ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಏಕವಚನದಲ್ಲಿ (ಆ ಪದವನ್ನು ಬರೆಯಲಾರೆ) ತುಚ್ಛವಾಗಿ ಸಂಬೋಧಿಸಿದ ಕೀಳು, ವಿಕೃತ, ಹೀನ ನಾಲಗೆಯ ಸಿದ್ದರಾಮಯ್ಯ (Siddaramaiah) ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ರಾಜ್ಯಪಾಲರು ಕೂಡಲೇ ವಜಾ ಮಾಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಆಗ್ರಹಿಸಿದ್ದಾರೆ.
ಎಕ್ಸ್ನಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, ಶನಿವಾರ ಚಾಮರಾಜನಗರದಲ್ಲಿ ಇದೇ ಸಿದ್ದರಾಮಯ್ಯನವರ ಸುಪುತ್ರ ಯತೀಂದ್ರ ಭಾಷಣ ಮಾಡುತ್ತಿದ್ದಾಗ ಯಾರೋ ಒಬ್ಬರು ಏಕವಚನದಲ್ಲಿ ಪ್ರಶ್ನಿಸಿದರೆಂಬ ಕಾರಣಕ್ಕೆ ಪೊಲೀಸರು ಆತನನ್ನು ಅಟ್ಟಾಡಿಸಿಕೊಂಡು ಹೋಗಿ ಬಂಧಿಸಿದ್ದಾರೆ. ಅಲ್ಲದೇ ದರದರನೇ ಎಳೆದುಕೊಂಡು ಹೋದರು. ಹಾಗಿದ್ದರೆ, ರಾಷ್ಟ್ರಪತಿಗಳನ್ನೇ ಏಕವಚನದಲ್ಲಿ ಸಂಬೋಧಿಸಿದ ಈ ಮುಖ್ಯಮಂತ್ರಿಗೇನು ಶಿಕ್ಷೆ ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಹೆಚ್ಡಿಕೆ ಸಹವಾಸ ಮಾಡಿದವರು ಉದ್ಧಾರ ಆದ ಇತಿಹಾಸವಿಲ್ಲ: ವೀರಪ್ಪ ಮೊಯ್ಲಿ
Advertisement
ಗೌರವಾನ್ವಿತ ರಾಷ್ಟ್ರಪತಿಗಳು, ದೇಶದ ಪ್ರಥಮ ಪ್ರಜೆ ಆಗಿರುವ ಶ್ರೀಮತಿ ದ್ರೌಪದಿ ಮುರ್ಮು @rashtrapatibhvn ಅವರನ್ನು ಏಕವಚನದಲ್ಲಿ (ಆ ಪದವನ್ನು ಬರೆಯಲಾರೆ) ಎಂದು ತುಚ್ಛವಾಗಿ ಸಂಬೋಧಿಸಿದ ಕೀಳು, ವಿಕೃತ, ಹೀನ ನಾಲಗೆಯ ಸಿದ್ದರಾಮಯ್ಯ @siddaramaiah ರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು.1/6 #ಆಚಾರಗೆಟ್ಟ_ಮುಖ್ಯಮಂತ್ರಿ pic.twitter.com/h6VCoT1B7Z
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 28, 2024
Advertisement
ಈ ಡೋಂಗಿ ಪ್ರಜಾಪ್ರಭುತ್ವವಾದಿಯ ಅಸಲಿ ಮುಖ ಕಳಚಿಬಿದ್ದಿದೆ. ಒಂದು ಕ್ಷಣವೂ ಮುಖ್ಯಮಂತ್ರಿ ಪದವಿಯಲ್ಲಿ ಇರಲು ಅವರು ಅರ್ಹರಲ್ಲ. ಕೂಡಲೇ ತಾವೆಸಗಿರುವ ಅಪಚಾರಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಅಥವಾ ಮಾನ್ಯ ರಾಜ್ಯಪಾಲರೇ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕಿತ್ತೆಸೆಯಬೇಕು. ಇದು ನನ್ನ ಆಗ್ರಹ ಎಂದು ಅವರು ಬರೆದುಕೊಂಡಿದ್ದಾರೆ.
