Connect with us

Corona

ದೇಶದಲ್ಲಿ 64,399 ಮಂದಿಗೆ ಕೊರೊನಾ- ಸೋಂಕಿತರ ಸಂಖ್ಯೆ 21 ಲಕ್ಷಕ್ಕೆ ಏರಿಕೆ

Published

on

ನವದೆಹಲಿ: ಚೀನಾದ ವೈರಸ್ ಕೋವಿಡ್ 19 ದೇಶದಲ್ಲಿ ವೇಗವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ 64,399 ಮಂದಿಗೆ ಕೋರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 21 ಲಕ್ಷದ ಗಡಿ ದಾಟಿದೆ.

ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟನ್ ಪ್ರಕಾರ, ಕಳೆದ 24 ಗಂಟೆಯಲ್ಲಿ 861 ಮಂದಿ ಮಹಾಮಾರಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಇದೂವರೆಗೂ ದೇಶದಲ್ಲಿ 43,379 ಮಂದಿ ಕೋವಿಡ್ 19 ನಿಂದ ಮೃತಪಟ್ಟಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 21,53,011ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 6,28,747 ಸಕ್ರಿಯ ಪ್ರಕರಣಗಳಿವೆ. 14,80,885 ಮಂದಿ ಗುಣಮುಖರಾಗಿದ್ದಾರೆ. ಕೊರೊನಾ ಹರಡುತ್ತಿದ್ದಂತೆಯೇ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ.

Click to comment

Leave a Reply

Your email address will not be published. Required fields are marked *