ವಿಜಯಪುರ: ಸಿಂದಗಿ (Sindagi) ಪಟ್ಟಣದ ವಿರಕ್ತ ಮಠದ (Virakta Mutt) ಆಸ್ತಿ ಇದೀಗ ವಕ್ಫ್ ಆಸ್ತಿಯಾಗಿದೆ. ಸರ್ವೆ ನಂ 1020 ರ ಅಸ್ತಿಯಲ್ಲಿ ಕಬರಸ್ಥಾನ ವಕ್ಫ್ ಬೋರ್ಡ್ (Waqf Board) ಎಂದು ನೋಂದಣಿಯಾಗಿದೆ.
ಸಿದ್ದಲಿಂಗ ಸ್ವಾಮಿಜಿಗಳು ಈ ಮಠದ ಪೀಠಾಧಿಪತಿಗಳಾಗಿದ್ದಾಗ ಪಹಣಿಯ ಕಾಲಂ ನಂ 11 ಖಾಲಿ ಇತ್ತು. 2018 – 2019 ರಲ್ಲಿ ವಕ್ಫ್ ಬೋರ್ಡ್ ಎಂದು ಸೇರ್ಪಡೆಯಾಗಿದೆ. ಇದನ್ನೂ ಓದಿ: ವಿಜಯಪುರ ಆಯ್ತು ಈಗ ಯಾದಗಿರಿಯ 1440 ರೈತರಿಗೆ ವಕ್ಫ್ ಬಿಗ್ ಶಾಕ್!
- Advertisement -
- Advertisement -
ವಕ್ಫ್ ಬೋರ್ಡ್‌ಗೆ 1.28 ಎಕರೆ ಆಸ್ತಿಯನ್ನು ಸೇರಿಸಿದ್ದಕ್ಕೆ ಮಠದ ಭಕ್ತರ ತೀವ್ರ ವಿರೋಧ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. 13ನೇ ಶತಮಾನದಲ್ಲಿ ಸ್ಥಾಪನೆಯಾಗಿರುವ ಮಠ ಖಬರಸ್ಥಾನ ವಕ್ಫ್ ಬೋರ್ಡ್ ಆಗಿದ್ದು ಹೇಗೆ ಎಂದು ಭಕ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
- Advertisement -
- Advertisement -
ಇದೆ ರೀತಿ ಸಿಂದಗಿ ತಾಲೂಕಿನಲ್ಲಿ ಅನೇಕ ಹಿಂದೂ ಮಠಗಳು ಆಸ್ತಿ ವಕ್ಫ್ ಬೋರ್ಡ್ ಸೇರಿದೆ ಎಂಬ ಶಂಕೆಯನ್ನು ಭಕ್ತರು ವ್ಯಕ್ತಪಡಿಸಿದ್ದಾರೆ. ವಕ್ಫ್ ಬೋರ್ಡ್‌ಗೆ ಸೇರ್ಪಡೆಯಾದ ವಿಚಾರ ತಿಳಿದು ಭಕ್ತರು ಈಗ ಮಠದ ಮುಂದೆ ಜಮಾಯಿಸುತ್ತಿದ್ದಾರೆ.