Connect with us

Latest

ದೇಶದಲ್ಲಿ 42 ಲಕ್ಷ ದಾಟಿದ ಸೋಂಕಿತರ ಸಂಖ್ಯೆ- ಒಂದೇ ದಿನ 1,133 ಸಾವು

Published

on

ನವದೆಹಲಿ: ಮಹಾಮಾರಿ ಕೊರೊನ ವೈರಸ್ ದೇಶದಲ್ಲಿ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಇದೀಗ ದೇಶದಲ್ಲಿ ಸೋಂಕಿತರ ಸಂಖ್ಯೆ 42 ಲಕ್ಷದ ಗಡಿ ದಾಟಿದೆ.

ಕಳೆದ 24 ಗಂಟೆಯಲ್ಲಿ 75,809 ಮಂದಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 42,80,423ಕ್ಕೆ ಏರಿಕೆಯಾಗಿದೆ. ಒಂದೇ ದಿನ 1,133 ಮಂದಿ ಕೋವಿಡ್ 19ಗೆ ಬಲಿಯಾಗಿದ್ದಾರೆ.

42,80,423 ಸೋಂಕಿತರ ಸಂಖ್ಯೆಯಲ್ಲಿ 8,83,697 ಸಕ್ರಿಯ ಪ್ರಕರಣಗಳಿದ್ದು, 33,23,951 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದೂವರೆಗೂ 72,775 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ನಿನ್ನೆ ಒಂದೇ ದಿನ 10,98,621 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದೂವರೆಗೂ 5,06,50,128 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

Click to comment

Leave a Reply

Your email address will not be published. Required fields are marked *