Advertisement
ನಿನ್ನೆಯ ದಿನ ಚಾಮರಾಜನಗರದಲ್ಲಿ ಇದೇ ಸಿದ್ದರಾಮಯ್ಯನವರ ಸುಪುತ್ರ ಯತೀಂದ್ರ ಭಾಷಣ ಮಾಡುತ್ತಿದ್ದಾಗ ಯಾರೋ ಒಬ್ಬರು ಏಕವಚನದಲ್ಲಿ ಪ್ರಶ್ನಿಸಿದರೆಂಬ ಕಾರಣಕ್ಕೆ ಪೊಲೀಸರು ಆತನನ್ನು ಅಟ್ಟಾಡಿಸಿಕೊಂಡು ಹೋಗಿ ಬಂಧಿಸಿ ದರದರನೇ ಎಳೆದುಕೊಂಡು ಹೋದರು. ಹಾಗಿದ್ದರೆ, ರಾಷ್ಟ್ರಪತಿಗಳನ್ನೇ ಏಕವಚನದಲ್ಲಿ ಸಂಬೋಧಿಸಿದ ಈ ಮುಖ್ಯಮಂತ್ರಿಗೇನು ಶಿಕ್ಷೆ? 5/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 28, 2024
Advertisement
ಆಚಾರವಿಲ್ಲದ ನಾಲಿಗೆ, ನಿನ್ನ ನೀಚಬುದ್ಧಿಯ ಬಿಡು ನಾಲಿಗೆ ಎಂದು ದಾಸರು ಹೇಳಿದ್ದಾರೆ. ಸಿದ್ದರಾಮಯ್ಯಗೆ ಆಚಾರ ಹತ್ತಿರಕ್ಕೂ ಸುಳಿಯದ ವಿಚಾರ. ಶೋಷಿತ ಬುಡಕಟ್ಟು ಸಮುದಾಯದಿಂದ ಬಂದ ದೇಶದ ಮೊದಲ ರಾಷ್ಟ್ರಪತಿಗಳು, ಅದರಲ್ಲಿಯೂ ಮಹಿಳೆ, ಶೋಷಿತರ ಜಾಗೃತಿ ಸಮಾವೇಶದಲ್ಲೇ ಅವರಿಗೆ ಮುಖ್ಯಮಂತ್ರಿ ಅಪಮಾನ ಎಸಗಿದ್ದಾರೆ.
ವಕೀಲರಂತೆ, ಸ್ವಯಂಘೋಷಿತ ಸಂವಿಧಾನ ತಜ್ಞರಂತೆ, ನಾಚಿಕೆಯಾಗಬೇಕು ಇವರಿಗೆ. ಸಾರ್ವಜನಿಕ ವೇದಿಕೆಯಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಮುಖ್ಯಮಂತ್ರಿಯೊಬ್ಬರು ಸಂಬೋಧಿಸುವ ರೀತಿಯೇ ಇದು. ಸಿದ್ದರಾಮಯ್ಯನವರ ನಡವಳಿಕೆ ಕರ್ನಾಟಕಕ್ಕೆ ಅಂಟಿದ ಅಳಿಸಲಾಗದ ಕಳಂಕ. ಅವರ ಈ ಕೀಳುಮಾತು ದೇಶಕ್ಕೆ, ಸಂವಿಧಾನಕ್ಕೆ ಆಗಿರುವ ಘೋರ ಅಪಚಾರ ಎಂದಿದ್ದಾರೆ.
ಮಾತೆತ್ತಿದರೆ ಸಂವಿಧಾನ, ಪ್ರಜಾಪ್ರಭುತ್ವ, ವಕೀಲಿಕೆ ನಮ್ಮಪ್ಪನ ಮನೆ ಆಸ್ತಿ ಎಂದು ಜಾಗಟೆ ಹೊಡೆಯುವ ಸಿದ್ದರಾಮಯ್ಯನವರು ಮಾನ, ಮರ್ಯಾದೆ, ಮಹಿಳೆಯರ ಮೇಲೆ ಗೌರವ ಏನಾದರೂ ಇಟ್ಟುಕೊಂಡಿದ್ದರೆ, ಈ ಕ್ಷಣದಲ್ಲಿಯೇ ಸಿಎಂ ಕುರ್ಚಿಯನ್ನು ಖಾಲಿ ಮಾಡಬೇಕು ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರದ ಅಮಲಿನಲ್ಲಿ ಹೀಗೆಲ್ಲ ಆಡ್ತಿದೆ: ಹನುಮಧ್ವಜ ತೆರವು ವಿಚಾರಕ್ಕೆ ಬಿವೈವಿ ಕಿಡಿ