ಗದಗ: ಟ್ರ್ಯಾಕ್ಟರ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂರು ಮಂದಿ ಸಾವನ್ನಪ್ಪಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಈ ಭೀಕರವಾದ ಅಪಘಾತ ಮುಂಡರಗಿ ತಾಲೂಕಿನ ಡಂಬಳ- ಮೇವುಂಡಿ ಬಳಿ ನಡೆದಿದೆ.
ಶಿವಾನಂದಯ್ಯ ಹಿರೇಮಠ(45), ತಾಯಿ ಅನಸೂಯಾ( 70), ಮಗಳು ಮನಸ್ವಿ(6) ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಪತ್ನಿ ಗಿರಿಜಾ ಸ್ಥಿತಿ ಚಿಂತಾಜನಕವಾಗಿದೆ. ಮೃತ ಹಾಗೂ ಗಾಯಾಳು ಹುಬ್ಬಳಿ ನವನಗರ ನಿವಾಸಿಗಳು ಎನ್ನಲಾಗುತ್ತಿದೆ. ವೇಗವಾಗಿ ಚಲಿಸುತ್ತಿದ್ದ ಕಾರ್, ಟ್ರ್ಯಾಕ್ಟರ್ ಹಿಂಬದಿಯಿಂದ ಡಿಕ್ಕಿ ಸಂಬವಿಸಿದ್ದು, ಕಾರ್‍ನಲ್ಲಿದ್ದ ಒಂದೇ ಕುಟುಂಬದ 3 ಜನ ಸ್ಥಳದಲ್ಲೇ ಸಾವನ್ನಪ್ಪಿದು, ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಇಂದು 247 ಕೊರೊನಾ ಕೇಸ್, 1 ಸಾವು
ಮೆಕ್ಕೆ ಜೋಳ ತುಂಬಿಕೊಂಡು ಮುಂಡರಗಿಯಿಂದ ಗದಗ ಕಡೆಗೆ ಬರುತ್ತಿತ್ತು. ಮುಂಡರಗಿ ತಾಲೂಕಿನ ಶಿಂಗಟಾಲೂರ ವೀರಭದ್ರೇಶ್ವರ ದೇವರಿಗೆ ಪೂಜೆ ಸಲ್ಲಿಸಿ, ಮರಳಿ ಹುಬ್ಬಳ್ಳಿಗೆ ಹೊರಟ್ಟಿದ್ದ ವೇಳೆ ದಾರಿ ಮಧ್ಯೆ ಈ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್‌ಗೆ ವೇಗವಾಗಿ ಚಲಿಸುತ್ತಿದ್ದ ಕಾರ್ ಹಿಂಬದಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರ್ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಗಂಭೀರ ಗಾಯಾಳು ಮಹಿಳೆ ಗಿರಿಜಾಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ವಾಯು ಮಾಲಿನ್ಯ ಹೆಚ್ಚಳದಿಂದ ಶಾಲಾ-ಕಾಲೇಜು ಬಂದ್ ಮಾಡಿದ ದೆಹಲಿ
ಈ ಕುರಿತು ಗದಗ ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇವರ ದರ್ಶನ ಮುಗಿಸಿ ಕುಟುಂಬಸ್ಥರು ಪ್ರಾಣ ಬಿಟ್ಟಿದ್ದಾರೆ.