ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ಖ್ಯಾತ ಗಾಯಕಿ ವಾಣಿ ಜಯರಾಂ ಸಾವು, ಅನೇಕ ಅನುಮಾನಗಳನ್ನು ಮೂಡಿಸಿತ್ತು. ತಾವು ವಾಸಿಸುತ್ತಿದ್ದ ಮನೆಯಲ್ಲಿ ಶವವಾಗಿ ಪತ್ತೆಯಾದ ಕಾರಣದಿಂದಾಗಿ ಮರಣೋತ್ತರ ಪರೀಕ್ಷೆಗಾಗಿ ಅವರ ದೇಹವನ್ನು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಂದ ನಂತರವಷ್ಟೇ ಅವರ ಸಾವಿನ ನಿಗೂಢ ಬಹಿರಂಗವಾಗಲಿದೆ. ಸ್ಥಳೀಯರ ಪ್ರಕಾರ ವಾಣಿ ಒಬ್ಬರೇ ಮನೆಯಲ್ಲಿ ವಾಸವಿದ್ದರಂತೆ. ಮನೆಗೆಲಸದಾಕೆ ಬಂದು ಬಾಗಿಲು ಬಡಿದಾಗ, ಬಾಗಿಲು ತೆರೆದಿಲ್ಲ. ಹಾಗಾಗಿ ಪಕ್ಕದ ಮನೆಯವರಿಗೆ ತಿಳಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
Advertisement
ಪೊಲೀಸರು ಬಂದು ಮನೆಯ ಬಾಗಿಲು ತೆರೆದಾಗ, ವಾಣಿ ಜಯರಾಂ ನೆಲಕ್ಕೆ ಉರುಳಿ ಬಿದ್ದಿದ್ದರು ಎಂದು ಹೇಳಲಾಗುತ್ತಿದೆ. ಅವರ ಹಣೆಗೂ ಗಾಯವಾಗಿದ್ದು, ಬಿದ್ದಿರುವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಬಿದ್ದಲ್ಲಿಯೇ ಅವರಿಗೆ ಹೃದಯಾಘಾತವಾಗಿದೆ ಎಂದು ಹೇಳಲಾಗುತ್ತಿದೆ. ಈ ಎಲ್ಲ ಅನುಮಾನಗಳಿಗೆ ಮರಣೋತ್ತರ ಪರೀಕ್ಷೆಯ ವರದಿಯೇ ಉತ್ತರವಾಗಲಿದೆ. ವಾಣಿ ಜಯರಾಂ ಒಬ್ಬರೇ ಚೆನ್ನೈನ ನುಂಗಂಬಾಕ್ಕಂನ ಹಡ್ಡೋಸ್ ರಸ್ತೆಯಲ್ಲಿರುವ ಮನೆಯಲ್ಲಿ ವಾಸವಿದ್ದರು. ಇದನ್ನೂ ಓದಿ:ರಾಮ್ ಚರಣ್ ಅದೃಷ್ಟವನ್ನೇ ಬದಲಿಸಿದ ಆರ್.ಆರ್.ಆರ್ ಚಿತ್ರ
Advertisement
Advertisement
ಕನ್ನಡವೂ ಸೇರಿದಂತೆ ಅನೇಕ ಭಾಷೆಗಳ ಚಿತ್ರಗಳಿಗೆ ಹಾಡಿದ ಹೆಗ್ಗಳಿಕೆ ಇವರದ್ದು. 1974ರಲ್ಲಿ ಪೋಷ್ಸುಮಂಗಲಿ ಚಿತ್ರದ ಮೂಲಕ ಗಾಯಕಿಯಾಗಿ ಸಿನಿಮಾ ರಂಗ ಪ್ರವೇಶಿಸಿದ್ದ ಅವರು ಹತ್ತು ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಈ ಗೀತೆಗಳಿಗಾಗಿಯೇ ಅವರಿಗೆ ಮೂರು ಬಾರಿ ರಾಷ್ಟ್ರ ಪ್ರಶಸ್ತಿ ಕೂಡ ಬಂದಿದೆ. ಮೊನ್ನೆಯಷ್ಟೇ ಕೇಂದ್ರ ಸರಕಾರ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿ ಪದ್ಮ ಭೂಷಣವನ್ನೂ ಘೋಷಿಸಿದೆ.
Advertisement
ಹುಟ್ಟಿದ್ದು ತಮಿಳುನಾಡಿನ ವೆಲ್ಲೋರ್ ನಲ್ಲಿ. ಬಾಲ್ಯದಿಂದಲೇ ಸಂಗೀತ ಅಭ್ಯಾಸ ಮಾಡಿದ್ದ ಅವರು, ನಂತರ ಮದ್ರಾಸ್ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದವರು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲೂ ಕೆಲಸ ಮಾಡಿದರು. ಮದುವೆಯ ನಂತರ ಮತ್ತು ಮುಂಬೈನಲ್ಲಿ ಅವರು ನೆಲೆಯೂರಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ತರಬೇತಿ ಪಡೆದರು. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಮರಾಠಿ, ಓಡಿಯಾ, ಗುಜರಾತಿ, ಬಂಗಾಳಿ ಸೇರಿದಂತೆ ಭಾರತೀಯ ನಾನಾ ಭಾಷೆಗಳ ಸಿನಿಮಾಗಳಿಗೆ ಹಾಡಿದ ಹೆಗ್ಗಳಿಕೆ ಇವರದ್ದು. ಕನ್ನಡದಲ್ಲಿ ಅನುಭವ, ರಣರಂಗ, ಶಿವ ಮೆಚ್ಚಿದ ಕಣ್ಣಪ್ಪ, ಒಲವಿನ ಉಡುಗೊರೆ, ಮಲಯ ಮಾರುತ ಸೇರಿದಂತೆ ಐವತ್ತಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಿವರಾಜ್ ಕುಮಾರ್, ಅನಂತ್ ನಾಗ್ ಸೇರಿದಂತೆ ಹೆಸರಾಂತ ಕಲಾವಿದರ ಚಿತ್ರಕ್ಕೆ ಹಾಡಿದ ಹೆಗ್ಗಳಿಕೆ ಇವರದ್ದು
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k