Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅವಮಾನ ಸಹಿಸುವಷ್ಟು ಚಿಕ್ಕವನಲ್ಲ – ಸ್ಯಾಂಡಲ್‌ವುಡ್‌ನಿಂದ ಅಸಹಕಾರದ ಬೆನ್ನಲ್ಲೇ ಸೋನು ನಿಗಮ್ ರಿಯಾಕ್ಷನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಅವಮಾನ ಸಹಿಸುವಷ್ಟು ಚಿಕ್ಕವನಲ್ಲ – ಸ್ಯಾಂಡಲ್‌ವುಡ್‌ನಿಂದ ಅಸಹಕಾರದ ಬೆನ್ನಲ್ಲೇ ಸೋನು ನಿಗಮ್ ರಿಯಾಕ್ಷನ್

Bollywood

ಅವಮಾನ ಸಹಿಸುವಷ್ಟು ಚಿಕ್ಕವನಲ್ಲ – ಸ್ಯಾಂಡಲ್‌ವುಡ್‌ನಿಂದ ಅಸಹಕಾರದ ಬೆನ್ನಲ್ಲೇ ಸೋನು ನಿಗಮ್ ರಿಯಾಕ್ಷನ್

Public TV
Last updated: May 5, 2025 6:33 pm
Public TV
Share
3 Min Read
sonu nigam 1
SHARE

– ಕಾನೂನು ಸುವ್ಯವಸ್ಥೆ, ಪೊಲೀಸ್ ಇಲಾಖೆ ಮೇಲೆ ನಂಬಿಕೆಯಿದೆ

ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್‌ಗೆ (Sonu Nigam) ಕನ್ನಡ ಸಿನಿಮಾಗಳಲ್ಲಿ ಹಾಡಿಸದಿರಲು ಫಿಲ್ಮ್ ಚೇಂಬರ್ ತೀರ್ಮಾನ ಕೈಗೊಂಡಿದೆ. ಈ ಬೆನ್ನಲ್ಲೇ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಗಾಯಕ, ಕಾನೂನು ಸುವ್ಯವಸ್ಥೆ, ಪೊಲೀಸ್ ಇಲಾಖೆ ಮೇಲೆ ನಂಬಿಕೆಯಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

sonu nigamಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕನ್ನಡದ ಹಾಡು ಹಾಡಿ ಎಂದಿದ್ದಕ್ಕೆ ಪಹಲ್ಗಾಮ್ ಉಗ್ರರ ಹೋಲಿಸಿದ ವಿಚಾರ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಸೋನು ನಿಗಮ್ ಸ್ಪಷ್ಟನೆ ನೀಡಿದ್ದಾರೆ.

ಇನ್ಸ್ಟಾಗ್ರಾಂ ಪೋಸ್ಟ್‌ನಲ್ಲಿ ರಿಯಾಕ್ಟ್ ಮಾಡಿ, ನಮಸ್ಕಾರ,
ಭಾಷೆ, ಸಂಸ್ಕೃತಿ, ಸಂಗೀತ, ಸಂಗೀತಗಾರರು, ಈ ರಾಜ್ಯ ಮತ್ತು ಜನರ ಮೇಲೆ ಅಪರೂಪದ ಪ್ರೀತಿ ಹರಿಸಿರುವೆ – ಅದು ನಾನು ಕರ್ನಾಟಕದಲ್ಲಿದ್ದಾಗ ಮಾತ್ರವಲ್ಲ, ನಾನು ಜಗತ್ತಿನ ಎಲ್ಲಿ ಇದ್ದರೂ ಸಹ. ನಿಜ ಹೇಳಬೇಕೆಂದರೆ, ನಾನು ನನ್ನ ಕನ್ನಡ ಹಾಡುಗಳನ್ನು ಹಿಂದಿ ಸೇರಿ ಇತರ ಭಾಷೆಗಳ ಹಾಡುಗಳಿಗಿಂತಲೂ ಹೆಚ್ಚು ಗೌರವದಿಂದ ನೋಡಿದ್ದೇನೆ. ಈ ಮಾತಿಗೆ ಸಾಕ್ಷಿಯಾಗಿ ನೂರಾರು ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ನಾನು ಪ್ರತಿ ಬಾರಿ ಕರ್ನಾಟಕದ ಕಾರ್ಯಕ್ರಮಕ್ಕೆ ಬಂದಾಗ ಒಂದು ಗಂಟೆಗಿಂತ ಹೆಚ್ಚು ಕನ್ನಡ ಹಾಡುಗಳನ್ನು ತಯಾರಿಸಿಕೊಂಡಿರುತ್ತೇನೆ. ಆದರೆ, ನಾನು ಇನ್ನೂ ಬಾಲಕನಲ್ಲ. ಯಾರಿಂದಲೂ ಅವಮಾನ ಸಹಿಸುವ ವಯಸ್ಸಿಲ್ಲ. ನನ್ನಗೀಗ 51 ವರ್ಷ, ಜೀವನದ ಅರ್ಧದಷ್ಟು ಹೆಜ್ಜೆ ಇಟ್ಟಿದ್ದೇನೆ. ನನ್ನ ಮಗನಷ್ಟು ಕಿರಿಯವನು ನನ್ನನ್ನು ಸಾವಿರಾರು ಜನರ ಮುಂದೆ ಭಾಷೆಯ ಹೆಸರಿನಲ್ಲಿ ಬೆದರಿಸಲು ಪ್ರಯತ್ನಿಸಲಾಗಿದೆ. ಅದು ಕನ್ನಡವೇ ಆಗಿರಲಿ, ನನ್ನ ಕೆಲಸದ ಪ್ರಕಾರ ಕನ್ನಡ ನನ್ನ ಎರಡನೇ ಭಾಷೆಯಾಗಿದೆ.

