ಬೀದರ್: ಭ್ರೂಣ ಹತ್ಯೆ (Foeticide) ಮಾಡಿ ರಸ್ತೆ ಬದಿಯಲ್ಲಿ ಎಸೆದ ಹೃದಯ ವಿದ್ರಾವಕ ಘಟನೆ ಬೀದರ್ (Bidar) ಜಿಲ್ಲೆಯ ಹುಲಸೂರು (Hulsur) ತಾಲೂಕಿನ ಗುತ್ತಿ ಗ್ರಾಮದಲ್ಲಿ ನಡೆದಿದೆ.
ಭ್ರೂಣ ಹತ್ಯೆ ಮಾಡಿ ಗುತ್ತಿ ಗ್ರಾಮದ ರಸ್ತೆ ಬದಿಯಲ್ಲಿ ಅದನ್ನು ಬಿಸಾಡಿದ್ದು, ತಾಯಿಯ ಹೊಟ್ಟೆಯಲ್ಲಿದ್ದ ಮಗುವಿಗೆ ಕೇವಲ 4 ತಿಂಗಳು ಆಗಿರಬಹುದು ಎಂದು ಊಹಿಸಲಾಗಿದೆ. ಅಲ್ಲದೇ ಈ ಭ್ರೂಣ ಹೆಣ್ಣು ಮಗು ಎಂದು ಹೇಳಲಾಗುತ್ತಿದ್ದು, ಕೂಡಲೇ ಅದನ್ನು ಹುಲಸೂರು ನಗರದ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದನ್ನೂ ಓದಿ: ಪ್ರೀತಿಸಿದ ಯುವತಿ ಕೈಕೊಟ್ಟಿದ್ದಕ್ಕೆ ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ
ವಿಷಯ ತಿಳಿದ ಕೂಡಲೇ ಹುಲಸೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಪತ್ನಿ, ಸೋದರಳಿಯನಿಗೆ ಗುಂಡು ಹಾರಿಸಿ ಆತ್ಮಹತ್ಯೆಗೆ ಶರಣಾದ ಎಸಿಪಿ
Web Stories