Connect with us

Corona

ಒಂದೇ ದಿನ 69,921 ಮಂದಿಗೆ ಕೊರೊನಾ- 28 ಸಾವಿರಕ್ಕೂ ಹೆಚ್ಚು ಮಂದಿ ಡಿಸ್ಚಾರ್ಜ್

Published

on

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದ್ದು, ಒಂದೇ ದಿನ 69,921 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 36,91,167ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 819 ಮಂದಿ ಕೋವಿಡ್ 19ಗೆ ಬಲಿಯಾಗಿದ್ದಾರೆ. ಸೋಂಕಿತರ ಪೈಕಿ 7,85,996 ಸಕ್ರಿಯ ಪ್ರಕರಣಗಳಿದ್ದು, 28,39,883 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಂದೇ ದಿನ 819 ಮಂದಿಯ ಬಲಿಯೊಂದಿಗೆ ಇಡೀ ದೇಶದಲ್ಲಿ 65,288 ಮಂದಿ ಮಹಾಮಾರಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನಿಡಿದೆ.

ದೇಶದಲ್ಲಿ ನಿನ್ನೆ ಒಂದೇ ದಿನ 10,16,920 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದೂವರೆಗೂ 4,33,24,834 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

Click to comment

Leave a Reply

Your email address will not be published. Required fields are marked *