಲಿ 22 ಸುತ್ತು ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: ಸಿಂದಗಿಯಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆ ಅಭ್ಯರ್ಥಿ ರಮೇಶ್ ಭೂಸನೂರು ಹರ್ಷ
Advertisement
ಮೊದಲನೇ ಸುತ್ತಿನಲ್ಲಿ ಬಿಜೆಪಿ 5,255, ಕಾಂಗ್ರೆಸ್ 2,054 ಹಾಗೂ ಜೆಡಿಎಸ್ 73 ಮತಗಳನ್ನು ಪಡೆದಿತ್ತು.
Advertisement
Advertisement
ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದ್ದು, ಮಧ್ಯಾಹ್ನದ ಹೊತ್ತಿಗೆಲ್ಲಾ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗಲಿದೆ. ವಿಜಯಪುರದ ಸೈನಿಕ ಶಾಲೆಯಲ್ಲಿ ಮತ ಎಣಿಕೆ ನಡೆಯುತ್ತಿದೆ. ಇದನ್ನೂ ಓದಿ: ಸಿಎಂ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಹಿನ್ನಡೆ – ಕಾಂಗ್ರೆಸ್ ಮುನ್ನಡೆ
ಅಕ್ಟೋಬರ್ 30 ರಂದು ನಡೆದ ಉಪ ಚುನಾವಣೆಯಲ್ಲಿ ಸಿಂದಗಿಯಲ್ಲಿ ಶೇಕಡಾ 69.41ರಷ್ಟು ಮತದಾನ ನಡೆದಿತ್ತು. ಕಾಂಗ್ರೆಸ್‍ನ ಅಶೋಕ್ ಮನಗೂಳಿ, ಬಿಜೆಪಿಯ ರಮೇಶ್ ಭೂಸನೂರ, ಜೆಡಿಎಸ್‌ನ ನಾಜಿಯಾ ನಡುವೆ ತ್ರಿಕೋನ ಪೈಪೋಟಿ ಕಂಡುಬಂದಿತ್ತು.