ಬೆಂಗಳೂರು: ಬೆಂಗಳೂರು (Bengaluru) ಹೊರವಲಯದ ಜಿಗಣಿ (Jigani) ಸಮೀಪದ ಕಲ್ಲುಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ SIR ಪ್ರಕ್ರಿಯೆಯು ತೀವ್ರ ಗೊಂದಲಕ್ಕೆ ಕಾರಣವಾಗಿದ್ದು, ಕಚೇರಿಗಳಿಗೆ ಅಲೆದಾಡಿ ಬೇಸತ್ತ ಸಾರ್ವಜನಿಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಹೌದು, ಈಗಾಗಲೇ ಎಸ್‌ಐಆರ್ (SIR) ಪ್ರಕ್ರಿಯೆ ಪೂರ್ಣಗೊಳಿಸಿ, ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದರೂ ಸಹ `ನಿಮ್ಮ ವೋಟರ್ ಐಡಿ ಕ್ಯಾನ್ಸಲ್ ಆಗಿದೆ’ ಎಂದು ಸಾರ್ವಜನಿಕರಿಗೆ ನೋಟಿಸ್ ಕಳುಹಿಸಲಾಗಿದೆ. ಸರ್ಕಾರ ನೀಡಿದ ಆಧಾರ್ ಕಾರ್ಡ್, ವೋಟರ್ ಐಡಿ ಸೇರಿದಂತೆ ಹತ್ತಾರು ಅಧಿಕೃತ ದಾಖಲೆಗಳನ್ನು ತೋರಿಸಿದರೂ ಅಧಿಕಾರಿಗಳು ಅವುಗಳನ್ನು ಪರಿಗಣಿಸಲು ನಿರಾಕರಿಸುತ್ತಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಜೊತೆಗೆ 71 ವರ್ಷದ ಹಿರಿಯ ನಾಗರಿಕರಿಗೂ ಮಾರ್ಕ್ಸ್ ಕಾರ್ಡ್ ಹಾಗೂ ಜನ್ಮ ಪ್ರಮಾಣ ಪತ್ರ ತರಲು ಅಧಿಕಾರಿಗಳು ಪಟ್ಟು ಹಿಡಿದಿದ್ದು, ಈ ಇಳಿ ವಯಸ್ಸಿನಲ್ಲಿ ಎಲ್ಲಿಂದ ತರುವುದು ಎಂದು ಹಿರಿಯ ನಾಗರಿಕರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ದಾಳಿ ಬಳಿಕ ಫಸ್ಟ್ ಟೈಮ್ – ಪಾಕಿಸ್ತಾನಕ್ಕೆ ಕ್ರೀಡಾಪಟುಗಳನ್ನ ಕಳಿಸಲು ಭಾರತ ಒಪ್ಪಿಗೆ?
ಇನ್ನು ಮತ್ತೊಬ್ಬ ನಿವಾಸಿ ಮಾತನಾಡಿ ನಾನು ಕರ್ನಾಟಕದಲ್ಲೇ ಹುಟ್ಟಿ ಬೆಳೆದ ನಿವಾಸಿಯಾಗಿದ್ದೇನೆ. ಆದರೆ ಈಗ ನನ್ನ ವಿಳಾಸ ತಮಿಳುನಾಡಿಗೆ ಬದಲಾಗಿದೆ ಎಂದು ಬಿಎಲ್‌ಒ ಹಾಗೂ ಅಧಿಕಾರಿಗಳು ಹೇಳುತ್ತಿದ್ದಾರೆ. ಅಧಿಕಾರಿಗಳೇ ಎಡವಟ್ಟು ಮಾಡಿದ್ದಾರೆ. ಅಷ್ಟೇ ಅಲ್ಲದೆ, ತಮಿಳುನಾಡಿನಲ್ಲಿ ವಿಳಾಸ ರದ್ದು ಮಾಡಿಕೊಂಡು ಬನ್ನಿ ಎಂದು ನಿವಾಸಿಗಳಿಗೆ ಹೇಳುತ್ತಿದ್ದಾರೆ. ನಾವು ಎಲ್ಲಿ ಅಂತ ಹೋಗುವುದು, ದಯಮಾಡಿ ಚುನಾವಣಾ ಆಯೋಗ ಇದರ ಬಗ್ಗೆ ಪರಿಶೀಲನೆ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ SIR ನೋಟಿಸ್ ನೀಡಿ ಕ್ಷಮೆ ಕೇಳಿದ ಅಧಿಕಾರಿ
ಇನ್ನು ಕೆಲಸದ ನಿಮಿತ್ತ ಹೊರದೇಶದಲ್ಲಿರುವವರಿಗೆ ಸೂಕ್ತ ಕಾಲಾವಕಾಶ ನೀಡದೆ, ನಿಗದಿಪಡಿಸಿದ ಸಮಯದಲ್ಲೇ ಎಸ್‌ಐಆರ್ ಮುಗಿಸಿಕೊಳ್ಳಬೇಕು ಎಂದು ಅಧಿಕಾರಿಗಳು ಕಟ್ಟುನಿಟ್ಟಿನ ನಿಯಮ ಹೇರಿದ್ದಾರೆ. ಅಧಿಕಾರಿಗಳು ಮತ್ತು ಬಿಎಲ್‌ಒಗಳು ಮಾಡಿದ ತಪ್ಪಿಗೆ ನಾವೇಕೆ ಶಿಕ್ಷೆ ಅನುಭವಿಸಬೇಕು ಎಂದು ಕಲ್ಲುಬಾಳು ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಅಡಿಷನಲ್ ಎಇಆರ್‌ಒ ನಾರಾಯಣಪ್ಪ ಹಾಗೂ ಸ್ಥಳೀಯ ಅಧಿಕಾರಿಗಳಿಗೆ ಸಾರ್ವಜನಿಕರು ಸ್ಥಳದಲ್ಲೇ ತೀವ್ರ ತರಾಟೆಗೆ ತೆಗೆದುಕೊಂಡರು. ಸರ್ಕಾರ ನೀಡಿರುವ ದಾಖಲೆಗಳನ್ನು ಪರಿಗಣಿಸುವುದಾದರೆ ಪರಿಗಣಿಸಿ, ಇಲ್ಲವಾದರೆ ನಿಮ್ಮ ವೋಟರ್ ಐಡಿಯೇ ನಮಗೆ ಬೇಡ ಎಂದು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇದಕ್ಕೆ ಸೂಕ್ತ ಪರಿಹಾರ ಕೊಡಬೇಕು. ಇಲ್ಲಾಂದ್ರೆ ನಮಗೆ ಮತದಾನದ ಹಕ್ಕು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ 7.5% ಮೀಸಲಾತಿ – ಕರಡು ನಿಯಮ ಪ್ರಕಟ
