ನವದೆಹಲಿ: ಸಿಂಗಾಪುರದಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡದೇ ಇರುವ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಈ ವಿಚಾರವಾಗಿ ಯಾರನ್ನೂ ದೂಷಿಸುವುದಿಲ್ಲ ಎಂದು ಹೇಳಿದ್ದಾರೆ.
ನನ್ನ ಪ್ರಯಾಣದ ಪ್ರಸ್ತಾಪವನ್ನು ರಾಷ್ಟ್ರ ರಾಜಧಾನಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ತಿರಸ್ಕರಿಸಿದ್ದಾರೆ. ಸಿಂಗಾಪುರದಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಭಾಗವಹಿಸಿ, ನನ್ನ ಅಭಿಪ್ರಾಯ ಹಾಗೂ ಭಾರತದಲ್ಲಿ ನಡೆಯುತ್ತಿರುವ ಕೆಲಸಗಳನ್ನು ಪ್ರಪಂಚದೊಂದಿಗೆ ಹಂಚಿಕೊಳ್ಳಲು ಅನುಮತಿ ಸಿಕ್ಕಿದ್ದರೆ ಚೆನ್ನಾಗಿರುತ್ತಿತ್ತು. ಆದರೂ ನಾನು ಈ ವಿಚಾರವಾಗಿ ಯಾರನ್ನೂ ದೂಷಿಸುವುದಿಲ್ಲ ಎಂದಿದ್ದಾರೆ.
Advertisement
CM @ArvindKejriwal on Centre cancelling his Singapore visit-
World is already talking abt Delhi Model. Ex-UN Gen Sec, Ex-PM of Norway, Melania Trump, they all came to Delhi
It would’ve been good if I could go & share with the world the work being done in India. But it’s alright pic.twitter.com/gWQ9vAKmGa
— AAP (@AamAadmiParty) July 29, 2022
Advertisement
ನಿನ್ನೆಯಷ್ಟೇ ದೆಹಲಿ ಸರ್ಕಾರ ಸಿಂಗಾಪುರ ಭೇಟಿಗೆ ಅನುಮತಿ ನೀಡದ್ದಕ್ಕೆ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿತ್ತು. ಇದು ದೇಶಕ್ಕೆ ಅವಮಾನ ತಂದಿದೆ. ಪ್ರಯಾಣದ ವಿಧಿ ವಿಧಾನಗಳನ್ನು ಪೂರ್ಣಗೊಳಿಸಲು ಜುಲೈ 20 ಕೊನೆಯ ದಿನಾಂಕವಾಗಿದ್ದು, ಅದೀಗ ಮೀರಿ ಹೋಗಿದೆ. ಈಗಾಗಲೇ ಅನುಮತಿಗೆ ಅತ್ಯಂತ ವಿಳಂಬವಾಗಿದೆ ಎಂದು ದೆಹಲಿ ಸರ್ಕಾರ ಆಕ್ರೋಶ ವ್ಯಕ್ತಪಡಿಸಿತ್ತು. ಇದನ್ನೂ ಓದಿ: ಭಾರೀ ಬೆಂಕಿಗೆ ಹೊತ್ತಿ ಉರಿದ ಮುಂಬೈ ಶಾಪ್ – ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ
Advertisement
Advertisement
ಕೇಜ್ರಿವಾಲ್ ಅವರು ಸಿಂಗಾಪುರಕ್ಕೆ ಭೇಟಿ ನೀಡಿದರೆ, ಮುಂದೆ ದೇಶ ಅವಮಾನ ಎದುರಿಸಬೇಕಾಗುತ್ತದೆ ಎಂಬ ಭಯದಲ್ಲಿ ಕೇಂದ್ರ ಅವರ ಪ್ರಯಾಣಕ್ಕೆ ತಡೆಯೊಡ್ಡಿದೆ ಎಂದು ಕೇಜ್ರಿವಾಲ್ ನೇತೃತ್ವದ ಸರ್ಕಾರ ತಿಳಿಸಿದೆ. ಆದರೂ ಇದೀಗ ಕೇಜ್ರಿವಾಲ್ ತಾವೇ ಈ ವಿಚಾರವಾಗಿ ಯಾರನ್ನೂ ದೂಷಿಸಲ್ಲ ಎಂದಿದ್ದಾರೆ. ಇದನ್ನೂ ಓದಿ: ಗಿಫ್ಟ್ ಸಿಟಿಯಲ್ಲಿ ಭಾರತದ ಮೊದಲ ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ವಿನಿಮಯ ಕೇಂದ್ರಕ್ಕೆ ಚಾಲನೆ – ವಿಶೇಷತೆ ಏನು?