sonu nigamಅದು ಕೂಡ ನಾನು ಮೊದಲ ಹಾಡು ಹಾಡಿದ ತಕ್ಷಣವೇ ಕನ್ನಡ ಕನ್ನಡ ಎಂದು ಕೂಗಿದರು. ನಾನು ಅವರಿಗೆ ತುಂಬಾ ಶಾಂತಿಯುತವಾಗಿ, ಪ್ರೀತಿಯಿಂದ ಹೇಳಿದೆ, ಈಗ ಮಾತ್ರ ಕಾರ್ಯಕ್ರಮ ಪ್ರಾರಂಭವಾಗಿದೆ. ಇದು ನನ್ನ ಮೊದಲ ಹಾಡು. ನಾನು ನಿಮಗೆ ನಿರಾಸೆ ಉಂಟುಮಾಡಲ್ಲ, ಆದರೆ ನೀವು ನನಗೆ ಕಾರ್ಯಕ್ರಮವನ್ನು ನನ್ನ ಯೋಜನೆಯಂತೆ ಮುಂದುವರಿಸಲು ಅವಕಾಶ ನೀಡಬೇಕು. . ಪ್ರತಿಯೊಬ್ಬ ಕಲಾವಿದರು ಹಾಡಿನ ಪಟ್ಟಿಯನ್ನು ಸಿದ್ಧಪಡಿಸಿರುತ್ತಾರೆ, ಆದ್ದರಿಂದ ಸಂಗೀತಗಾರರು ಮತ್ತು ತಂತ್ರಜ್ಞರು ಸಿಂಕ್ ಆಗಿರುತ್ತಾರೆ. ಆದರೆ ಅವರು ಗದ್ದಲ ಸೃಷ್ಟಿಸಲು ನೋಡುತ್ತಿದ್ದರು. ಇಲ್ಲಿ ತಪ್ಪು ಯಾರು ಮಾಡಿದರು ಎಂಬುದನ್ನು ನೀವೇ ಹೇಳಿ ಎಂದು ಸೋನು ನಿಗಮ್ ಪ್ರಶ್ನಿಸಿದ್ದಾರೆ.

 

View this post on Instagram

 

A post shared by Sonu Nigam (@sonunigamofficial)

ನಾನು ದೇಶಭಕ್ತನಾಗಿದ್ದರಿಂದ, ಭಾಷೆ, ಜಾತಿ ಅಥವಾ ಧರ್ಮದ ಹೆಸರಿನಲ್ಲಿ ದ್ವೇಷ ಹುಟ್ಟಿಸುವವರನ್ನು ವಿರೋಧಿಸುತ್ತೇನೆ. ವಿಶೇಷವಾಗಿ ಪಹಲ್ಗಾಮ್‌ನಲ್ಲಿ ಸಂಭವಿಸಿದ ಘಟನೆಗಳನ್ನು ನೋಡಿದ ಬಳಿಕ. ನಾನು ಅವರಿಗೆ ಬುದ್ಧಿವಾದ ಹೇಳಬೇಕಾಯಿತು. ಆ ಘಟನೆಯ ಬಳಿಕ ಒಂದು ಗಂಟೆಗಿಂತ ಹೆಚ್ಚು ಕಾಲ ಕನ್ನಡ ಹಾಡುಗಳನ್ನು ಹಾಡಿದೆ. ಎಲ್ಲವೂ ಸಾಮಾಜಿಕ ಮಾಧ್ಯಮಗಳಲ್ಲಿ ಇದೆ. ಇಲ್ಲಿ ತಪ್ಪು ಯಾರದ್ದು ಎಂಬ ನಿರ್ಧಾರವನ್ನು ಕನ್ನಡದ ವಿವೇಕವಂತ ಜನತೆಗೆ ಬಿಟ್ಟುಬಿಡುತ್ತೇನೆ. ನೀವು ಯಾವ ತೀರ್ಪು ನೀಡಿದರೂ ನಾನು ಅದನ್ನು ಗೌರವದಿಂದ ಸ್ವೀಕರಿಸುತ್ತೇನೆ. ನಾನು ಕರ್ನಾಟಕದ ಕಾನೂನು ವ್ಯವಸ್ಥೆ ಮತ್ತು ಪೊಲೀಸ್ ಇಲಾಖೆಯ ಮೇಲೆ ಪೂರ್ಣ ಗೌರವ ಮತ್ತು ನಂಬಿಕೆ ಇಟ್ಟುಕೊಂಡಿದ್ದೇನೆ ಮತ್ತು ನನ್ನಿಂದ ನಿರೀಕ್ಷಿಸಬಹುದಾದ ಎಲ್ಲ ಸಹಕಾರವನ್ನು ನಾನು ನೀಡುತ್ತೇನೆ. ನಾನು ಕರ್ನಾಟಕದಿಂದ ದೈವಿಕ ಪ್ರೀತಿಯನ್ನು ಪಡೆದಿದ್ದೇನೆ ಮತ್ತು ನಿಮ್ಮ ತೀರ್ಪು ಏನೇ ಆಗಿರಲಿ, ಯಾವುದೇ ದ್ವೇಷವಿಲ್ಲದೆ ಅದನ್ನು ಸದಾ ಗೌರವದಿಂದ ಪಾಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಮೇ 2ರಂದು ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಕನ್ನಡ ಹಾಡು ಹೇಳಿ ಎಂದಿದ್ದಕ್ಕೆ, ಇದಕ್ಕೇನೇ ಪಹಲ್ಗಾಮ್ ದಾಳಿ ನಡೆದಿದ್ದು ಎಂದ ಸೋನು ನಿಗಮ್ ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿದ್ದರು.

TAGGED:bollywoodsandalwoodsonu nigamಬಾಲಿವುಡ್ಸೋನು ನಿಗಮ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema

You Might Also Like

Red Chilli
Districts

ಕ್ವಿಂಟಾಲ್ ಬ್ಯಾಡಗಿ ಮೆಣಸಿನಕಾಯಿಗೆ 89 ಸಾವಿರ – ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದಾಖಲೆಯ ದರಕ್ಕೆ ಮಾರಾಟ

Public TV
By Public TV
15 minutes ago
Prime Minister Modi inaugurates India AI Impact Expo 2026 at Bharat Mandapam
Latest

AI Impact Summit 2026 – ಜಾಗತಿಕ ಶೃಂಗಕ್ಕೆ ಮೋದಿ ಚಾಲನೆ

Public TV
By Public TV
27 minutes ago
Bidar ai camera
Bidar

ಆಟೋದಲ್ಲಿ ಮಹಿಳೆ ಕಳೆದುಕೊಂಡಿದ್ದ 29 ಸಾವಿರ ಪತ್ತೆಹಚ್ಚಿದ AI ಕ್ಯಾಮೆರಾ

Public TV
By Public TV
40 minutes ago
Karnataka State Budget 2025
Bengaluru City

ಮಾ.6 ರಂದು ಬಜೆಟ್‌ – ದಾಖಲೆ ಬರೆಯಲಿದ್ದಾರೆ ಸಿದ್ದರಾಮಯ್ಯ

Public TV
By Public TV
1 hour ago
Bengaluru Byadarahalli Robbery
Bengaluru City

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ

Public TV
By Public TV
1 hour ago
Head on collision between a scooty and a bike
Districts

ಸ್ಕೂಟಿ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ದಾರುಣ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?